ಪುಣೆ: ಕೋಚಿಂಗ್​ ಕೇಂದ್ರದ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

|

Updated on: Apr 22, 2024 | 9:32 AM

ನೀಟ್​ ಹಾಗೂ ಜೆಇಇಗೆ ತಯಾರಿ ನಡೆಸುತ್ತಿದ್ದ ಒಂದೇ ಕೋಚಿಂಗ್ ಕೇಂದ್ರದ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಇದೀಗ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದ್ದು, ಆಹಾರದ ಮಾದರಿಯನ್ನು ಲ್ಯಾಬ್​ಗೆ ಕಳುಹಿಸಲಾಗಿದೆ. ಫುಡ್ ಪಾಯ್ಸನಿಂಗ್ ಆಗಿದೆ ಎಂದು ಹೇಳಲಾಗುತ್ತಿದೆ.

ಪುಣೆ: ಕೋಚಿಂಗ್​ ಕೇಂದ್ರದ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Image Credit source: India TV
Follow us on

ಪುಣೆ ಜಿಲ್ಲೆಯ ಖೇಡ್ ತಹಸಿಲ್‌ನಲ್ಲಿರುವ ಕೋಚಿಂಗ್ ಕೇಂದ್ರ(Coaching Centre)ದ ಕನಿಷ್ಠ 50 ವಿದ್ಯಾರ್ಥಿಗಳು ವಿಷಪೂರಿತ ಆಹಾರ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿಗಳ ಸ್ಥಿತಿ ಈಗ ಸ್ಥಿರವಾಗಿದೆ ಮತ್ತು ಪ್ರಾಥಮಿಕ ತಪಾಸಣೆ ಮತ್ತು ಚಿಕಿತ್ಸೆಯ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೋಚಿಂಗ್ ಸೆಂಟರ್ ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ಕೋಚಿಂಗ್ ನೀಡುತ್ತದೆ ಮತ್ತು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುತ್ತದೆ ಮತ್ತು ಕಳೆದ ರಾತ್ರಿ ಊಟದ ನಂತರ ಕೆಲವು ವಿದ್ಯಾರ್ಥಿಗಳಿಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಖೇಡ್ ತಾಲೂಕಿನ ಖಾಸಗಿ ಕೇಂದ್ರವು 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿದೆ. ಇದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ಎನ್‌ಇಇಟಿ) ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: Same food every day: ದಿನಾ ಒಂದೇ ರೀತಿಯ ಆಹಾರ ಸೇವಿಸುತ್ತಿದ್ದೀರಾ? ಸದಾ ಒಂದೇ ರೀತಿಯ ಆಹಾರ ತಿನ್ನುತ್ತಿದ್ದರೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ, ಜಾಗ್ರತೆ!

ಈ ವಿದ್ಯಾರ್ಥಿಗಳಿಗೆ ಮರುದಿನ ಹೊಟ್ಟೆ ನೋವು, ವಾಂತಿ ಮತ್ತು ಅತಿಸಾರದಂತಹ ಅನೇಕ ಸಮಸ್ಯೆಗಳು ಕಾಣಿಸಿಕೊಂಡಿದ್ದವು.
ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದು, ಆಹಾರದ ಮಾದರಿಯನ್ನು ಲ್ಯಾಬ್​ಗೆ ಪರೀಕ್ಷೆಗೆ ಕಳುಹಿಸಲಾಗಿದೆ.
ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ನೀಡುವ ಪೌಷ್ಟಿಕಾಂಶದ ಆಹಾರದಲ್ಲಿ ಇಲಿ ಪತ್ತೆಯಾಗಿತ್ತು.

ಮಕ್ಕಳಿಗೆ ತಿನ್ನಲು ನೀಡಿದ್ದ ಕಿಚಡಿಯಲ್ಲಿ ಇಲಿಯ ದೇಹದ ವಿವಿಧ ಭಾಗಗಳು ಪತ್ತೆಯಾಗಿದ್ದವು. ಮಕ್ಕಳಿಗೆ ಆಹಾರ ತಿಂದ ತಕ್ಷಣ ಹೊಟ್ಟೆನೋವು,ವಾಂತಿ ಶುರುವಾಗಿತ್ತು, ಕೂಡಲೇ ಅವರನ್ನು ವೈದ್ಯಕೀಯ, ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 9:30 am, Mon, 22 April 24