ಕದನ ವಿರಾಮ ಉಲ್ಲಂಘನೆಗೆ ಭಾರತದ ತಿರುಗೇಟು: ಐವರು ಪಾಕ್​ ಸೈನಿಕರು ಸಾವು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 11, 2020 | 2:03 PM

ಗುಂಡಿನ ಚಕಮಕಿಯಲ್ಲಿ ಐವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.

ಕದನ ವಿರಾಮ ಉಲ್ಲಂಘನೆಗೆ ಭಾರತದ ತಿರುಗೇಟು: ಐವರು ಪಾಕ್​ ಸೈನಿಕರು ಸಾವು
ಸಾಂದರ್ಭಿಕ ಚಿತ್ರ
Follow us on

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತ-ಪಾಕ್​ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ ಐವರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.

ಪೂಂಛ್​ ಜಿಲ್ಲೆಯ ಮಂಕೋಟೆ ವಲಯದಲ್ಲಿ ನಾಗರಿಕ ವಸತಿಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನವು ಅಪ್ರಚೋದಿತವಾಗಿ ಗುಂಡು ಹಾರಿಸಿತು. ಶೆಲ್ ದಾಳಿಯನ್ನೂ ನಡೆಸಿತು. ಭಾರತ ಸೇನೆ ಸೂಕ್ತ ಪ್ರತ್ಯುತ್ತರ ನೀಡಿ, ಪಾಕ್ ಸೇನೆಯ​ ಬಂಕರ್​ ನಾಶಪಡಿಸಿತು.

1999ರಲ್ಲಿ ಉಭಯ ದೇಶಗಳು ಸಹಿ ಹಾಕಿದ ದ್ವಿಪಕ್ಷೀಯ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಹಲವು ಬಾರಿ ಉಲ್ಲಂಘಿಸಿದೆ. 2020ರ ಜನವರಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ 3,200ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಪಾಕ್​ ದಾಳಿಗೆ 30 ನಾಗರಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಫೈರಿಂಗ್: ಪಾಕ್​ನ 11 ಯೋಧರ ಹತ್ಯೆ

 

 

Published On - 2:03 pm, Fri, 11 December 20