ರಾಜಸ್ಥಾನದ ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸಾವು, 20 ಮಂದಿಗೆ ಗಾಯ; ಪ್ರಧಾನಿ ಮೋದಿ ಸಂತಾಪ
ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದಿಂದ ಹಿಂದಿರುಗುತ್ತಿದ್ದರು. ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೈಪುರ: ರಾಜಸ್ಥಾನದ (Rajasthan) ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) 6 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ.
ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದಿಂದ ಹಿಂದಿರುಗುತ್ತಿದ್ದರು. ಅಲ್ಲಿ ಜಾನಪದ ದೇವರಾದ ಬಾಬಾ ರಾಮ್‌ದೇವ್ ದೇವಾಲಯವಿದೆ. ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
The accident in Pali, Rajasthan is saddening. In this hour of grief, my thoughts are with the bereaved families. I pray for a speedy recovery of those injured: PM @narendramodi
— PMO India (@PMOIndia) August 19, 2022
ಇದನ್ನೂ ಓದಿ: Accident: ದೆಹಲಿ-ಮೀರತ್ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು
ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ. ರಾಜಸ್ಥಾನದ ಪಾಲಿಯಲ್ಲಿ ನಡೆದ ಅಪಘಾತ ದುಃಖ ತಂದಿದೆ. ಈ ದುಃಖದ ಸಮಯದಲ್ಲಿ ನಾನು ದುಃಖಿತ ಕುಟುಂಬಗಳೊಂದಿಗೆ ನಿಲ್ಲುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:37 pm, Sat, 20 August 22