AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ವರ್ಷದ ಹೆಣ್ಣುಮಗು ಮೇಲೆ ಮೂವರು ಬಾಲಕರಿಂದ ಲೈಂಗಿಕ ದೌರ್ಜನ್ಯ!

ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕೇವಲ 6 ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ನಡೆಸಲಾಗಿದೆ. ಹಾಗಂತ ಈ ಕೃತ್ಯ ಎಸಗಿದವರು ಯಾರೋ ಕಾಮುಕ ಯುವಕರೂ ಅಲ್ಲ, ಕುಡಿತದ ಅಮಲಿನಲ್ಲಿದ್ದವರೂ ಅಲ್ಲ. ಈ ಅತ್ಯಾಚಾರ ನಡೆಸಿದವರು ಮೂವರು ಅಪ್ರಾಪ್ತ ಬಾಲಕರು ಎಂಬುದು ಆಘಾತಕಾರಿ ಸಂಗತಿ. 13, 14 ಮತ್ತು 15 ವರ್ಷದ ಮೂವರು ಮಕ್ಕಳು 6 ವರ್ಷದ ಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದು ತೀವ್ರ ಆಘಾತಕ್ಕೆ ಕಾರಣವಾಗಿದೆ.

6 ವರ್ಷದ ಹೆಣ್ಣುಮಗು ಮೇಲೆ ಮೂವರು ಬಾಲಕರಿಂದ ಲೈಂಗಿಕ ದೌರ್ಜನ್ಯ!
Child Abuse Image Credit source: iStock
ಸುಷ್ಮಾ ಚಕ್ರೆ
|

Updated on: Jan 29, 2026 | 10:58 PM

Share

ನವದೆಹಲಿ, ಜನವರಿ 29: ಯಾವುದೇ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಾಗ ಕೆಲವರು ಆ ಹೆಣ್ಣಿನ ಬಗ್ಗೆಯೇ ಅಪಸ್ವರ ಎತ್ತುತ್ತಾರೆ. ರಾತ್ರಿ ಹೊತ್ತಿನಲ್ಲಿ ಹೊರಗೆ ಹೋಗಿದ್ದೇಕೆ? ಮೈ ಕಾಣುವ ಬಟ್ಟೆ ಹಾಕಿಕೊಂಡಿದ್ದೇಕೆ? ಆಕೆಯೇ ಪ್ರಚೋದನೆ ಕೊಟ್ಟಿರಬಹುದು ಎಂಬಿತ್ಯಾದಿ ಟೀಕೆಗಳನ್ನು ಮಾಡುವವರು ಇದ್ದೇ ಇರುತ್ತಾರೆ. ಆದರೆ, ಅತ್ಯಾಚಾರ ಮಾಡುವುದಕ್ಕೆ ಯಾವುದೇ ಪ್ರಚೋದನೆಯೂ ಬೇಕಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಏಕೆಂದರೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ವರ್ಷದ ಹೆಣ್ಣುಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ (Physical Harassment) ನಡೆದಿದೆ.

ದೆಹಲಿಯ ಭಜನ್‌ಪುರದಲ್ಲಿ 6 ವರ್ಷದ ಬಾಲಕಿಯ ಮೇಲೆ 15 ವರ್ಷದೊಳಗಿನ ಮೂವರು ಹುಡುಗರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 13, 14 ಮತ್ತು 15 ವರ್ಷ ವಯಸ್ಸಿನ 3 ಆರೋಪಿಗಳನ್ನು ಬಂಧಿಸಲಾಗಿದೆ. ಜನವರಿ 18ರಂದು ಆ ಬಾಲಕಿಯ ಕುಟುಂಬಸ್ಥರು ತಮ್ಮ ಮಗುವಿನ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಅತ್ಯಾಚಾರ ನಡೆಸಿದ ಎಲ್ಲಾ ಆರೋಪಿಗಳು ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: ಮಣಿಪುರ: ಎರಡು ವರ್ಷಗಳ ಹಿಂದೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಸಾವು

“ನನ್ನ ಮಗಳ ಸ್ಥಿತಿಯನ್ನು ನೋಡಿದ ನಂತರ ಆರೋಪಿಗಳಲ್ಲಿ ಒಬ್ಬನ ತಾಯಿ ತನ್ನ ಮಗನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರಣರಾದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸಬೇಕೆಂದು ನಾನು ಬಯಸುತ್ತೇನೆ” ಎಂದು ಆ ಮಗುವಿನ ತಂದೆ ಹೇಳಿದ್ದಾರೆ. ಭಜನ್‌ಪುರ ನಿವಾಸಿಗಳು ಈ ಪ್ರಕರಣದಲ್ಲಿ ತ್ವರಿತ ತನಿಖೆ ನಡೆಸಬೇಕೆಂದು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಬಾಲಾಪರಾಧಿಗಳನ್ನು ಬಂಧಿಸಿ ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ. 6 ವರ್ಷದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆಕೆಯ ಹೇಳಿಕೆಯನ್ನು ದಾಖಲಿಸಲಾಗಿದೆ. ಆಕೆಗೆ ಕೌನ್ಸೆಲಿಂಗ್ ಕೂಡ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕಗ್ಗತ್ತಲೆಯಲ್ಲಿ ಬಾಲಕಿಯ ಅಪಹರಿಸಿ ಅತ್ಯಾಚಾರ ಮಾಡಿ, ಕೊನೆಗೆ ಭಯದಿಂದ ಕಾಲುವೆಗೆ ಎಸೆದ ಸಂಬಂಧಿ

ಆ ಮಗು ಮನೆಗೆ ಬಂದಾಗ ಆಕೆಯ ಮೈಯೆಲ್ಲ ರಕ್ತವಾಗಿತ್ತು. ನಾನು ಅವಳನ್ನು ಕೇಳಿದಾಗ ಅವಳು ಮೊದಲು ಬಿದ್ದೆ ಎಂದು ಹೇಳಿದಳು. ಆದರೆ ಅವಳ ದೇಹದ ಯಾವುದೇ ಭಾಗದಲ್ಲಿ ಯಾವುದೇ ಗಾಯಗಳಾಗಿರಲಿಲ್ಲ. ಹೀಗಾಗಿ, ಆಕೆಯನ್ನು ಪ್ರೀತಿಯಿಂದ ವಿಚಾರಿಸಿದಾಗ ಅಳುತ್ತಾ ತನ್ನ ಮೇಲೆ ನಡೆದ ಲೈಂಗಿಕ ಕಿರುಕುಳವನ್ನು ಹೇಳಿದಳು. ಮೂವರು ಹುಡುಗರು ಟೆರೇಸ್​ಗೆ ಆಕೆಯನ್ನು ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಆ ಮಗುವಿನ ತಾಯಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?