ಹರಿದ್ವಾರದಲ್ಲಿ ಗೋಡೆ ಕುಸಿದು 6 ಸಾವು, ಹಲವರಿಗೆ ಗಾಯ

|

Updated on: Dec 26, 2023 | 1:22 PM

ಉತ್ತರಾಖಂಡದ ಹರಿದ್ವಾರದಲ್ಲಿ ಇಂದು (ಡಿ.26) ಗೋಡೆ ಕುಸಿದು ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಹರಿದ್ವಾರದಲ್ಲಿ ಗೋಡೆ ಕುಸಿದು 6 ಸಾವು, ಹಲವರಿಗೆ ಗಾಯ
Follow us on

ಉತ್ತರಾಖಂಡದ (Uttarakhand) ಹರಿದ್ವಾರದಲ್ಲಿ ಇಂದು (ಡಿ.26) ಗೋಡೆ ಕುಸಿದು ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹರಿದ್ವಾರದ ಲಹ್ಬೋಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಘಟನೆಯ ನಂತರ, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಮೇಂದ್ರ ದೋಭಾಲ್ ಸೇರಿದಂತೆ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಠಾಣಾಗೆ ಬೆಳಿಗ್ಗೆ 8.30ರ ಸುಮಾರಿಗೆ ಲಹ್ಬೋಲಿ ಗ್ರಾಮದಲ್ಲಿ ಇಟ್ಟಿಗೆ ಗೂಡು ಗೋಡೆ ಕುಸಿದಿದೆ ಎಂಬ ಮಾಹಿತಿ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈ ಘಟನೆಯಿಂದ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇನ್ನು ಅನೇಕ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಎಸ್‌ಎಸ್‌ಪಿ ಪ್ರಮೇಂದ್ರ ದೋಭಾಲ್ ಹೇಳಿದ್ದಾರೆ.

Published On - 1:14 pm, Tue, 26 December 23