ದೆಹಲಿಯ ಅತಿದೊಡ್ಡ ಡ್ರಗ್ಸ್ ದಂಧೆ ಬಯಲು; 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ವಶ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಅತಿ ದೊಡ್ಡ ಮಾದಕ ದ್ರವ್ಯ ದಂಧೆಯಲ್ಲಿ 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಈ ಬೃಹತ್ ಕೊಕೇನ್ ರವಾನೆಯ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸ್ಮಗ್ಲಿಂಗ್ ಸಿಂಡಿಕೇಟ್ ಕೈವಾಡವಿದೆ. ಇದು ದಕ್ಷಿಣ ದೆಹಲಿಯಿಂದ ನಡೆಸಲ್ಪಡುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ ಸಿಂಡಿಕೇಟ್ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ದೆಹಲಿಯ ಅತಿದೊಡ್ಡ ಡ್ರಗ್ಸ್ ದಂಧೆ ಬಯಲು; 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ವಶ
ಕೊಕೇನ್
Follow us
ಸುಷ್ಮಾ ಚಕ್ರೆ
|

Updated on: Oct 02, 2024 | 6:12 PM

ನವದೆಹಲಿ: ದೆಹಲಿ ಪೊಲೀಸರು ಇಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಅತಿದೊಡ್ಡ ಮಾದಕ ದ್ರವ್ಯ ದಂಧೆಯಲ್ಲಿ ಸುಮಾರು 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಡ್ರಗ್ಸ್ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಇದು ಅಂತಾರಾಷ್ಟ್ರೀಯ ಡ್ರಗ್ ಸಿಂಡಿಕೇಟ್ ಆಗಿದ್ದು, ಅಫ್ಘಾನ್ ಪ್ರಜೆಗಳು ನವದೆಹಲಿಯಲ್ಲಿ ಇದನ್ನು ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ದೆಹಲಿಯಲ್ಲಿ ಕೊಕೇನ್ ಮಾರಾಟ ಮಾಡಲು ಯೋಜಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶೇಷ ಕೋಶದ ತಂಡವು ಸುಳಿವನ್ನು ಆಧರಿಸಿ 2 ತಿಂಗಳಿನಿಂದ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ, ಹೊಸ ಕಾನೂನು ಜಾರಿಗೆ ನಿರ್ಧಾರ: ಸಿದ್ದರಾಮಯ್ಯ

ಸಿಂಡಿಕೇಟ್ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರು ಅಫ್ಘಾನಿಸ್ತಾನದ ಪ್ರಜೆಗಳನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಡ್ರಗ್ ದಂಧೆ ಬೆಳಕಿಗೆ ಬಂದಿದೆ. ತಿಲಕ್ ನಗರದಲ್ಲಿ ನಡೆದ ದಾಳಿ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇಬ್ಬರು ಆರೋಪಿಗಳಾದ ಹಾಶಿಮಿ ಮೊಹಮ್ಮದ್ ವಾರಿಸ್ ಮತ್ತು ಅಬ್ದುಲ್ ನಯೀಬ್ ಅವರಿಂದ 400 ಗ್ರಾಂ ಹೆರಾಯಿನ್ ಮತ್ತು 160 ಗ್ರಾಂ ಕೊಕೇನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ

ವಾರಿಸ್ ಅವರು ಜನವರಿ 2020ರಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು ಅಫ್ಘಾನಿಸ್ತಾನದಲ್ಲಿದೆ. ಪೊಲೀಸರ ಪ್ರಕಾರ ನಯೀಬ್ ಕೂಡ ಆಫ್ಘನ್ ಪ್ರಜೆಯಾಗಿದ್ದು, ಅವನು ತನ್ನ ತಂದೆಯೊಂದಿಗೆ ಜನವರಿ 2020ರಲ್ಲಿ ಭಾರತಕ್ಕೆ ಬಂದನು. ಅವರು ನೋಂದಾಯಿತ ನಿರಾಶ್ರಿತರಾಗಿದ್ದರು. ಅವರ ತಂದೆಯನ್ನು ಹೊರತುಪಡಿಸಿ ಅವರ ಇಡೀ ಕುಟುಂಬವು ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
ದೊಡ್ಮನೆಯಲ್ಲಿ ‘ಮಜಾ ಟಾಕೀಸ್’ ತಂಡದ ಎಂಟ್ರಿ; ಎಲ್ಲಾ ಜಾಲಿ ಜಾಲಿ
ದಿವ್ಯಾಂಗ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಟೀಮ್ ಇಂಡಿಯಾ
ದಿವ್ಯಾಂಗ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಟೀಮ್ ಇಂಡಿಯಾ
Daily Devotional: ಕಾಲಾಷ್ಠಮಿಯ ಮಹತ್ವ ಹಾಗೂ ವಿಶೇಷತೆ ತಿಳಿಯಿರಿ
Daily Devotional: ಕಾಲಾಷ್ಠಮಿಯ ಮಹತ್ವ ಹಾಗೂ ವಿಶೇಷತೆ ತಿಳಿಯಿರಿ
ಮೇಷ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲವಿದೆ
ಮೇಷ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲವಿದೆ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ದರೋಡೆಕೋರನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ರಾಜ್ಯಾಧ್ಯಕ್ಷನ ಚುನಾವಣೆಯನ್ನು ಶಿವರಾಜ್ ಚೌಹಾನ್ ನೋಡಿಕೊಳ್ಳುತ್ತಾರೆ: ಅಶೋಕ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ವರಿಷ್ಠರು ದೆಹಲಿಗೆ ತೆರಳಬೇಕಿದ್ದರಿಂದ ಬೇಗ ಭಾಷಣ ಮುಗಿಸಿದ ಸಿದ್ದರಾಮಯ್ಯ
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಅಮೆರಿಕದಲ್ಲಿನ ಅಭಿಮಾನಿಗಳ ಎದುರು ಹಾಡು ಹೇಳಿ ರಂಜಿಸಿದ ಶಿವರಾಜ್​ಕುಮಾರ್
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಪ್ರಧಾನ ಮಂತ್ರಿ ಹುದ್ದೆಯನ್ನೇ ಸೋನಿಯಾ ಗಾಂಧಿ ತ್ಯಾಗ ಮಾಡಿದ್ದರು: ಖರ್ಗೆ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ