ಸೌಂದರ್ಯ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್ ಮಾಡಿದ ಐವರು ಪೊಲೀಸರ ವರ್ಗಾವಣೆ

| Updated By: ಸುಷ್ಮಾ ಚಕ್ರೆ

Updated on: Aug 05, 2022 | 11:08 AM

Tamil Nadu News: ಕಳೆದ ಭಾನುವಾರ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್‌ನಲ್ಲಿ ಖಾಸಗಿ ಸಂಸ್ಥೆಯೊಂದು ಸೌಂದರ್ಯ ಸ್ಪರ್ಧೆಯನ್ನು ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಿದ್ದರ ಬಗ್ಗೆ ಸುದ್ದಿ ವೈರಲ್ ಆಗಿತ್ತು.

ಸೌಂದರ್ಯ ಸ್ಪರ್ಧೆಯಲ್ಲಿ ರ್ಯಾಂಪ್ ವಾಕ್ ಮಾಡಿದ ಐವರು ಪೊಲೀಸರ ವರ್ಗಾವಣೆ
ಪೊಲೀಸ್​
Follow us on

ಚೆನ್ನೈ: ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು ಎಂಬ ಕಾರಣಕ್ಕೆ ಸ್ಪೆಷಲ್ ಅಸಿಸ್ಟೆಂಟ್ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಸೌಂದರ್ಯ ಸ್ಪರ್ಧೆಯಲ್ಲಿ (Beauty Pageant) ಸಿಬ್ಬಂದಿ ರ್ಯಾಂಪ್ ವಾಕ್ (Ramp Walk) ಮಾಡಿದ ನಂತರ ನಾಗಪಟ್ಟಣಂ ಪೊಲೀಸ್ ವರಿಷ್ಠಾಧಿಕಾರಿ ಈ ವರ್ಗಾವಣೆ ಆದೇಶವನ್ನು ನೀಡಿದ್ದಾರೆ.

ಕಳೆದ ಭಾನುವಾರ ತಮಿಳುನಾಡಿನ ಮೈಲಾಡುತುರೈ ಜಿಲ್ಲೆಯ ಸೆಂಬನಾರ್ಕೋವಿಲ್‌ನಲ್ಲಿ ಖಾಸಗಿ ಸಂಸ್ಥೆಯೊಂದು ಸೌಂದರ್ಯ ಸ್ಪರ್ಧೆಯನ್ನು ನಡೆಸಿತ್ತು. ಇದರಲ್ಲಿ ನಟಿ ಯಶಿಕಾ ಆನಂದ್ ವಿಶೇಷ ಅತಿಥಿಯಾಗಿ ಭಾಗವಹಿಸಿ ಸ್ಪರ್ಧೆಗಳನ್ನು ಉದ್ಘಾಟಿಸಿದ್ದರು. ಮರುದಿನ ಮಾಧ್ಯಮಗಳಲ್ಲಿ ಈ ಕಾರ್ಯಕ್ರಮದಲ್ಲಿ ಪೊಲೀಸರು ಭಾಗವಹಿಸಿದ್ದರ ಬಗ್ಗೆ ಸುದ್ದಿ ವೈರಲ್ ಆಗಿತ್ತು.

ಈ ಹಿನ್ನೆಲೆಯಲ್ಲಿ ನಾಗಪಟ್ಟಣಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜವಗರ್ ಅವರು ಪ್ರಸ್ತುತ ಸೆಂಬನಾರ್ಕೋವಿಲ್ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸುಬ್ರಮಣ್ಯನ್ ಸೇರಿದಂತೆ ರೇಣುಕಾ, ಅಶ್ವಿನಿ, ನಿತ್ಯಶೀಲಾ ಮತ್ತು ಶ್ರೀನಿವಾಸನ್ ಎಂಬ ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Bengaluru Rain: ಸುರಿವ ಮಳೆಯನ್ನೂ ಲೆಕ್ಕಿಸದೆ ಬೆಂಗಳೂರಿನ ಟ್ರಾಫಿಕ್ ಪೊಲೀಸ್ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ; ವಿಡಿಯೋ ವೈರಲ್

ಭಾನುವಾರ, ಖಾಸಗಿ ಮಾಡೆಲಿಂಗ್ ಸಂಸ್ಥೆಯು ಸೆಂಬನಾರ್ಕೋಯಿಲ್‌ನ ಮೈಲಾಡುತುರೈನಲ್ಲಿ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸಿತ್ತು. ಅಲ್ಲಿ ವಿವಿಧ ವಯೋಮಾನದ ಸ್ಪರ್ಧಿಗಳು ಭಾಗವಹಿಸಿ, ರ‍್ಯಾಂಪ್ ವಾಕ್ ಮಾಡಿದ್ದರು. ರ್ಯಾಂಪ್ ವಾಕ್‌ನಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮತ್ತು ಎಸ್‌ಎಸ್‌ಐ ಸುಬ್ರಮಣ್ಯನ್, ಸೆಂಬನಾರ್‌ಕೋಯಿಲ್ ಪೊಲೀಸ್ ಠಾಣೆಯ ಐವರು ಪೊಲೀಸರು, ಮಹಿಳಾ ಪೊಲೀಸರಾದ ರೇಣುಕಾ, ಅಶ್ವಿನಿ ಮತ್ತು ನಿತ್ಯಶೀಲ ಮತ್ತು ಕಾನ್‌ಸ್ಟೆಬಲ್ ಶ್ರೀನಿವಾಸನ್ ಈ ಸ್ಪರ್ಧೆಯಲ್ಲಿ  ಭಾಗವಹಿಸಲೇಬೇಕೆಂದು ಸಂಘಟಕರು ವಿನಂತಿಸಿದರು. ಹೀಗಾಗಿ, ಅವರು ರ್ಯಾಂಪ್ ವಾಕ್ ಮಾಡಿದ್ದರು.

ಇದನ್ನೂ ಓದಿ: ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿಷೇಧದ ಆದೇಶವನ್ನು ವಾಪಾಸ್ ಪಡೆ ಪೊಲೀಸ್ ಇಲಾಖೆ

ಈ ಕಾರ್ಯಕ್ರಮದಲ್ಲಿ ಪೊಲೀಸರ ರ್ಯಾಂಪ್ ವಾಕ್ ವಿಡಿಯೋ ವೈರಲ್ ಆಗಿದ್ದು, ಸಾಕಷ್ಟು ನೆಗೆಟಿವ್ ಕಮೆಂಟ್​ಗಳನ್ನು ಪಡೆದಿತ್ತು. ಹೀಗಾಗಿ, ಗುರುವಾರ ಎಸ್​ಪಿ ಜಿ. ಜವಾಹರ್ ಐವರನ್ನು ಬೇರೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಎಸ್‌ಎಸ್‌ಐ ಸುಬ್ರಮಣ್ಯನ್ ಅವರನ್ನು ಮನಲ್‌ಮೇಡು ಠಾಣೆಗೆ, ರೇಣುಕಾ ಅವರನ್ನು ಮೈಲಾಡುತುರೈ ಠಾಣೆಗೆ, ಅಶ್ವಿನಿ ಅವರನ್ನು ಸಿರ್ಕಾಜಿ ಠಾಣೆಗೆ, ನಿತ್ಯ ಶೀಲವನ್ನು ಕುತ್ತಾಲಂ ಠಾಣೆಗೆ ಮತ್ತು ಶ್ರೀನಿವಾಸನ್ ಅವರನ್ನು ಕೊಲ್ಲಿಡಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸರು ಸಂಘಟಕರು ಹೇಳಿದ್ದನ್ನು ಉತ್ಸಾಹದಿಂದಲೇ ಒಪ್ಪಿಕೊಂಡರೂ ಕರ್ತವ್ಯ ಲೋಪವೆಸಗಿದ್ದರಿಂದ ಅವರನ್ನು ವರ್ಗಾವಣೆ ಮಾಡಬೇಕಾಯಿತು ಎಂದು ಎಸ್​ಪಿ ಕಚೇರಿ ಮೂಲಗಳು ತಿಳಿಸಿವೆ. ಎಲ್ಲಾ ಐವರು ಪೊಲೀಸ್ ಸಿಬ್ಬಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

 

Published On - 11:08 am, Fri, 5 August 22