ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದವನೊಂದಿಗೆ 20 ನಿಮಿಷ ಕಾದಾಡಿ, ನಂತರ ಆತನ ಗುಪ್ತಾಂಗವನ್ನೇ ಕತ್ತರಿಸಿದ ಮಹಿಳೆ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Mar 20, 2021 | 4:04 PM

ಸಿಧಿ: ಮಹಿಳೆಯೊಬ್ಬರು, ತನ್ನ ಮೇಲೆ ಅತ್ಯಾಚಾರ ಮಾಡಲು ಬಂದವನ ಗುಪ್ತಾಂಗವನ್ನೇ ಕತ್ತರಿಸಿಹಾಕಿದ್ದಾರೆ. ಈ ಮಹಿಳೆಗೆ 45 ವರ್ಷ. ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಉಮಾರಿಹಾ ಗ್ರಾಮದಲ್ಲಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮನೆಯೊಳಗೆ ನುಗ್ಗಿ ರೇಪ್​ ಮಾಡಲು ಪ್ರಯತ್ನ ಮಾಡಿದವನ ಮರ್ಮಾಂಗವನ್ನು ಕತ್ತರಿಸಿದ ಮಹಿಳೆ ಸೀದಾ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾರೆ.

ಮಹಿಳೆಯ ಪತಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದರು. ಇದರಿಂದಾಗಿ ಆ ತನ್ನ 13 ವರ್ಷದ ಮಗನೊಟ್ಟಿಗೆ ಮನೆಯಲ್ಲಿ ಒಬ್ಬರೇ ಇದ್ದರು. ಈ ವೇಳೆ ಕಳ್ಳನೊಬ್ಬ ಮನೆಯೊಳಗೆ ನುಸುಳಿದ. ಹೆದರಿದ ಮಹಿಳೆ ಮತ್ತು ಆಕೆಯ ಪುತ್ರ ತಮ್ಮ ಸುರಕ್ಷತೆಗಾಗಿ ಅಲ್ಲಿಂದ ಓಡಲು ಮುಂದಾದರು. ಆದರೆ ಆತ ಇವರಿಬ್ಬರಿಗೂ ಥಳಿಸಿದ. ಅಷ್ಟೇ ಅಲ್ಲ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ. ಸುಮಾರು 20 ನಿಮಿಷ ಆಕೆ ಕಾದಾಡಿದಳು. ನಂತರ ಬೇರೆ ದಾರಿ ಕಾಣದ ಮಹಿಳೆ ತನ್ನ ಮಲಗುವ ಮಂಚದ ಕೆಳಗೆ ಇಟ್ಟಿದ್ದ ಕುಡಗೋಲನ್ನು ತೆಗೆದುಕೊಂಡು ವ್ಯಕ್ತಿಯ ಗುಪ್ತಾಂಗವನ್ನೇ ಕತ್ತರಿಸಿದ್ದಾರೆ. ಅದಾದ ಬಳಿಕ ಮರುದಿನ ಮಧ್ಯಾಹ್ನ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಖಡ್ಡಿ ಠಾಣೆ ಅಧಿಕಾರಿ ಧರ್ಮೇಂದ್ರ ಸಿಂಗ್​ ರಜಪೂತ್ ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಮೊದಲು ಸಿಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗದೆ ರೇವಾ ಜಿಲ್ಲೆಯ ಸಂಜಯ್ ಗಾಂಧಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಯಿತು. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ವಿವಿಧೆಡೆ ಪೊಲೀಸರ ಕಾರ್ಯಾರಣೆ; ಬಂಧಿತರಿಂದ ಚಿನ್ನ, ಮಾದಕ ವಸ್ತು ವಶ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ