AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು!

ಇಂದೋರ್‌ನಲ್ಲಿ ಸೋಮವಾರ ಉದ್ಯಮಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಆ ಮನೆಯಲ್ಲಿದ್ದ 220 ಗ್ರಾಂ ಚಿನ್ನ ದೋಚಿದ ಆರೋಪದ ಮೇಲೆ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಕಳ್ಳರಂತೆ ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಕದಿಯುತ್ತಿರುವ ದೃಶ್ಯ ಮನೆಯೊಳಗಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದದಲ್ಲಿ ವಾರಂಟ್ ನೀಡಲು ಅವರು ಉದ್ಯಮಿಯ ಮನೆಗೆ ಬಂದಿದ್ದಾಗ ಈ ಕೃತ್ಯ ಎಸಗಿದ್ದಾರೆ.

ಉದ್ಯಮಿಯ ಮನೆಯಿಂದ 220 ಗ್ರಾಂ ಚಿನ್ನ ಕದ್ದ ಐವರು ಪೊಲೀಸ್ ಅಧಿಕಾರಿಗಳು!
5 Officers Stole 220 Grams Gold
ಸುಷ್ಮಾ ಚಕ್ರೆ
|

Updated on:Apr 21, 2026 | 8:23 PM

Share

ಇಂದೋರ್, ಏಪ್ರಿಲ್ 21: ಇದು ಬೇಲಿಯೇ ಎದ್ದು ಹೊಲ ಮೇಯ್ದ ಕತೆ. ಕಳ್ಳರಿಂದ ಜನರನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಗಳೇ ಕಳ್ಳತನ (Robbery) ಮಾಡಿರುವ ಘಟನೆ ಇಂದೋರ್​​ನಲ್ಲಿ ನಡೆದಿದೆ. ನಿವೃತ್ತ ಎಸಿಪಿಯನ್ನು ಒಳಗೊಂಡ ಆಸ್ತಿ ವಿವಾದವನ್ನು ಪರಿಹರಿಸುವ ನೆಪದಲ್ಲಿ ಒಟ್ಟು 5 ಪೊಲೀಸ್ ಅಧಿಕಾರಿಗಳು ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ರೇಡ್ ಮಾಡುವ ನೆಪದಲ್ಲಿ ಮನೆಯೊಳಗೆ ಬಂದ ಪೊಲೀಸ್ ಅಧಿಕಾರಿಗಳು 220 ಗ್ರಾಂ ಚಿನ್ನ ದೋಚಿದ್ದಾರೆ ಎಂದು ಆ ಉದ್ಯಮಿ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಐವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಗೌರವ್ ಜೈನ್ ಎಂಬ ಉದ್ಯಮಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪೊಲೀಸರು ತಮ್ಮ ಮನೆಯ ಹೊರಗಿನ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಿ ಮಾಸ್ಟರ್ ಕೀ ಬಳಸಿ ಮುಖ್ಯ ಬಾಗಿಲನ್ನು ತೆರೆದಿದ್ದಾರೆ ಎಂದು ಅವರು ಹೇಳಿದ್ದಾರೆ. ಪೊಲೀಸರು ತಮ್ಮ ಮನೆಯಿಂದ ಸುಮಾರು 220 ಗ್ರಾಂ ಚಿನ್ನವನ್ನು ಕದ್ದಿದ್ದಾರೆ ಎಂದು ಗೌರವ್ ಜೈನ್ ಆರೋಪಿಸಿದ್ದಾರೆ. ಪೊಲೀಸರನ್ನು ಎಸ್‌ಐ ಸಂಜಯ್ ವಿಷ್ಣೋಯ್, ರಣವೀರ್ ಕುಶ್ವಾ, ಪ್ರಣೀತ್ ಭಡೋರಿಯಾ, ದಿನೇಶ್ ಗುರ್ಜರ್ ಮತ್ತು ದೀಪೇಂದ್ರ ಮಿಶ್ರಾ ಎಂದು ಗುರುತಿಸಲಾಗಿದೆ. ಈ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿ ನಂತರ ತನ್ನನ್ನು ಗ್ವಾಲಿಯರ್‌ನ ಅತಿಥಿ ಗೃಹದಲ್ಲಿ ನಿವೃತ್ತ ಎಸಿಪಿಗೆ ಸಂಬಂಧಿಸಿದ ಜನರಿಗೆ ಹಸ್ತಾಂತರಿಸಿದ್ದಾರೆ ಎಂದು ಗೌರವ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳದ ತ್ರಿಶೂರ್‌ನಲ್ಲಿ ಪಟಾಕಿಗಳ ಸ್ಫೋಟ; 10 ಜನ ಸಾವು, ಹಲವರಿಗೆ ಗಾಯ

ಪೊಲೀಸರು ಗೌರವ್ ಜೈನ್ ಅವರಿಂದ 27,000 ರೂ. ಹಣವನ್ನು ಸುಲಿಗೆ ಮಾಡಿದ್ದಾರೆ. ಕ್ಯೂಆರ್ ಕೋಡ್ ಮೂಲಕ ಅವರಿದ್ದ ಹೋಟೆಲ್‌ಗೆ 10,000 ರೂ.ಗಳನ್ನು ನೀಡಲಾಗಿದೆ. 17,000 ರೂ.ಗಳನ್ನು ಎಸ್‌ಐ ಮಗನ ಖಾತೆಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದರು. ಇದಾದ ಬಳಿಕ ಡಿಸಿಪಿ ಅಮರೇಂದ್ರ ಸಿಂಗ್ ಎಲ್ಲಾ ಐವರು ಅಧಿಕಾರಿಗಳನ್ನು ಅಮಾನತು ಮಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Tue, 21 April 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ