ಕದನ ವಿರಾಮ ಉಲ್ಲಂಘನೆಗೆ ಭಾರತದ ತಿರುಗೇಟು: ಐವರು ಪಾಕ್ ಸೈನಿಕರು ಸಾವು
ಗುಂಡಿನ ಚಕಮಕಿಯಲ್ಲಿ ಐವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತ-ಪಾಕ್ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಐವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಪೂಂಛ್ ಜಿಲ್ಲೆಯ ಮಂಕೋಟೆ ವಲಯದಲ್ಲಿ ನಾಗರಿಕ ವಸತಿಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನವು ಅಪ್ರಚೋದಿತವಾಗಿ ಗುಂಡು ಹಾರಿಸಿತು. ಶೆಲ್ ದಾಳಿಯನ್ನೂ ನಡೆಸಿತು. ಭಾರತ ಸೇನೆ ಸೂಕ್ತ ಪ್ರತ್ಯುತ್ತರ ನೀಡಿ, ಪಾಕ್ ಸೇನೆಯ ಬಂಕರ್ ನಾಶಪಡಿಸಿತು.
1999ರಲ್ಲಿ ಉಭಯ ದೇಶಗಳು ಸಹಿ ಹಾಕಿದ ದ್ವಿಪಕ್ಷೀಯ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಹಲವು ಬಾರಿ ಉಲ್ಲಂಘಿಸಿದೆ. 2020ರ ಜನವರಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ 3,200ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ದಾಳಿಗೆ 30 ನಾಗರಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Published On - 2:03 pm, Fri, 11 December 20