NITI Aayog Meeting: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ NITI ಆಯೋಗ ಸಭೆಗೆ 7 ಮುಖ್ಯಮಂತ್ರಿಗಳು ಗೈರು

ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ NITI ಆಯೋಗ ಕೌನ್ಸಿಲ್ ಸಭೆಗೆ ಏಳು ಮುಖ್ಯಮಂತ್ರಿಗಳು ಗೈರಾಗಿದ್ದಾರೆ.

NITI Aayog Meeting: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ NITI ಆಯೋಗ ಸಭೆಗೆ 7 ಮುಖ್ಯಮಂತ್ರಿಗಳು ಗೈರು
Follow us
|

Updated on:May 27, 2023 | 2:28 PM

ದೆಹಲಿ: ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ NITI ಆಯೋಗ (NITI Aayog) ಕೌನ್ಸಿಲ್ ಸಭೆಗೆ ಏಳು ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹಾಜರಾಗದಿರಲು ಆರೋಗ್ಯದ ಕಾರಣಗಳನ್ನು ಎಂದು ತಿಳಿಸಿದ್ದಾರೆ ಮತ್ತು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗೈರುಹಾಜರಿಗೆ ಯಾವುದೇ ಕಾರಣವನ್ನು ನೀಡಿಲ್ಲ. ಕೇಂದ್ರದ ಇತ್ತೀಚಿನ ಸುಗ್ರೀವಾಜ್ಞೆಗೆ ಸಂಬಂಧಿಸಿದಂತೆ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಪ್ರಧಾನಿಗೆ ಪತ್ರ ಬರೆದಿದ್ದಾರೆ ಮತ್ತು ದೇಶದಲ್ಲಿ ಸಹಕಾರಿ ಫೆಡರಲಿಸಂನ್ನು ತಮಾಷೆಯಾಗಿ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇನ್ನೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೆಹಲಿ ನಾಗರಿಕ ಸೇವೆಗಳಿಗೆ ರಾಜ್ಯಪಾಲ ಅನುಮತಿಯನ್ನು ಮತ್ತು ಅದರ ಅಧ್ಯಕ್ಷರನ್ನು ದೆಹಲಿ ರಾಜ್ಯಪಾಲರೇ ವಹಿಸಬೇಕು ಎಂದು ಕ್ರೇಜಿವಾಲ್​​ ನೇತೃತ್ವದ ಸರ್ಕಾರದ ಮೇಲೆ ನಿಯಂತ್ರಣ ಮಾಡುತ್ತಿದೆ. ಈಗಾಗಲೇ ಈ ವಿವಾದಾತ್ಮಕ ಸುಗ್ರೀವಾಜ್ಞೆಯನ್ನು ಮೇ 11ರ ಸುಪ್ರೀಂ ಕೋರ್ಟ್ ರದ್ದುಗೊಳಿಸುವಂತೆ ಹೇಳಿದೆ.

ಇನ್ನೂ ಪಂಜಾಬ್​​ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಪಂಜಾಬ್‌ನ ಹಿತಾಸಕ್ತಿಗಳ ಬಗ್ಗೆ ಕೇಂದ್ರ ಗಮನ ಹರಿಸುತ್ತಿಲ್ಲ, ಆದ್ದರಿಂದ ಸಭೆಯನ್ನು ಬಹಿಷ್ಕರಿಸುವುದಾಗಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಹಿಂದಿನ ಸಭೆಯಲ್ಲಿ, ಕಳೆದ ವರ್ಷ ಆಗಸ್ಟ್‌ನಲ್ಲಿ, ಮುಖ್ಯಮಂತ್ರಿಗಳು ಗ್ರಾಮೀಣಾಭಿವೃದ್ಧಿ ನಿಧಿ (ಆರ್‌ಡಿಎಫ್), ಹುಲ್ಲುಗಾವಲು ಸುಡುವಿಕೆ ಮತ್ತು ರೈತರ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ್ದರು, ಕೇಂದ್ರವು ಅದರ ಬಗ್ಗೆ ಗಮನ ಹರಿಸಿಲ್ಲ ಎಂದು ಹೇಳಿದ್ದಾರೆ. ಈ ಆರೋಗದ ಸಭೆ ಕೇವಲ “ಫೋಟೋ ಸೆಷನ್”ಗೆ ಅಷ್ಟೇ ಇದರಿಂದ ಯಾವುದೇ ಪ್ರಯೋಜನ ಇಲ್ಲ, ನಮ್ಮ ಸಮಸ್ಯೆಗಳನ್ನು ಪರಿಹರಿಸುವವರೆಗೆ ಸಭೆಯಲ್ಲಿ ಭಾಗವಹಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Niti Aayog ನೀತಿ ಆಯೋಗದ ಆರೋಗ್ಯ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ ಕೇರಳಕ್ಕೆ ಅಗ್ರಸ್ಥಾನ, ಕೊನೇ ಸ್ಥಾನದಲ್ಲಿ ಉತ್ತರ ಪ್ರದೇಶ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ದೊಡ್ಡ ಪಾತ್ರವನ್ನು ವಹಿಸಲು ಮುಂದಾಗಿರುವ ತೆಲಂಗಾಣದ ಸಿಎಂ ಕೆ ಚಂದ್ರಶೇಖರ ರಾವ್, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಬಿಹಾರದ ಸಿಎಂ ನಿತೀಶ್ ಕುಮಾರ್ ಇತರ ಮೂರು ಪ್ರಮುಖ ಪ್ರತಿಪಕ್ಷ ನಾಯಕರೂ ಸಭೆಯಿಂದ ಹೊರಗುಳಿಯುತ್ತಿದ್ದಾರೆ. ಇನ್ನೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಸಚಿವ ಪ್ರಮಾಣ ವಚನ ಕಾರ್ಯಕ್ರಮ ಇರುವ ಕಾರಣ ಈ ಸಭೆಯಲ್ಲಿ ಬಾಗವಹಿಸಸಲಾಗುತ್ತಿಲ್ಲ ಎಂದು ಹೇಳಲಾಗಿದೆ.

ಮುಖ್ಯಮಂತ್ರಿಗಳು ನೀತಿ ಆಯೋಗದ ಆಡಳಿತ ಮಂಡಳಿ ಸಭೆಗಳನ್ನು ಬಹಿಷ್ಕರಿಸುವುದು ರಾಜ್ಯದ ಅಭಿವೃದ್ಧಿಯನ್ನು ಬಹಿಷ್ಕರಿಸಿದಂತೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ನೂರಕ್ಕೂ ಹೆಚ್ಚು ಪ್ರಮುಖ ವಿಷಯಗಳನ್ನು ಆಡಳಿತ ಮಂಡಳಿ ಸಭೆಯಲ್ಲಿ (ಜಿಸಿಎಂ) ಚರ್ಚಿಸಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Sat, 27 May 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು