AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ನಕಲಿ ಮದ್ಯ ಸೇವನೆ, ಯಮುನಾನಗರದಲ್ಲಿ 6 ಮಂದಿ ಸಾವು

ನಕಲಿ ಮದ್ಯ ಸೇವಿಸಿ 6 ಮಂದಿ ಮೃತಪಟ್ಟಿರುವ ಘಟನೆ ಹರ್ಯಾಣದ ಯಮುನಾ ನಗರದಲ್ಲಿ ನಡೆದಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯ ಸೇವಿಸಿದ ಬಳಿಕ ವಾಂತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಲ್ಲಿ ಐವರು ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದರು. ಇನ್ನು ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೃತ ಸುರೇಶ್ ಕುಮಾರ್, ಸೋನು, ಸುರೀಂದರ್ ಪಾಲ್, ಸ್ವರಣ್ ಸಿಂಗ್ ಮತ್ತು ಮೆಹರ್ ಚಂದ್ ಅವರ ಕುಟುಂಬ ಸದಸ್ಯರು ಮರಣೋತ್ತರ ಪರೀಕ್ಷೆಯನ್ನು ಮಾಡದೆ ಅವರ ದೇಹವನ್ನು ಸುಟ್ಟುಹಾಕಲಾಗಿದೆ ಎಂದು ವರದಿಯಾಗಿದೆ.

ಮದ್ಯಪಾನ ಆರೋಗ್ಯಕ್ಕೆ ಹಾನಿಕರImage Credit source: India TV
ನಯನಾ ರಾಜೀವ್
|

Updated on: Nov 09, 2023 | 8:53 AM

Share

ನಕಲಿ ಮದ್ಯ ಸೇವಿಸಿ 6 ಮಂದಿ ಮೃತಪಟ್ಟಿರುವ ಘಟನೆ ಹರ್ಯಾಣದ ಯಮುನಾ ನಗರದಲ್ಲಿ ನಡೆದಿದೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯ ಸೇವಿಸಿದ ಬಳಿಕ ವಾಂತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರಲ್ಲಿ ಐವರು ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದರು. ಇನ್ನು ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮೃತ ಸುರೇಶ್ ಕುಮಾರ್, ಸೋನು, ಸುರೀಂದರ್ ಪಾಲ್, ಸ್ವರಣ್ ಸಿಂಗ್ ಮತ್ತು ಮೆಹರ್ ಚಂದ್ ಅವರ ಕುಟುಂಬ ಸದಸ್ಯರು ಮರಣೋತ್ತರ ಪರೀಕ್ಷೆಯನ್ನು ಮಾಡದೆ ಅವರ ದೇಹವನ್ನು ಸುಟ್ಟುಹಾಕಲಾಗಿದೆ ಎಂದು ವರದಿಯಾಗಿದೆ.

ತನಿಖೆಗಳು ಇನ್ನೂ ನಡೆಯುತ್ತಿವೆ ಮತ್ತು ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಆದರೆ ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ತಿಳಿದುಬಂದಿಲ್ಲ. ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿರಬಹುದು ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಮತ್ತಷ್ಟು ಓದಿ: Bihar: ನಕಲಿ ಮದ್ಯ ಸೇವನೆ, ಬಿಹಾರದಲ್ಲಿ 22 ಮಂದಿ ಸಾವು

ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಮೃತಪಟ್ಟ ಐವರ ಕುಟುಂಬಗಳು ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಬಗ್ಗೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ ಎಂದು ಜಿಲ್ಲೆಯ ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ನ್ನೂ ಇಬ್ಬರು ಪ್ರತ್ಯೇಕ ವೈದ್ಯಕೀಯ ಸೌಲಭ್ಯಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?