ಮುಂಬೈ: ಗೋರೆಗಾಂವ್​ನ ಕಟ್ಟಡದಲ್ಲಿ ಅಗ್ನಿ ಅವಘಡ, 6 ಮಂದಿ ಸಾವು, 40 ಜನರಿಗೆ ಗಾಯ

ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

ಮುಂಬೈ: ಗೋರೆಗಾಂವ್​ನ ಕಟ್ಟಡದಲ್ಲಿ ಅಗ್ನಿ ಅವಘಡ, 6 ಮಂದಿ ಸಾವು, 40 ಜನರಿಗೆ ಗಾಯ
ಮುಂಬೈ ಕಟ್ಟಡ ಬೆಂಕಿ
Image Credit source: India Today

Updated on: Oct 06, 2023 | 8:20 AM

ಮುಂಬೈನ ಗೋರೆಗಾಂವ್‌ನ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡಿದ್ದರಿಂದ ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದು, ಕಟ್ಟಡದಲ್ಲಿ ಅಗ್ನಿಶಾಮಕ ಕಾರ್ಯಾಚರಣೆ ನಡೆಯುವುದನ್ನು ಕಾಣಬಹುದು.
ವಿವರಗಳ ಪ್ರಕಾರ, ಏಳು ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ ಕೂಡಲೇ

ಅಗ್ನಿಶಾಮಕ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು ನಡೆಯುತ್ತಿವೆ.

ಮೃತಪಟ್ಟ ಆರು ಮಂದಿಯಲ್ಲಿ ಓರ್ವ ಪುರುಷ, ಮೂವರು ಮಹಿಳೆಯರು ಮತ್ತು ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದ್ದಾರೆ. ನೆಲಮಹಡಿಯಲ್ಲಿನ ಅಂಗಡಿಗಳು, ಸ್ಕ್ರ್ಯಾಪ್ ಸಾಮಗ್ರಿಗಳು ಮತ್ತು ಸುತ್ತಮುತ್ತಲಿನ ಹಲವಾರು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಮತ್ತಷ್ಟು ಓದಿ: ಇರಾಕ್​ನಲ್ಲಿ ಭಾರಿ ಅಗ್ನಿ ದುರಂತ, 100 ಮಂದಿ ಸಾವು, 150ಕ್ಕೂ ಅಧಿಕ ಜನರಿಗೆ ಗಾಯ

ಇಬ್ಬರ ಸ್ಥಿತಿ ಗಂಭೀರವಾಗಿದೆ – 25 ಮಂದಿಯನ್ನು ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ವೈದ್ಯಕೀಯ ಕಾಲೇಜು (ಎಚ್‌ಬಿಟಿ) ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮುಂಬೈ ಅಗ್ನಿಶಾಮಕ ದಳ (MFB) ಎಂಟು ಅಗ್ನಿಶಾಮಕ ಇಂಜಿನ್‌ಗಳು, ಐದು ಜಂಬೋ ಟ್ಯಾಂಕರ್‌ಗಳು, ನೀರಿನ ಟ್ಯಾಂಕ್, ಟರ್ನ್‌ಟೇಬಲ್ ಲ್ಯಾಡರ್ (TTL) ಸ್ಥಳಕ್ಕೆ ಆಗಮಿಸಿತ್ತು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:12 am, Fri, 6 October 23

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us