ಲೈಂಗಿಕ ಕಿರುಕುಳ ಕೇಸ್ ಬಳಿಕ ದೇವಸ್ಥಾನದಲ್ಲೇ ನೇಣು ಹಾಕಿಕೊಂಡ 52 ವರ್ಷದ ಅರ್ಚಕ

19 ವರ್ಷದ ಯುವತಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈನ ಕಾಂಡಿವಲಿ ಉಪನಗರದಲ್ಲಿ 52 ವರ್ಷದ ಅರ್ಚಕ ದೇವಾಲಯದೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ದೇವಸ್ಥಾನದ ಸೀಲಿಂಗ್ ಫ್ಯಾನ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಲೈಂಗಿಕ ಕಿರುಕುಳ ಕೇಸ್ ಬಳಿಕ ದೇವಸ್ಥಾನದಲ್ಲೇ ನೇಣು ಹಾಕಿಕೊಂಡ 52 ವರ್ಷದ ಅರ್ಚಕ
Suicide

Updated on: Sep 20, 2025 | 9:12 PM

ಮುಂಬೈ, ಸೆಪ್ಟೆಂಬರ್ 20: ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಯುವತಿಯೊಬ್ಬಳು 52 ವರ್ಷದ ಅರ್ಚಕರ ಮೇಲೆ ಆರೋಪ ಹೊರಿಸಿದ್ದರು. ಈ ಬಗ್ಗೆ ಕೇಸ್ ದಾಖಲಾಗಿತ್ತು. ಇದಾದ ಕೆಲವೇ ಗಂಟೆಗಳ ನಂತರ ಮುಂಬೈ ಉಪನಗರದ ದೇವಸ್ಥಾನದೊಳಗೆ 52 ವರ್ಷದ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾಂಡಿವಲಿ ಪ್ರದೇಶದ ದೇವಾಲಯದಲ್ಲಿ ಸೀಲಿಂಗ್ ಫ್ಯಾನ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕರ ಮೃತದೇಹ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸ್ ಅಧಿಕಾರಿಯ ಪ್ರಕಾರ, 19 ವರ್ಷದ ಮಹಿಳೆ ಮತ್ತು ಆಕೆಯ ತಂದೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಕಾಂಡಿವಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ, ಶುಕ್ರವಾರ ರಾತ್ರಿ 10.30ಕ್ಕೆ ಅರ್ಚಕರು ತನಗೆ ಕರೆ ಮಾಡಿ ಲೈಂಗಿಕ ಕ್ರಿಯೆ ನಡೆಸಲು ಬರುವಂತೆ ಆಹ್ವಾನಿಸಿದ್ದಾರೆ ಎಂದು ಆರೋಪಿಸಿದ್ದರು. ಅವರನ್ನು ವಾಪಾಸ್ ಕಳುಹಿಸಿದ ಪೊಲೀಸರು ಮಹಿಳೆ ಮತ್ತು ಆಕೆಯ ತಂದೆಗೆ ದೂರು ನೀಡಲು ಬೆಳಿಗ್ಗೆ ಬರಲು ಹೇಳಿದರು. ಅದಾದ ಬಳಿಕ ಅವರು ಅರ್ಚಕರನ್ನು ಹುಡುಕಲು ಪ್ರಾರಂಭಿಸಿದರು. ಆದರೆ, ಅವರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ರಾಯಚೂರು: ಒಂದೇ ಊರಿನ ಮೂವರು ಯುವತಿಯರ ಆತ್ಮಹತ್ಯೆ ಯತ್ನಕ್ಕೆ ಬಿಗ್ ಟ್ವಿಸ್ಟ್, ಒಬ್ಬೊಬ್ಬರಿಗೂ ಇತ್ತು ಒಂದೊಂದು ಲವ್ ಸ್ಟೋರಿ!

ಕೊನೆಗೆ ಮರುದಿನ ದೇವಾಲಯದೊಳಗೆ ಅರ್ಚಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ತಿಳಿದುಬಂದಿದೆ. ಆ ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಆಕಸ್ಮಿಕ ಸಾವಿನ ವರದಿ (ಎಡಿಆರ್) ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ