ಹರಿದ್ವಾರದಲ್ಲಿ ಗೋಡೆ ಕುಸಿದು 6 ಸಾವು, ಹಲವರಿಗೆ ಗಾಯ
ಉತ್ತರಾಖಂಡದ ಹರಿದ್ವಾರದಲ್ಲಿ ಇಂದು (ಡಿ.26) ಗೋಡೆ ಕುಸಿದು ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಉತ್ತರಾಖಂಡದ (Uttarakhand) ಹರಿದ್ವಾರದಲ್ಲಿ ಇಂದು (ಡಿ.26) ಗೋಡೆ ಕುಸಿದು ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹರಿದ್ವಾರದ ಲಹ್ಬೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಮೇಂದ್ರ ದೋಭಾಲ್ ಸೇರಿದಂತೆ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
VIDEO | Six killed, several injured in wall collapse in Haridwar, Uttarakhand. More details are awaited. pic.twitter.com/tQkNw0zlT3
— Press Trust of India (@PTI_News) December 26, 2023
ಪೊಲೀಸ್ ಠಾಣಾಗೆ ಬೆಳಿಗ್ಗೆ 8.30ರ ಸುಮಾರಿಗೆ ಲಹ್ಬೋಲಿ ಗ್ರಾಮದಲ್ಲಿ ಇಟ್ಟಿಗೆ ಗೂಡು ಗೋಡೆ ಕುಸಿದಿದೆ ಎಂಬ ಮಾಹಿತಿ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈ ಘಟನೆಯಿಂದ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಅನೇಕ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಎಸ್‌ಎಸ್‌ಪಿ ಪ್ರಮೇಂದ್ರ ದೋಭಾಲ್ ಹೇಳಿದ್ದಾರೆ.
Published On - 1:14 pm, Tue, 26 December 23