ಜಮ್ಮು-ಕಾಶ್ಮೀರದ ದುರ್ಗಮ ಪ್ರದೇಶದ ಹಳ್ಳಿಯಲ್ಲಿ ಮೇಘಸ್ಫೋಟ; ನಾಲ್ವರು ಸಾವು, 30ಕ್ಕೂ ಹೆಚ್ಚು ಜನ ನಾಪತ್ತೆ

Cloudburst : ಜಮ್ಮುವಿನ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿದೆ. ಜುಲೈ ಅಂತ್ಯದವರೆಗೂ ಇಲ್ಲಿ ಹೆಚ್ಚಿನ ಮಳೆಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜಮ್ಮು-ಕಾಶ್ಮೀರದ ದುರ್ಗಮ ಪ್ರದೇಶದ ಹಳ್ಳಿಯಲ್ಲಿ ಮೇಘಸ್ಫೋಟ; ನಾಲ್ವರು ಸಾವು, 30ಕ್ಕೂ ಹೆಚ್ಚು ಜನ ನಾಪತ್ತೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Jul 28, 2021 | 10:30 AM

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್​ ಜಿಲ್ಲೆಯ ದುರ್ಗಮ ಪ್ರದೇಶದಲ್ಲಿರುವ ಹಳ್ಳಿಯಲ್ಲಿ ಮೇಘಸ್ಫೋಟ ಉಂಟಾಗಿದ್ದು ನಾಲ್ವರು ಮೃತಪಟ್ಟಿದ್ದಾರೆ ಹಾಗೂ 30ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 8 ಮನೆಗಳು ಕೊಚ್ಚಿಕೊಂಡು ಹೋಗಿವೆ. ಇಂದು (ಬುಧವಾರ) ಮುಂಜಾನೆ ಡಚ್ಚನ್ ತಹಸಿಲ್​ ಪ್ರದೇಶದಲ್ಲಿರುವ ಹೊಂಝಾರ್​ ಎಂಬ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಈ ಹಳ್ಳಿಗೆ ರಸ್ತೆ ಸಂಪರ್ಕವೂ ಇಲ್ಲ.

ಘಟನೆ ಬಗ್ಗೆ ಇಂಡಿಯಾ ಟುಡೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಕಿಶ್ತ್ವಾರ್​ ಜಿಲ್ಲೆಯ ಜಿಲ್ಲಾಧಿಕಾರಿ, ಗ್ರಾಮದಲ್ಲಿ ರಸ್ತೆ ಸಂಪರ್ಕವಿಲ್ಲ. ಇದೀಗ ಸೇನಾ ಸಿಬ್ಬಂದಿ ಮತ್ತು ಪೊಲೀಸ್​ ತಂಡ ಅಲ್ಲಿನ ಜನರ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಜಮ್ಮುವಿನ ಅನೇಕ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದಲೂ ಸಿಕ್ಕಾಪಟೆ ಮಳೆಯಾಗುತ್ತಿದೆ. ಜುಲೈ ಅಂತ್ಯದವರೆಗೂ ಇಲ್ಲಿ ಹೆಚ್ಚಿನ ಮಳೆಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಕಿಶ್ತ್ವಾರದಲ್ಲಿ, ನದಿ, ನಾಲೆಗಳೆಲ್ಲ ತುಂಬಿ ಹರಿಯುತ್ತಿದ್ದು, ಜಲಪ್ರದೇಶದ ಸುತ್ತಮುತ್ತ ವಾಸಿಸುತ್ತಿರುವವರು ಆದಷ್ಟು ಸುರಕ್ಷಿತ ಪ್ರದೇಶಗಳಿಗೆ ಹೋಗಿ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: Basavaraj Bommai: ಸಿಎಂ ಆಗಿ ಬಸವರಾಜ ಬೊಮ್ಮಾಯಿ; ರೇಸ್​ನಲ್ಲಿದ್ದ ಇತರರು ಹಿಂದೆ ಬಿದ್ದದ್ದೆಲ್ಲಿ?

4 people killed over 30 were reported missing after a cloudburst in Jammu Kashmir

Published On - 9:30 am, Wed, 28 July 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ