ಪುಣೆ: ಕೊವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿರುವ ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ ನಡೆದ ಅಗ್ನಿ ದುರಂತದಲ್ಲಿ ಐವರು ಮೃತಪಟ್ಟಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮಧ್ಯಾಹ್ನ 2 ಗಂಟೆ ಸುಮಾರಿಗೆ ಸೆರಮ್ ಸಂಸ್ಥೆಯ ಎರಡನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಕಟ್ಟದಲ್ಲಿ ಸಿಲುಕಿದ್ದವರ ಪೈಕಿ ಐವರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಅಗ್ನಿ ಅವಘಡಕ್ಕೆ ಕಾರಣ ಏನು ಎನ್ನುವ ವಿಚಾರ ಇನ್ನೂ ತಿಳಿದು ಬಂದಿಲ್ಲ. ಸದ್ಯ, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ. ಲಸಿಕೆ ಉತ್ಪಾದನಾ ಘಟಕ ಸುರಕ್ಷಿತವಾಗಿದೆ. ಬೆಂಕಿ ಆಕಸ್ಮಿಕದಿಂದ ಲಸಿಕೆ ಉತ್ಪಾದನೆಗೆ ಯಾವುದೇ ತೊಂದರೆ ಇಲ್ಲ ಎಂದು ಮೂಲಗಳು ಹೇಳಿವೆ.
ಸೆರಮ್ ಇನ್ಸ್ಟಿಟ್ಯೂಟ್ನಲ್ಲಿ ಭಾರಿ ಅಗ್ನಿ ಅವಘಡ: ಲಸಿಕೆ ಸಂಗ್ರಹ ಘಟಕ ಸುರಕ್ಷಿತ