Gas Cylinder Price: ಈ ರಾಜ್ಯದಲ್ಲಿ 2023 ಏಪ್ರಿಲ್ 1ರಿಂದ ಗ್ಯಾಸ್ ಸಿಲಿಂಡರ್ಗೆ 500 ರೂ.
ಮುಂದಿನ ವರ್ಷ ಏಪ್ರಿಲ್ 1ರ ನಂತರ ಬಿಪಿಎಲ್ ಕುಟುಂಬಗಳಿಗೆ ತಲಾ 500 ರೂಪಾಯಿಯಂತೆ ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ ನೀಡುತ್ತೇವೆ ಎಂದು ರಾಜಸ್ಥಾನ ಸರ್ಕಾರ ಘೋಷಣೆ ಮಾಡಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಯಾರೂ ವಂಚಿತರಾಗಬಾರದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಜೈಪುರ: ಮುಂದಿನ ವರ್ಷ ಏಪ್ರಿಲ್ 1ರ ನಂತರ ಬಿಪಿಎಲ್ (BPL) ಕುಟುಂಬಗಳಿಗೆ ತಲಾ 500 ರೂಪಾಯಿಯಂತೆ ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ (gas cylinder) ನೀಡುತ್ತೇವೆ ಎಂದು ರಾಜಸ್ಥಾನ ಸರ್ಕಾರ ಘೋಷಣೆ ಮಾಡಿದೆ ಎಂದು ANI ತಿಳಿಸಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಯಾರೂ ವಂಚಿತರಾಗಬಾರದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ಮತ್ತು ಉಜ್ವಲ ಯೋಜನೆಗೆ ಅಡಿಯಲ್ಲಿ ಅಡುಗೆ ಅನಿಲ ಪಡೆಯುತ್ತಿರುವ ಜನರಿಗೆ ರಾಜಸ್ಥಾನ ಸರ್ಕಾರ 500 ರೂ.ಗೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಣೆ ಮಾಡಿದ್ದಾರೆ. ಅವರು ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ಈ ಘೋಷಣೆ ಮಾಡಿದ್ದಾರೆ. ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸುವ ಮೂಲಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಈ ಘೋಷಣೆ ಮಾಡಿದರು, ಬಿಪಿಎಲ್ ಕುಟುಂಬಗಳಿಗೆ ಅರ್ಧಕ್ಕಿಂತ ಕಡಿಮೆ ಬೆಲೆಯಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಸಿಲಿಂಡರ್‌ಗಳನ್ನು ನೀಡುವುದಾಗಿ ಹೇಳಿದರು.
ನಾನು ಮುಂದಿನ ತಿಂಗಳು ಬಜೆಟ್‌ಗೆ ಸಿದ್ಧತೆ ನಡೆಸುತ್ತಿದ್ದೇನೆ. ಈ ಸಮಯದಲ್ಲಿ ನಿಮ್ಮ ಮುಂದೆ ಈ ಘೋಷಣೆಯನ್ನು ಇಡುತ್ತಿದ್ದೇನೆ. ಉಜ್ವಲ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗೆ ಎಲ್‌ಪಿಜಿ ಸಂಪರ್ಕಗಳನ್ನು ನೀಡಿದರು. ಆದರೆ ಈಗ ಆ ಸಿಲಿಂಡರ್ ಖಾಲಿಯಾಗಿದೆ, ಏಕೆಂದರೆ ಸಿಲಿಂಡರ್ ದರಗಳು ಈಗ 400ರಿಂದ 1,040 ರೂ.ಗೆ ಹೆಚ್ಚಾಗಿದೆ ಗೆಹ್ಲೋಟ್ ಹೇಳಿದರು. ನಾವು ವರ್ಷಕ್ಕೆ 12 ಸಿಲಿಂಡರ್‌ಗಳನ್ನು ನೀಡುತ್ತೇವೆ ಗೆಹ್ಲೋಟ್ ಹೇಳಿದರು.
ಇದನ್ನು ಓದಿ: ಇನ್ನು ಕ್ಯುಆರ್ ಕೋಡ್ನೊಂದಿಗೆ ಬರಲಿದೆ ಎಲ್‌ಪಿಜಿ ಸಿಲಿಂಡರ್! ಪ್ರಯೋಜನಗಳು ಹಲವು
ಮುಂದಿನ ವರ್ಷ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆದರೆ ಆಡಳಿತಕ್ಕಿಂತ ಹೆಚ್ಚಾಗಿ ಪಕ್ಷದ ಒಳಜಗಳವೇ ಹೆಚ್ಚಾಗಿದೆ. ರಾಹುಲ್ ಭಾರತ್ ಜೋಡೋ ಯಾತ್ರೆಯ ಮೂಲಕ ರಾಜ್ಯವನ್ನು ತಲುಪುದಕ್ಕಿಂತ ಮುನ್ನವೇ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ಹೊಸ ಘರ್ಷಣೆ ಉಂಟಾಗಿತ್ತು.
The issue of price rise is serious. We will give 12 gas cylinders in a year at Rs 500 each to BPL families after April 1 next year. No one should remain deprived of benefits of government welfare schemes: Rajasthan CM Ashok Gehlot at Alwar pic.twitter.com/unrGvFwJfp
— ANI MP/CG/Rajasthan (@ANI_MP_CG_RJ) December 19, 2022
ಇಂದು ಅಲ್ವಾರ್‌ನಲ್ಲಿ 1,700 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಉದ್ಟಾಟನೆ ಮಾಡಿ, ಗೆಹ್ಲೋಟ್ ಅವರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದರು. ಸರ್ಕಾರದ ಘೋಷಣೆಯು ಉಚಿತ ಮತ್ತು ಸಬ್ಸಿಡಿ ಕುರಿತ ಚರ್ಚೆಗೆ ಹೊಸ ಪ್ರಚೋದನೆಯನ್ನು ನೀಡುವ ಸಾಧ್ಯತೆಗಳು ಇವೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:30 pm, Mon, 19 December 22