ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ರೈತರ ಪ್ರತಿಭಟನೆ; 40 ರೈಲು ರದ್ದು
Farmer Protests: ರೈತ ಪ್ರತಿಭಟನೆಗಳಿಂದಾಗಿ 40 ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು 21 ರೈಲುಗಳನ್ನು ಜನರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣದಿಂದಲೇ ನಿಲ್ಲಿಸಲಾಗಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಕಾಯ್ದಿರಿಸಿದ ಎಲ್ಲರಿಗೂ ಮರುಪಾವತಿ ಮಾಡಲಾಗುತ್ತದೆ.
ದೆಹಲಿ: ಉತ್ತರ ಪ್ರದೇಶದ ಮೊರಾದಾಬಾದ್‌ನ ರೈಲ್ವೆ ಹಳಿಯ ಮೇಲೆ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಂಗಳವಾರ 40 ರೈಲುಗಳನ್ನು ರದ್ದುಗೊಳಿಸಲಾಗಿದೆ. ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಮೊರಾದಾಬಾದ್ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ (ಡಿಸಿಎಂ) ಸುಧೀರ್ ಸಿಂಗ್, ಟಿಕೆಟ್ ಕಾಯ್ದಿರಿಸಿದ ಎಲ್ಲರಿಗೂ ಮರುಪಾವತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ರೈತ ಪ್ರತಿಭಟನೆಗಳಿಂದಾಗಿ 40 ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು 21 ರೈಲುಗಳನ್ನು ಜನರ ಸುರಕ್ಷತೆಯ ದೃಷ್ಟಿಯಿಂದ ತಕ್ಷಣದಿಂದಲೇ ನಿಲ್ಲಿಸಲಾಗಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಕಾಯ್ದಿರಿಸಿದ ಎಲ್ಲರಿಗೂ ಮರುಪಾವತಿ ಮಾಡಲಾಗುತ್ತದೆ. ಟಿಕೆಟ್ ಖರೀದಿಸಿದ ಎಲ್ಲರಿಗೂ ಕೌಂಟರ್‌ನಲ್ಲಿಯೂ ಮರುಪಾವತಿ ಸಿಗುತ್ತದೆ ಮತ್ತು ಅವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತಿದೆ “ಎಂದು ಸಿಂಗ್ ಹೇಳಿದ್ದಾರೆ.
ಈ ರೈಲುಗಳ ರದ್ದತಿಯಿಂದ ಪ್ರಯಾಣಿಕರು ಪರದಾಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ತಮ್ಮ ಕುಟುಂಬವನ್ನು ತುರ್ತಾಗಿ ಭೇಟಿ ಮಾಡಲು ಬಯಸಿದ್ದರು ಆದರೆ ಅವರ ರೈಲು ರದ್ದಾದ ಕಾರಣ ಅದನ್ನು ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.
ಹೊಸದಾಗಿ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ತಿಂಗಳುಗಳಿಂದ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಬಡ್ತಿ ಮತ್ತು ಸೌಲಭ್ಯ) ಕಾಯ್ದೆ, 2020, ರೈತರ ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯಿದೆ 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ, 2020 ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ‘ತಕ್ಕ ಉತ್ತರ ಕೊಡುತ್ತೇವೆ’ ಎಂಬ ವಿಡಿಯೊ ಟ್ವೀಟ್ ಮೂಲಕ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿದ ನಾರಾಯಣ್ ರಾಣೆ ಪುತ್ರ
ಇದನ್ನೂ ಓದಿ: Covid 22: ಕೊವಿಡ್ 19 ಹತೋಟಿಗೆ ಬರುವ ಮುನ್ನವೇ ಶುರುವಾಯ್ತು ಕೊವಿಡ್ 22 ರ ಆತಂಕ; ದಯವಿಟ್ಟು ನಿರ್ಲಕ್ಷಿಸಬೇಡಿ ಎಂದ ತಜ್ಞರು
(40 trains were cancelled wake of farmer protests on the railway track in Moradabad)