ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಅಪಘಾತದಲ್ಲಿ 6 ಜನ ಸಾವು; ಸಿಎಂ ಯೋಗಿ ಆದಿತ್ಯನಾಥ್ ಸಂತಾಪ

| Updated By: ಸುಷ್ಮಾ ಚಕ್ರೆ

Updated on: Oct 28, 2022 | 4:28 PM

ಅಪಘಾತ ಸಂಭವಿಸಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಅಪಘಾತದಲ್ಲಿ 6 ಜನ ಸಾವು; ಸಿಎಂ ಯೋಗಿ ಆದಿತ್ಯನಾಥ್ ಸಂತಾಪ
ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಅಪಘಾತ
Follow us on

ಪ್ರಯಾಗ್​ರಾಜ್: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಗ್‌ರಾಜ್‌ನಲ್ಲಿ ಭೀಕರ ಅಪಘಾತ (Accident)  ಸಂಭವಿಸಿದೆ. ಈ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಗುರುವಾರ ಹಂಡಿಯಾ ಬಳಿಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಕಾರು ವಿಂಧ್ಯಾಚಲದ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ.

ಅಪಘಾತ ಸಂಭವಿಸಿದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಪೊಲೀಸರು ಮತ್ತು ಜಿಲ್ಲಾಡಳಿತ ಸಂತ್ರಸ್ತರ ಕುಟುಂಬಗಳಿಗೆ ಎಲ್ಲಾ ರೀತಿಯ ಸಹಾಯವನ್ನು ನೀಡುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಪರ್ ಎ. ಅಗರವಾಲ್ ತಿಳಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಈ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್- ಸಿಎಂ ಯೋಗಿ ಆದಿತ್ಯನಾಥ್ ಭೇಟಿ; ಜನಸಂಖ್ಯೆ ಸಮಸ್ಯೆ ಬಗ್ಗೆ ಚರ್ಚೆ

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಯೋಗಿ ಪ್ರಯಾಗ್‌ರಾಜ್ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಪ್ರಕಾರ, ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಮಾಡುವಂತೆ ಸೂಚಿಸಲಾಗಿದೆ.

ಪ್ರಯಾಗರಾಜ್ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ