
ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡಂತಸ್ತಿನ ಕಟ್ಟಡವೊಂದು ಸಂಪೂರ್ಣ ಕುಸಿದು ಬಿದ್ದು 7 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ ಮೂವರು ಮಕ್ಕಳು. ಇನ್ನೂ 14 ಜನರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ವಾಜಿರ್ಗಂಜ್ ಏರಿಯಾದಲ್ಲಿರುವ ಟಿಕ್ರಿ ಹಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದೆ.
ಘಟನೆ ನಡೆಯುತ್ತಿದ್ದಂತೆ ಹಳ್ಳಿಗರೇ ಮುಂದಾಗಿ ರಕ್ಷಣಾ ಕಾರ್ಯಾಚರಣೆ ಶುರು ಮಾಡಿದ್ದಾರೆ. ಗಾಯಗೊಂಡ 14 ಜನರನ್ನು ನವಾಬ್ಗಂಜ್ನಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೊಂಡಾ ಎಸ್ಪಿ ಸೇರಿ ಹಲವು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 7 ಮಂದಿ ಮೃತಪಟ್ಟಿದ್ದಾರೆ. ಸುಮಾರು 14 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು. ಈಗ ಅವರನ್ನೆಲ್ಲ ರಕ್ಷಣೆ ಮಾಡಲಾಗಿದೆ ಎಂದು ಎಸ್ಪಿ ಸಂತೋಷ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಇದನ್ನೂ ಓದಿ: ಮೈಸೂರಿನಲ್ಲಿ ಮಹಿಳೆಯರಿಗಾಗಿ ಸಿದ್ಧವಾಯ್ತು ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್
Published On - 8:50 am, Wed, 2 June 21