ಭಾರತ-ಚೀನಾ ಸಂಘರ್ಷದಲ್ಲಿ 58 ಯೋಧರಿಗೆ ಗಾಯ, 18 ಯೋಧರಿಗೆ ಮುಂದುವರಿದ ಚಿಕಿತ್ಸೆ

ಗಾಲ್ವಾನ್​ನಲ್ಲಿ ನಡೆದಿದ್ದ ಭಾರತ-ಚೀನಾ ಸೇನೆ ಸಂಘರ್ಷದಲ್ಲಿ 58 ಭಾರತೀಯ ಯೋಧರಿಗೆ ಸಣ್ಣಪುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾರೊಬ್ಬರಿಗೂ ಗಂಭೀರ ಗಾಯಗಳಾಗಿಲ್ಲ ಅಂತಾ ಸೇನಾ ಮೂಲಗಳು ತಿಳಿಸಿವೆ. ಈ ಪೈಕಿ 18 ಯೋಧರಿಗೆ ಲೇಹ್​ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕರುನಾಡಲ್ಲಿ ಕೊರೊನಾ ಮಹಾಸ್ಫೋಟ ಕರ್ನಾಟಕದಲ್ಲಿ ನಿನ್ನೆಕೂಡ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು ಸೋಂಕಿತರ ಸಂಖ್ಯೆ 7944ಕ್ಕೆ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ ಹೊಸದಾಗಿ 210 ಜನರಿಗೆ ಕೊರೊನಾ ದೃಢವಾಗಿದ್ರೆ 12 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ 114 ಜನ ಕೊರೊನಾಗೆ […]

ಭಾರತ-ಚೀನಾ ಸಂಘರ್ಷದಲ್ಲಿ 58 ಯೋಧರಿಗೆ ಗಾಯ, 18 ಯೋಧರಿಗೆ ಮುಂದುವರಿದ ಚಿಕಿತ್ಸೆ
Follow us
ಆಯೇಷಾ ಬಾನು
|

Updated on:Jun 19, 2020 | 7:55 AM

ಗಾಲ್ವಾನ್​ನಲ್ಲಿ ನಡೆದಿದ್ದ ಭಾರತ-ಚೀನಾ ಸೇನೆ ಸಂಘರ್ಷದಲ್ಲಿ 58 ಭಾರತೀಯ ಯೋಧರಿಗೆ ಸಣ್ಣಪುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾರೊಬ್ಬರಿಗೂ ಗಂಭೀರ ಗಾಯಗಳಾಗಿಲ್ಲ ಅಂತಾ ಸೇನಾ ಮೂಲಗಳು ತಿಳಿಸಿವೆ. ಈ ಪೈಕಿ 18 ಯೋಧರಿಗೆ ಲೇಹ್​ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕರುನಾಡಲ್ಲಿ ಕೊರೊನಾ ಮಹಾಸ್ಫೋಟ ಕರ್ನಾಟಕದಲ್ಲಿ ನಿನ್ನೆಕೂಡ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು ಸೋಂಕಿತರ ಸಂಖ್ಯೆ 7944ಕ್ಕೆ ಏರಿಕೆಯಾಗಿದೆ. ನಿನ್ನೆ ರಾಜ್ಯದಲ್ಲಿ ಹೊಸದಾಗಿ 210 ಜನರಿಗೆ ಕೊರೊನಾ ದೃಢವಾಗಿದ್ರೆ 12 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ 114 ಜನ ಕೊರೊನಾಗೆ ಬಲಿಯಾಗಿದ್ದಾರೆ.

ಸೋಂಕಿತನ ಮನೆ ಸುತ್ತಮುತ್ತ ಪರೀಕ್ಷೆ ಕೋಲಾರದ ಆರೋಹಳ್ಳಿ ಬಡಾವಣೆ ಕಂಟೈನ್ಮೆಂಟ್ ಜೋನ್​ನಲ್ಲಿನ ಗೋಕುಲ್ ಕಾಲೇಜಿನಲ್ಲಿ ಪರೀಕ್ಷೆ ಬರೆಸಲಾಗಿದೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಿದ್ದು, ಒಂದು ದಿನದ ಮಟ್ಟಿಗೆ ಕಂಟೈನ್​ಮೆಂಟ್ ಜೋನ್ ತೆರವುಗೊಳಿಸಿ ನಿನ್ನೆ ಪಿಯು ಪರೀಕ್ಷೆ ನಡೆಸಲಾಗಿದೆ.

ಪೊಲೀಸರಿಂದ ಮಾಸ್ಕ್ ಜಾಗೃತಿ! ಶಿವಮೊಗ್ಗದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಲೇ ಇದೆ. ಇದರ ಬೆನ್ನಲ್ಲೇ ಮಾಸ್ಕ್ ಡೇ ಪ್ರಯುಕ್ತ ಜಿಲ್ಲಾ ಪೊಲೀಸರು ಜಾಗೃತಿ ಮೂಡಿಸಿದ್ರು. ಶಿವಮೊಗ್ಗ ನೆಹರು ಮೈದಾನದ ಮೂಲಕ ವಿವಿಧ ವೃತ್ತಗಳಿಗೆ ಸಾಗಿದ ಪೊಲೀಸ್ ಅಧಿಕಾರಿಗಳು ಹಾಗೂ ಕಾನ್ಸಟೇಬಲ್ಸ್, ಕಡ್ಜಾಯವಾಗಿ ಮಾಸ್ಕ್ ಧರಿಸುವಂತೆ ಮನವಿ ಮಾಡಿದ್ರು.

ಕರಾವಳಿಯಲ್ಲಿ ಮುಂದುವರಿದ ಮಳೆ ಉಡುಪಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಯಲ್ಲೋ ಅಲರ್ಟ್ ಮುಂದುವರಿಸಲಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಸುಮಾರು 62 ಮಿಲೀಮೀಟರ್ ಮಳೆ ದಾಖಲಾಗಿದೆ. ಉಡುಪಿಯಲ್ಲಿ ಇದೇ ರೀತಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಮುಂದುವರಿಯಲಿದೆ.

ಸರ್ವಪಕ್ಷ ಸಭೆ ಕರೆದ ಪ್ರಧಾನಿ ಭಾರತ ಚೀನಾ ಗಡಿಯಲ್ಲಿ ಸೈನಿಕರ ಘರ್ಷಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಇಂದು ಸರ್ವಪಕ್ಷ ಸಭೆ ನಡೆಸಲಿದ್ದಾರೆ. ಈ ಸಭೆಗೆ ಎಲ್ಲ ಪಕ್ಷಗಳ ಅಧ್ಯಕ್ಷರಿಗೆ ಆಹ್ವಾನ ನೀಡಲಾಗಿದೆ. ಆದ್ರೆ ಸಭೆಗೆ ಆಮ್​ ಆದ್ಮಿ ಪಕ್ಷ ಆಹ್ವಾನಿಸದಿರುವುದು ಒಂದಷ್ಟು ಗೊಂದಲ ಮೂಡಿಸಿದೆ.

‘ಯೋಧರು ನಿಯಮ ಪಾಲಿಸಿದ್ದಾರೆ’ ನಮ್ಮ ಯೋಧರು ಬಳಿ ಎಲ್ಲ ರೀತಿಯ ಆಯುಧಗಳಿದ್ದವು, ಆದರೆ ಯೋಧರು ಆಯುಧಗಳನ್ನು ಬಳಸುವಂತಿರಲಿಲ್ಲ ಅಂತಾ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರಸಚಿವ ಜೈಶಂಕರ್ ತಿರುಗೇಟು ನೀಡಿದ್ದಾರೆ. ಭಾರತ ಯೋಧರು ಒಪ್ಪಂದ ನಿಯಮ ಪಾಲಿಸಿದ್ದಾರೆ ಅಂತಾ ಜೈಶಂಕರ್ ಹೇಳಿದ್ದಾರೆ.

ನಿರುದ್ಯೋಗಕ್ಕೆ ಅಮೆರಿಕನ್ನರು ತತ್ತರ ಅಮೆರಿಕದಲ್ಲಿ ನಿರುದ್ಯೋಗ ಪ್ರಮಾಣ ತೀವ್ರಗತಿಯಲ್ಲಿ ಏರಿಕೆ ಕಂಡಿದ್ದು, ಇದು ‘ದೊಡ್ಡಣ್ಣ’ನಿಗೆ ಬಹುದೊಡ್ಡ ಸವಾಲು ತಂದೊಂಡಿದೆ. ಕೋಟ್ಯಂತರ ಅಮೆರಿಕನ್ನರು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಿದ್ದು, ಮುಂದಿನ ದಿನಗಳಲ್ಲಿ ನಿರುದ್ಯೋಗ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ಭೀಕರ ಪ್ರವಾಹ, ಜನಜೀವನ ಅತಂತ್ರ ರೊಮ್ಯಾನಿಯಾದಲ್ಲಿ ಭಾರಿ ಪ್ರಮಾಣದ ಮಳೆಯಾಗ್ತ್ತಿದ್ದು, ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದವರನ್ನ ರಕ್ಷಿಸಲು ರೊಮ್ಯಾನಿಯಾ ಸರ್ಕಾರ ಮುಂದಾಗಿದೆ. ಪ್ರವಾಹದಲ್ಲಿ ಸಿಲುಕಿರುವವರನ್ನ ಬೇರೆ ಕಡೆಗೆ ಶಿಫ್ಟ್ ಮಾಡಲಾಗ್ತಿದೆ.

Published On - 7:55 am, Fri, 19 June 20

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ