ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ವಿದ್ಯುತ್ ಅವಘಡ: ಐವರು ಸಾವು

| Updated By: ನಯನಾ ರಾಜೀವ್

Updated on: Oct 09, 2022 | 10:54 AM

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ವಿದ್ಯುತ್ ಅವಘಡ: ಐವರು  ಸಾವು
Electricity
Follow us on

ಲಕ್ನೋ: ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಮೆರವಣಿಗೆ ವೇಳೆ ಕೋಲಿಗೆ ವಿದ್ಯುತ್​​ ತಂತಿ ಸ್ಪರ್ಶಿಸಿ ಐವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗ ಓರ್ವ ಮೃತಪಟ್ಟಿದ್ದಾರೆ.

ಮೆರವಣಿಗೆಯ ಗಾಡಿಗೆ ಅಳವಡಿಸಲಾಗಿದ್ದ ಹೈಟೆನ್ಷನ್ ತಂತಿಯ ಕಬ್ಬಿಣದ ರಾಡ್‌ಗೆ ವ್ಯಕ್ತಿಗಳು ಸ್ಪರ್ಶಿಸಿದ ನಂತರ ಈ ಘಟನೆ ನಡೆದಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಹ್ರೈಚ್‌ನಲ್ಲಿ ನಡೆದ ಮೆರವಣಿಗೆಯಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಇದರೊಂದಿಗೆ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೂಡಲೇ ಸ್ಥಳಕ್ಕೆ ಆಗಮಿಸುವಂತೆ ಸೂಚನೆ ನೀಡಿದರು.

 

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ