ದಕ್ಷಿಣ ಕಾಶ್ಮೀರ: 2 ಸ್ಥಳೀಯ ಉಗ್ರರೂ ಸೇರಿದಂತೆ 6 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಬೇಟೆಯಾಡಿದ್ದಾರೆ. ಇಬ್ಬರು ಸ್ಥಳೀಯ ಉಗ್ರರು ಸೇರಿದಂತೆ ಒಟ್ಟು 6 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ದಕ್ಷಿಣ ಕಾಶ್ಮೀರ: 2 ಸ್ಥಳೀಯ ಉಗ್ರರೂ ಸೇರಿದಂತೆ 6 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ಪ್ರಾತಿನಿಧಿಕ ಚಿತ್ರ
Updated By: shivaprasad.hs

Updated on: Dec 30, 2021 | 8:56 AM

ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಮತ್ತು ಕುಲ್ಗಾಮ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಒಟ್ಟು 6 ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಈ ಕುರಿತು ಪೊಲೀಸರು ಇಂದು (ಗುರುವಾರ) ಬೆಳಿಗ್ಗೆ ಮಾಹಿತಿ ನೀಡಿದ್ದಾರೆ. ‘‘ಒಟ್ಟು ಆರು ಮಂದಿ ಭಯೋತ್ಪಾದಕರನ್ನು ಎರಡು ಪ್ರತ್ಯೇಕ ಎನ್​ಕೌಂಟರ್​ನಲ್ಲಿ ಕೊಲ್ಲಲಾಗಿದೆ. ಅವರಲ್ಲಿ 4 ಜನ ಪಾಕಿಸ್ತಾನಿ ಮೂಲದ ಭಯೋತ್ಪಾದಕರಾಗಿದ್ದು, ಇಬ್ಬರು ಸ್ಥಳೀಯ ಉಗ್ರರಾಗಿದ್ದಾರೆ. ಪಾಕಿಸ್ತಾನಿ ಮೂಲದವರ ಗುರುತು ಪತ್ತೆಹಚ್ಚಲಾಗಿದೆ. ಸ್ಥಳೀಯ ಉಗ್ರರ ಪತ್ತೆ ಕಾರ್ಯವೂ ನಡೆದಿದ್ದು, ಹಲವು ಅಪರಾಧ ಕೃತ್ಯಗಳಲ್ಲಿ ಹಾಗೂಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿದವರಾಗಿದ್ದಾರೆ. ಜೆಇಎಂ ಸಂಘಟನೆಯೊಂದಿಗೆ ನಂಟು ಹೊಂದಿದ್ದರು’’ ಎಂದು ಮಾಹಿತಿ ನೀಡಲಾಗಿದೆ. ಅಲ್ಲದೇ ಇದು ನಮಗೆ ಸಿಕ್ಕ ಅತ್ಯಂತ ದೊಡ್ಡ ಯಶಸ್ಸು ಎಂದು ಕಾಶ್ಮೀರದ ಇನ್ಸ್​​ಪೆಕ್ಟರ್ ವಿಜಯ್ ಕುಮಾರ್ ವ್ಯಾಖ್ಯಾನಿಸಿದ್ದಾರೆ.

ಮೂಲಗಳ ಪ್ರಕಾರ ಒಂದು ಎನ್​ಕೌಂಟರ್ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದ್ದರೆ ಮತ್ತೊಂದು ಅನಂತ್​ನಾಗ್ ಜಿಲ್ಲೆಯಲ್ಲಿ ನಡೆದಿದೆ. ಕುಲ್ಗಾಮ್ ಜಿಲ್ಲೆಯ ಮಿರ್ಹಾಮಾ ಪ್ರದೇಶದಲ್ಲಿ ಭಯೋತ್ಪಾದಕರ ಸುಳಿವು ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಪಡೆಗಳು ಈ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದಾಗ, ಅಡಗಿಕೊಂಡಿದ್ದ ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ಪಡೆಗಳು ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತೊಂದು ಗುಂಡಿನ ಚಕಮಕಿಯು ನೆರೆಯ ಅನಂತನಾಗ್‌ ಜಿಲ್ಲೆಯ ದೂರುವಿನ ನೌಗಾಮ್ ಶಹಾಬಾದ್ ಪ್ರದೇಶದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದರಲ್ಲಿ ಓರ್ವ ಪೊಲೀಸ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

58 ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಇಂದು ಪ್ರಕಟ, ಯಾರಿಗೆ ಬೀಳುತ್ತೆ ವಿಜಯ ಮಾಲೆ?

ಆರೋಗ್ಯ ಸಚಿವರ ಕ್ಷೇತ್ರದಲ್ಲಿ ಕೆರೆ ಕೋಡಿ ಒಡೆದಿದ್ದಕ್ಕೆ ಕುರಿ-ಕೋಳಿ ಬಲಿ ಕೊಟ್ಟ ಗ್ರಾಮಸ್ಥರು; ಸಾಮಾಜಿಕ ಅಂತರ, ಮಾಸ್ಕ್ ಮಂಗಮಾಯ