ಭಾರತದಲ್ಲಿ ಹಲವಾರು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ; ಬಿಗಿ ಭದ್ರತೆ

|

Updated on: Jun 18, 2024 | 8:08 PM

ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ ಆದರೆ ಇದುವರೆಗೆ ಯಾವುದೇ ಅನುಮಾನಾಸ್ಪದವಾದದು ಯಾವುದೂ ಕಂಡುಬಂದಿಲ್ಲ" ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ, ಪಾಟ್ನಾ ವಿಮಾನ ನಿಲ್ದಾಣದಲ್ಲಿ ಹಲವು ಇಮೇಲ್‌ಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ

ಭಾರತದಲ್ಲಿ ಹಲವಾರು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ; ಬಿಗಿ ಭದ್ರತೆ
ಪಾಟ್ನಾ ವಿಮಾನ ನಿಲ್ದಾಣದಲ್ಲಿ ತಪಾಸಣೆ
Follow us on

ದೆಹಲಿ ಜೂನ್ 18: ಮುಂಬೈ, ಜೈಪುರ ಮತ್ತು ಪಾಟ್ನಾ ವಿಮಾನ ನಿಲ್ದಾಣಗಳು (Patna airports) ಸೇರಿದಂತೆ ದೇಶದ 40 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಇಮೇಲ್​​ಗಳು (bomb threat mails )ಬಂದಿವೆ ಎಂದು ಮೂಲಗಳು ತಿಳಿಸಿವೆ. ಟಿವಿ 9 ನೆಟ್‌ವರ್ಕ್‌ನ ಮೂಲಗಳ ಪ್ರಕಾರ, ಇತರ ನಗರಗಳ ಜೊತೆಗೆ ಜೈಪುರದಲ್ಲಿ (Jaipur) ವಿಮಾನ ನಿಲ್ದಾಣವನ್ನು ಸ್ಫೋಟಿಸಲು ಇಮೇಲ್ ಬಂದಿದೆ. ಬೆದರಿಕೆ ಇಮೇಲ್ ಸ್ವೀಕರಿಸಿದ ನಂತರ ಭದ್ರತೆಯನ್ನು ಬಿಗಿಗೊಳಿಸಲಾಯಿತು, ನಂತರ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಲಾಯಿತು.

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಕೆಲವು ಕಿಡಿಗೇಡಿಗಳು ಬೆದರಿಕೆ ಮೇಲ್ ಕಳುಹಿಸಿದ್ದಾರೆ. ಇಮೇಲ್ ಕಳುಹಿಸಿದ್ದಾರೆ ಎಂದು ನಂಬಲಾದ ವ್ಯಕ್ತಿಗೆ ಐಪಿ ವಿಳಾಸದ ಮೂಲಕ ಲುಕ್ ಔಟ್ ನೋಟಿಸ್ ಕಳುಹಿಸಲಾಗಿದೆ. “ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ ಆದರೆ ಇದುವರೆಗೆ ಯಾವುದೇ ಅನುಮಾನಾಸ್ಪದವಾದದು ಯಾವುದೂ ಕಂಡುಬಂದಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ, ಪಾಟ್ನಾ ವಿಮಾನ ನಿಲ್ದಾಣದಲ್ಲಿ ಹಲವು ಇಮೇಲ್‌ಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ.

‘ಬಾಂಬ್ ಬೆದರಿಕೆಗಳು ನಿರ್ದಿಷ್ಟವಾಗಿಲ್ಲ’

“ಜಯಪ್ರಕಾಶ್ ನಾರಾಯಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಜೊತೆಗೆ 41 ಇತರ ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿ (ಬಿಟಿಎಸಿ) ಸಭೆಯನ್ನು ಕರೆಯಲಾಗಿದೆ. ಬೆದರಿಕೆಯು ನಿರ್ದಿಷ್ಟವಾಗಿಲ್ಲ ಎಂದು ಅದು ಕಂಡುಹಿಡಿದಿದೆ ಎಂದು ಪಾಟ್ನಾ ವಿಮಾನ ನಿಲ್ದಾಣದ ನಿರ್ದೇಶಕ ಅಂಚಲ್ ಪ್ರಕಾಶ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಮಧ್ಯಾಹ್ನ 1.10 ರ ಸುಮಾರಿಗೆ ಸ್ವೀಕರಿಸಿದ ಇಮೇಲ್‌ನಲ್ಲಿ ಬಾಂಬ್ ಬೆದರಿಕೆ ಇತ್ತು. ಬೆಳವಣಿಗೆಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಪ್ರಯಾಣಿಕರ ಸುರಕ್ಷತೆಯಲ್ಲಿ ರಾಜಿಯಿಲ್ಲ; ಕಾಯ್ದಿರಿಸಿದ ಬೋಗಿಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುವುದಕ್ಕೆ ಸಚಿವ ಕಳವಳ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಹುಸಿ ಕರೆ

ಹಿಂದಿನ ದಿನ, ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ 286 ಪ್ರಯಾಣಿಕರನ್ನು ಹೊತ್ತ ದುಬೈಗೆ ಹೊರಡುವ ವಿಮಾನವು ಹುಸಿ ಬಾಂಬ್ ಬೆದರಿಕೆಯಿಂದಾಗಿ ವಿಳಂಬವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ಭದ್ರತಾ ಸಂಸ್ಥೆಗಳು ಅಂತರಾಷ್ಟ್ರೀಯ ವಿಮಾನದ ಸಂಪೂರ್ಣ ತಪಾಸಣೆ ನಡೆಸಿದ್ದವು. ಬೆಳಗ್ಗೆ 10.30ಕ್ಕೆ ವಿಮಾನ ಹೊರಡಬೇಕಿತ್ತು. ತಪಾಸಣೆಯಲ್ಲಿ ಬೆದರಿಕೆ ಸುಳ್ಳು ಎಂದು ತಿಳಿದುಬಂದಿದೆ, ನಂತರ ವಿಮಾನವನ್ನು ಅದರ ಗಮ್ಯಸ್ಥಾನಕ್ಕೆ ಹಾರಲು ಅನುಮತಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ