AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ಪ್ರೊಫೆಸರ್​ ನಮ್ಮನ್ನು ಬಾತ್​ರೂಮ್​ಗೆ ಕರೆದುಕೊಂಡು ಹೋಗ್ತಿದ್ರು, 500 ವಿದ್ಯಾರ್ಥಿನಿಯರಿಂದ ಮೋದಿ, ಖಟ್ಟರ್​ಗೆ ಪತ್ರ

ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಹರ್ಯಾಣ: ಪ್ರೊಫೆಸರ್​ ನಮ್ಮನ್ನು ಬಾತ್​ರೂಮ್​ಗೆ ಕರೆದುಕೊಂಡು ಹೋಗ್ತಿದ್ರು, 500 ವಿದ್ಯಾರ್ಥಿನಿಯರಿಂದ ಮೋದಿ, ಖಟ್ಟರ್​ಗೆ ಪತ್ರ
Image Credit source: JC Law
ನಯನಾ ರಾಜೀವ್
|

Updated on: Jan 09, 2024 | 8:55 AM

Share

ಕಾಲೇಜಿನಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳ ಕುರಿತು 500ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದಾರೆ. ಹರ್ಯಾಣದ ಸಿರ್ಸಾದಲ್ಲಿರುವ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಸುಮಾರು 500 ವಿದ್ಯಾರ್ಥಿನಿಯರು ಪ್ರೊಫೆಸರ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಈ ಕುರಿತು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರಿಗೆ ಪತ್ರ ಬರೆದಿದ್ದಾರೆ . ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಪತ್ರದ ಪ್ರತಿಯನ್ನು ಉಪಕುಲಪತಿ ಅಜ್ಮೀರ್ ಸಿಂಗ್ ಮಲಿಕ್, ರಾಜ್ಯಪಾಲ ಬಂಡಾರು ದತ್ತಾತ್ರೇಯ, ರಾಜ್ಯ ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮತ್ತು ಇತರರಿಗೆ ಕಳುಹಿಸಲಾಗಿದೆ. ಆದರೆ, ಈ ಬಗ್ಗೆ ಸರಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಪ್ರೊಫೆಸರ್​ ತಮ್ಮ ಚೇಂಬರ್​ಗೆ ಕರೆಸಿಕೊಂಡು, ಬಳಿಕ ಬಾತ್​ರೂಮ್​ಗೆ ಕರೆದೊಯ್ದು, ಖಾಸಗಿ ಅಂಗಗಳನ್ನು ಮುಟ್ಟಿ ಅಶ್ಲೀಲ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ತೆಲಂಗಾಣ: ನಿರಂತರ ಕಿರುಕುಳ, ಲಿಂಗ ಪರಿವರ್ತನೆ ಮಾಡಿಕೊಂಡ ಪತಿಯನ್ನು ಕೊಂದ ಪತ್ನಿ

ಇದು ಹಲವು ತಿಂಗಳಿನಿಂದ ನಡೆಯುತ್ತಿದೆ ಎಂದು ಪತ್ರದಲ್ಲಿ ಹೇಳಿಕೊಂಡಿದ್ದಾರೆ. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ರಾಜೇಶ್ ಕುಮಾರ್ ಬನ್ಸಾಲ್ ಅವರು ಅನಾಮಧೇಯ ಪತ್ರ ಸ್ವೀಕರಿಸಿರುವುದನ್ನು ಒಪ್ಪಿಕೊಂಡಿದ್ದಾರೆ.

ಘಟನೆ ವಿಶ್ವವಿದ್ಯಾನಿಲಯದಲ್ಲಿ ಬೆಳಕಿಗೆ ಬಂದ ಬೆನ್ನಲ್ಲೇ ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ಸರ್ಕಾರ ವಿಪಕ್ಷಗಳ ದಾಳಿಗೆ ಗುರಿಯಾಗಿದೆ. ಸಿರ್ಸಾದ ಚೌಧರಿ ದೇವಿ ಲಾಲ್ ವಿಶ್ವವಿದ್ಯಾನಿಲಯದ 500 ವಿದ್ಯಾರ್ಥಿನಿಯರಿಂದ ಕೇಳಿಬಂದಿರುವ ಗಂಭೀರ ಆರೋಪ ತೀವ್ರ ಕಳವಳಕಾರಿಯಾಗಿದೆ ಎಂದು ಅವರು ಬರೆದಿದ್ದಾರೆ.

ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ರಾಜ್ಯಪಾಲರಿಂದ ಪ್ರಧಾನಿಗೆ ಪತ್ರ ಬರೆಯಬೇಕಾಗಿರುವುದು ಬೇಸರದ ಸಂಗತಿ ಎಂದು ಕಾಂಗ್ರೆಸ್ ನಾಯಕ ದೀಪೇಂದ್ರ ಸಿಂಗ್ ಹೂಡಾ ಬರೆದಿದ್ದಾರೆ. ವಿದ್ಯಾರ್ಥಿನಿಯರ ಆರೋಪಗಳ ಬಗ್ಗೆ ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆ ನಡೆಸಿ ಅವರಿಗೆ ನ್ಯಾಯ ಒದಗಿಸಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ