ಗುಜರಾತ್: 16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ 41ರ ಹರೆಯದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ

|

Updated on: Jun 08, 2023 | 2:42 PM

ಆರೋಗ್ಯಕರ ಕೆಲಸ-ಜೀವನದ ಸಮತೋಲನವನ್ನು ಕಾಪಾಡಿಕೊಳ್ಳುತ್ತಿದ್ದ ಗಾಂಧಿ, ಫಿಟ್‌ನೆಸ್ ಉತ್ಸಾಹಿ ಮಾತ್ರವಲ್ಲದೆ ರೋಗಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬುವ ಕೆಲಸ ಮಾಡುತ್ತಿದ್ದರು.

ಗುಜರಾತ್: 16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ 41ರ ಹರೆಯದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಡಾ.ಗೌರವ್ ಗಾಂಧಿ
Follow us on

ಗುಜರಾತ್‌ನ ಜಾಮ್‌ನಗರ ನಗರದಲ್ಲಿ 16,000 ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗಳನ್ನು (surgeries) ಮಾಡಿದ್ದ 41ರ ಹರೆಯದ ಪ್ರಸಿದ್ಧ ಹೃದ್ರೋಗ ತಜ್ಞ ಡಾ ಗೌರವ್ ಗಾಂಧಿ (Dr Gaurav Gandhi) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೌರವ್ ಗಾಂಧಿ ಅವರು ಫೇಸ್‌ಬುಕ್‌ನಲ್ಲಿ ‘ಹಾಲ್ಟ್ ಹಾರ್ಟ್ ಅಟ್ಯಾಕ್ಸ್’ (Halt Heart Attacks) ಅಭಿಯಾನ ಮೂಲಕ ಹೃದಯರಕ್ತನಾಳದ ಕಾಯಿಲೆಗಳ ವಿರುದ್ಧ ಜಾಗೃತಿ ಮತ್ತು ತಡೆಗಟ್ಟುವ ಕ್ರಮಗಳನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಿದ್ದರು. ಇವರು ತಮ್ಮ ಸುಪ್ರಸಿದ್ಧ ವೈದ್ಯಕೀಯ ವೃತ್ತಿಜೀವನದಲ್ಲಿ 16,000 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದರಿಂದ ಸಾವಿರಾರು ರೋಗಿಗಳ ಜೀವನದ ಮೇಲೆ ಮಹತ್ವದ ಪ್ರಭಾವ ಬೀರಿದ್ದರು. ಆರೋಗ್ಯಕರ ಕೆಲಸ-ಜೀವನದ ಸಮತೋಲನವನ್ನು ಕಾಪಾಡಿಕೊಳ್ಳುತ್ತಿದ್ದ ಗಾಂಧಿ, ಫಿಟ್‌ನೆಸ್ ಉತ್ಸಾಹಿ ಮಾತ್ರವಲ್ಲದೆ  ರೋಗಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬುವ ಕೆಲಸ ಮಾಡುತ್ತಿದ್ದರು.

ಅವರು ಹೆಚ್ಚಿನ ಸಂಖ್ಯೆಯ ಹೃದಯ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದಾರೆ ಎಂದು ಅವರು ಕೆಲಸ ಮಾಡುತ್ತಿದ್ದ ಗುರು ಗೋವಿಂದಸಿಂಹ ಸರ್ಕಾರಿ ಆಸ್ಪತ್ರೆಯ ಡಾ. ಹೆಚ್ ಕೆ ವಾಸವಾಡ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಹೃದ್ರೋಗ ತಜ್ಞ ಗಾಂಧಿ ಅವರು ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇಂತಹ ಧೀಮಂತ ಯುವ ವೈದ್ಯ ನಮ್ಮೊಂದಿಗಿಲ್ಲದಿರುವುದು ಜಾಮ್‌ನಗರದ ವೈದ್ಯಲೋಕಕ್ಕೆ ಅತೀವ ಆಘಾತ ಮತ್ತು ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಡಾ ವಾಸವಾಡ ಹೇಳಿದರು.

ಗಾಂಧಿ, ಸೋಮವಾರ ರಾತ್ರಿ ಖಾಸಗಿ ಶಾರದಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿದ ನಂತರ ಮನೆಗ ಬಂದು ರಾತ್ರಿಯ ಊಟ ಮುಗಿಸಿ ಮಲಗಲು ಹೋಗಿದ್ದರು. ಮರುದಿನ ಬೆಳಗ್ಗೆ ಕುಟುಂಬವರು ಪ್ರಜ್ಞೆ ತಪ್ಪಿ ಬಿದ್ದಿರುವುದನ್ನು ಕಂಡು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ನಂತರ ಅವರನ್ನು ಜಿಜಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದು ಪ್ರಾಣ ಉಳಿಸಲು ಸಾಧ್ಯವಾಗಿಲ್ಲ ಸಾವಿಗೆ ಹೃದಯಾಘಾತ ಕಾರಣ ಎಂದು ತಿಳಿದುಬಂದಿದೆ ಎಂದು ಕುಟುಂಬದ ಮೂಲಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಕೆಲವು ಮಾರ್ಗಗಳಲ್ಲಿ ವಿಮಾನ ದರ ಶೇ.61ರಷ್ಟು ಇಳಿಕೆ: ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

ಡಾ.ಗಾಂಧಿ ಅವರು ತಮ್ಮ ವೃದ್ಧ ತಂದೆ ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. 1982 ರಲ್ಲಿ ಜನಿಸಿದ ಡಾ ಗಾಂಧಿ ಅವರು ಹೆಸರಾಂತ ಹೃದಯ ಶಸ್ತ್ರಚಿಕಿತ್ಸಕರಾಗಿದ್ದರು. ಅವರು ನೂರಾರು ಆಂಜಿಯೋಗ್ರಫಿ ಕಾರ್ಯವಿಧಾನ ಮತ್ತು ಶಸ್ತ್ರಚಿಕಿತ್ಸೆಗಳನ್ನು ಮಾಡಿ ಯಶಸ್ವಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Thu, 8 June 23