ಛತ್ತೀಸ್‌ಗಢದ ಬಿಲಾಸ್ಪುರದಲ್ಲಿ ಭೀಕರ ಅಪಘಾತ; 2 ರೈಲುಗಳ ನಡುವೆ ಡಿಕ್ಕಿಯಾಗಿ 6 ಜನ ಸಾವು
ಇಂದು (ಮಂಗಳವಾರ) ಸಂಜೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಒಂದು ದೊಡ್ಡ ರೈಲು ಅಪಘಾತ ಸಂಭವಿಸಿದೆ. ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ರೈಲಿನ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ, ಅಧಿಕಾರಿಗಳು ಇನ್ನೂ ಸಾವಿನ ನಿಖರ ಸಂಖ್ಯೆಗಳನ್ನು ದೃಢಪಡಿಸಿಲ್ಲ.

ಬಿಲಾಸ್‌ಪುರ, ನವೆಂಬರ್ 4: ಛತ್ತೀಸ್‌ಗಢದ (Chhattisgarh) ಬಿಲಾಸ್‌ಪುರ ಜಿಲ್ಲೆಯಲ್ಲಿ ಇಂದು ಸಂಜೆ ಬೃಹತ್ ರೈಲು ಅಪಘಾತ ಸಂಭವಿಸಿದೆ. ಪ್ರಯಾಣಿಕರ ರೈಲೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಛತ್ತೀಸ್‌ಗಢದ ಬಿಲಾಸ್‌ಪುರದ (Bilaspur Train Accident) ಲಾಲ್‌ಖಾದನ್ ಬಳಿ ಪ್ಯಾಸೆಂಜರ್ ರೈಲು ಮತ್ತು ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಬೋಗಿಗಳು ಹಳಿತಪ್ಪಿವೆ. 2 ರೈಲು ನಿಲ್ದಾಣಗಳ ನಡುವಿನ ಅಪ್‌ಲೈನ್‌ನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಈ ಅಪಘಾತದಲ್ಲಿ ಸುಮಾರು 6 ಜನರು ಸಾವನ್ನಪ್ಪಿದ್ದಾರೆ ಮತ್ತು ಎರಡರಿಂದ ಮೂವರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೆ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಹಿರಿಯ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ: ವ್ಯಕ್ತಿಯೋರ್ವ ಬೈಕಿನಲ್ಲಿ ಹಳಿ ದಾಟುವಾಗ ವೇಗವಾಗಿ ಬಂದ ರೈಲು: ಮುಂದೇನಾಯ್ತು?
ಅಪಘಾತದ ನಂತರ, ರೈಲ್ವೆ ಆಡಳಿತ ಮತ್ತು ಸ್ಥಳೀಯ ಅಧಿಕಾರಿಗಳು ರಕ್ಷಣಾ ಮತ್ತು ವೈದ್ಯಕೀಯ ತಂಡಗಳೊಂದಿಗೆ ಆ ಸ್ಥಳಕ್ಕೆ ಧಾವಿಸಿದರು. ಗಾಯಾಳುಗಳಿಗೆ ಸಹಾಯ ಮಾಡಲು ಮತ್ತು ಹಾನಿಗೊಳಗಾದ ಬೋಗಿಗಳನ್ನು ಹಳಿಗಳಿಂದ ತೆರವುಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ದುರಂತದಿಂದಾಗಿ ಬಿಲಾಸ್‌ಪುರ-ಹೌರಾ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತೊಡಕು ಉಂಟಾಗಿದೆ. ಹಲವಾರು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




