AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಮಳೆಯಿಂದ ವೈಷ್ಣೋ ದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ; 8 ಜನ ಸಾವು, 14 ಜನರಿಗೆ ಗಾಯ

Vaishno Devi landslide: ಜಮ್ಮು ಮತ್ತು ಕಾಶ್ಮೀರ ಪ್ರವಾಹದ ದೋಡಾದಲ್ಲಿ ನಿರಂತರ ಮಳೆ, ಮೇಘಸ್ಫೋಟ ಮತ್ತು ಭೂಕುಸಿತದಿಂದ ಐವರು ಸಾವನ್ನಪ್ಪಿದ್ದಾರೆ. ಈ ದುರಂತದಿಂದ ಮನೆಗಳು ಮತ್ತು ರಸ್ತೆಗಳು ನಾಶವಾಗಿವೆ. ಈ ಭೂಕುಸಿತದಿಂದ ವೈಷ್ಣೋ ದೇವಿ ಯಾತ್ರೆ ಸ್ಥಗಿತಗೊಂಡಿದೆ ಮತ್ತು ಹೆದ್ದಾರಿಗಳು ಮುಚ್ಚಲ್ಪಟ್ಟಿವೆ. ಭೂಕುಸಿತವಾದ ಜಾಗದಲ್ಲಿ ಇನ್ನೂ ಹಲವರು ಅವಶೇಷಗಳಡಿ ಸಿಲುಕಿದ್ದಾರೆ. ಜಮ್ಮುವಿನ ಜಿಲ್ಲೆಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಭಾರೀ ಮಳೆಯಿಂದ ವೈಷ್ಣೋ ದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ; 8 ಜನ ಸಾವು, 14 ಜನರಿಗೆ ಗಾಯ
Vaishno Devi Disaster
ಸುಷ್ಮಾ ಚಕ್ರೆ
|

Updated on:Aug 26, 2025 | 7:57 PM

Share

ದೋಡಾ, ಆಗಸ್ಟ್ 26: ಇಂದು ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ದೇವಾಲಯಕ್ಕೆ (Vaishno Devi Temple) ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿ 8 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ನಂತರ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಪವಿತ್ರ ದೇವಾಲಯವಾದ ವೈಷ್ಣೋದೇವಿಗೆ ತೀರ್ಥಯಾತ್ರೆಯನ್ನು (Vaishno Devi Yatra) ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಅರ್ಧಕುವರಿಯ ಇಂದರಪ್ರಸ್ಥ ಭೋಜನಾಲಯದ ಬಳಿ ಸಂಭವಿಸಿದ ದುರಂತ ಭೂಕುಸಿತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು 14 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ಸಮಯದಲ್ಲಿ, ಸುಮಾರು 12ರಿಂದ 15 ಯಾತ್ರಿಕರು ಆ ಸ್ಥಳದಲ್ಲಿದ್ದರು. ಆರಂಭದಲ್ಲಿ ಎರಡು ಶವಗಳನ್ನು ಹೊರತೆಗೆದು ಕತ್ರಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಂಭೀರವಾಗಿ ಗಾಯಗೊಂಡ ಹಲವಾರು ಜನರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: Video: ಕತ್ರಾ: ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ, ಹಲವರಿಗೆ ಗಾಯ

ರಾತ್ರಿಯಿಡೀ ಬಿದ್ದ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಯಾತ್ರಿಕರ ಸುರಕ್ಷತೆಯ ದೃಷ್ಟಿಯಿಂದ ವೈಷ್ಣೋದೇವಿ ದೇವಾಲಯ ಮಂಡಳಿಯು ವೈಷ್ಣೋ ದೇವಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರವಾಹ ಆತಂಕ ಹೆಚ್ಚುತ್ತಲೇ ಇರುವುದರಿಂದ ಜಮ್ಮು ಮತ್ತು ಕಾಶ್ಮೀರದ ಹಲವಾರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಜಾರಿ ಮಾಡಲಾಗಿದೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಧ್ಕ್ವರಿಯಲ್ಲಿರುವ ಇಂದರ್ಪ್ರಸ್ಥ ಭೋಜನಾಲಯದ ಬಳಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲಿ ಬೆಟ್ಟದ ತುದಿಯಲ್ಲಿರುವ ದೇವಾಲಯಕ್ಕೆ ಹೋಗುವ 12 ಕಿ.ಮೀ. ಪಾದಯಾತ್ರೆಯ ಸುಮಾರು ಅರ್ಧದಾರಿಯಲ್ಲಿ ಭೂಕುಸಿತ ಸಂಭವಿಸಿದೆ. ಹಿಮಕೋಟಿ ಪಾದಯಾತ್ರೆ ಮಾರ್ಗದಲ್ಲಿ ಯಾತ್ರೆಯನ್ನು ಈಗಾಗಲೇ ದಿನನಿತ್ಯ ಸ್ಥಗಿತಗೊಳಿಸಲಾಗಿತ್ತು. ಸತತ 3 ದಿನಗಳ ಭಾರೀ ಮಳೆಯು ಜಮ್ಮು ಮತ್ತು ಕಾಶ್ಮೀರದ ಹಲವಾರು ಭಾಗಗಳನ್ನು ನಾಶಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Tue, 26 August 25