ಒಡಿಶಾದ ನಯಾಗಢದಲ್ಲಿ ಬಸ್ ಅಪಘಾತ; ಐವರು ಸಾವು, ಹಲವರಿಗೆ ಗಾಯ

ಒಡಿಶಾದ ನಯಾಗಢ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ನಡೆದ ದುರಂತ ರಸ್ತೆ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹನುಮಾನ್ ಘಾಟಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬೆರ್ಹಾಂಪುರದಿಂದ ಹರಿಶಂಕರ್‌ಗೆ ಸುಮಾರು 60 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಒಡಿಶಾದ ನಯಾಗಢದಲ್ಲಿ ಬಸ್ ಅಪಘಾತ; ಐವರು ಸಾವು, ಹಲವರಿಗೆ ಗಾಯ
Nayagarh Accident
Image Credit source: TV9

Updated on: Mar 28, 2026 | 4:45 PM

ನಯಾಗಢ, ಮಾರ್ಚ್ 28: ಒಡಿಶಾದಲ್ಲಿ ಪ್ರವಾಸಿ ಬಸ್ ರಸ್ತೆಬದಿಯ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮದಿಂದ 5 ಜನ ಸಾವನ್ನಪ್ಪಿದ್ದಾರೆ, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಒಡಿಶಾದ (Odisha News) ನಯಾಗಢ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಪ್ರವಾಸಿ ಬಸ್ ರಸ್ತೆಬದಿಯ ದೊಡ್ಡ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 5 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಮೃತರೆಲ್ಲರೂ ಬೆರ್ಹಾಂಪುರ್ ನಿವಾಸಿಗಳಾಗಿದ್ದು, ಚಾಲಕ ಕೂಡ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ, ಬೆರ್ಹಾಂಪುರ್‌ನಿಂದ ಹರಿಶಂಕರ್‌ಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ 60ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಹನುಮಾನ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆಬದಿಯಲ್ಲಿದ್ದ ದೈತ್ಯ ಬಂಡೆಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾದಾಗ ಈ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ತನ್ನ ಗೆಳೆಯನ ಜೊತೆ ಸಂಬಂಧದ ಅನುಮಾನ; ಮುಂಬೈ ವಿದ್ಯಾರ್ಥಿನಿಯನ್ನು ಎಳೆದು, ಕೂದಲು ಕತ್ತರಿಸಿದ ಯುವತಿ

ಅಪಘಾತದ ಪರಿಣಾಮದಿಂದ ಹಲವಾರು ಪ್ರಯಾಣಿಕರು ಬಸ್‌ನಿಂದ ಹೊರಗೆ ಬಿದ್ದಿದ್ದಾರೆ. 10ಕ್ಕೂ ಹೆಚ್ಚು ಜನರು ಬಸ್‌ನ ಕೆಳಗೆ ಸಿಲುಕಿಕೊಂಡಿದ್ದಾರೆ. ಇದರಿಂದ ಅವರಲ್ಲಿ ಅನೇಕರು ಹೊರಬರಲಾಗದೆ ಒದ್ದಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ಆಗಮಿಸಿದವು. ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಗ್ಯಾಸ್ ಕಟ್ಟರ್ ಬಳಸಿ ರಕ್ಷಿಸಲಾಯಿತು.

ಇದನ್ನೂ ಓದಿ: 5 ವರ್ಷ ಹಿಂದಿನ ಕೊಲೆ ಪ್ರಕರಣದಲ್ಲಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಗಾಯಗೊಂಡ ಪ್ರಯಾಣಿಕರನ್ನು ದಸ್ಪಲ್ಲಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಯಿತು. ಕೆಲವರನ್ನು ಜಿಲ್ಲಾ ಕೇಂದ್ರದ ಆಸ್ಪತ್ರೆಗಳಿಗೆ ಕಳುಹಿಸಲಾಯಿತು. “ಚಾಲಕ ಬಸ್ ಅನ್ನು ಅತಿ ವೇಗದಲ್ಲಿ ಓಡಿಸುತ್ತಿದ್ದ. ಅತಿ ವೇಗವೇ ಅಪಘಾತಕ್ಕೆ ಕಾರಣ” ಎಂದು ಪ್ರಯಾಣಿಕ ಆರಿಯಾ ಪಾತ್ರ ಹೇಳಿದ್ದಾರೆ.

ಅಪಘಾತದ ಕಾರಣವನ್ನು ಕಂಡುಹಿಡಿಯಲು ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us