Kolkata Railways Building Fire: ಕೋಲ್ಕತ್ತಾದಲ್ಲಿ ಅಗ್ನಿ ದುರಂತ 7 ಮಂದಿ ಸಾವು, 10 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಮಮತಾ ಬ್ಯಾನರ್ಜಿ
Kolkata Fire Accident: ಕೋಲ್ಕತ್ತಾದ ಸ್ಟ್ರಾಂಡ್ ರಸ್ತೆಯಲ್ಲಿರುವ ರೈಲ್ವೆ ಇಲಾಖೆ ಕಟ್ಟಡ ಸೋಮವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ಕು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳದ ಸಚಿವ ಸುಜಿತ್ ಬೋಸ್ ತಿಳಿಸಿದ್ದಾರೆ.
ರೈಲ್ವೆ ಇಲಾಖೆ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ್ದು 7 ಜನ ಮೃತಪಟ್ಟಿರುವ ಭೀಕರ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಅಗ್ನಿಶಾಮಕ ಸಿಬ್ಬಂದಿ ಸೇರಿ 7 ಜನರು ಮೃತಪಟ್ಟಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. ದುರ್ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ರೈಲ್ವೆ ಸಚಿವ ಪಿಯೂಷ್ ಗೋಯಲ್ ಆದೇಶ ನೀಡಿದ್ದಾರೆ. ಇನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಕೋಲ್ಕತ್ತಾದ ಸ್ಟ್ರಾಂಡ್ ರಸ್ತೆಯಲ್ಲಿರುವ ರೈಲ್ವೆ ಇಲಾಖೆ ಕಟ್ಟಡ ಸೋಮವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ಕು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳದ ಸಚಿವ ಸುಜಿತ್ ಬೋಸ್ ತಿಳಿಸಿದ್ದಾರೆ. ಪೂರ್ವ ರೈಲ್ವೆಯ ಕಚೇರಿಯಲ್ಲಿರುವ ಕಟ್ಟಡದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಇನ್ನೂ ಇಬ್ಬರು ವ್ಯಕ್ತಿಗಳು ಕಾಣೆಯಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಚಿವರು ತಿಳಿಸಿದ್ದಾರೆ. “ಇಂದಿನ ಬೆಂಕಿಯಲ್ಲಿ ಮೃತಪಟ್ಟ ಏಳು ಜನರಲ್ಲಿ ನಾಲ್ಕು ಅಗ್ನಿಶಾಮಕ ದಳ, ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಅಧಿಕಾರಿಗಳು ಇದ್ದಾರೆ” ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಕಾರ್ಯಾಚರಣೆಯನ್ನು ಕೈಗೊಳ್ಳಲಾಗುವುದು” ಎಂದು ಸಚಿವರು ಹೇಳಿದರು.
ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ತುಂಬಾ ದುಃಖಕರವಾಗಿದೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ನೀಡಲಾಗುವುದು ಮತ್ತು ಒಬ್ಬ ಕುಟುಂಬ ಸದಸ್ಯರಿಗೆ ಸರ್ಕಾರಿ ಕೆಲಸವನ್ನು ನೀಡಲಾಗುವುದು ಎಂದು ಹೇಳಿದರು. ಸೋಮವಾರ ಸಂಜೆ ಸ್ಟ್ರಾಂಡ್ ರಸ್ತೆಯ ಬಹುಮಹಡಿ ಕಟ್ಟಡದ 13 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ. ಎಂಟು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿವೆ.
ರಾಷ್ಟ್ರಪತಿ ರಾಮ್ನಾಥ್ ಕೋವಿಂದ್, ಪ್ರಧಾನಿ ಮೋದಿ ಸಹಿತ ಗಣ್ಯರಿಂದ ಸಂತಾಪ ಕೋಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿದುರಂತಕ್ಕೆ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ, ರೈಲ್ವೇ ಮಂತ್ರಿ ಪಿಯೂಷ್ ಗೋಯೆಲ್ ಸಂತಾಪ ಸೂಚಿಸಿದ್ದಾರೆ. ಅವಘಡ ಸಂಭವಿಸಿರುವ ಬಗ್ಗೆ ಬಹಳ ನೋವಾಗಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ರಾಮ್ನಾಥ್ ಕೋವಿಂದ್ ಹಾಗೂ ಪ್ರಧಾನಿ ಆಶಯ ವ್ಯಕ್ತಪಡಿಸಿದ್ದಾರೆ. ಪೂರ್ವ ರೈಲ್ವೇ ವಿಭಾಗ ಕೊಲ್ಕತ್ತಾದಲ್ಲಿ ಕಾರ್ಯನಿರ್ವಹಿಸುತ್ತಿದ್ದವರ ಮರಣದಿಂದ ನೋವಾಗಿದೆ. ಅವರಿಗೆ ನನ್ನ ಸಂತಾಪಗಳು ಎಂದು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವ ಸದಸ್ಯರ ಕುಟುಂಬದ ಜತೆ ಬಿಜೆಪಿ ಇದೆ. ಅವರಿಗೆ ಎಲ್ಲಾ ರೀತಿಯ ಸಹಕಾರವನ್ನೂ ನಾವು ನೀಡುತ್ತೇವೆ ಎಂದು ಬಿಜೆಪಿ ಮುಖ್ಯಸ್ಥ ಜೆ.ಪಿ, ನಡ್ಡಾ ತಿಳಿಸಿದ್ದಾರೆ.
ಇದನ್ನೂ ಓದಿ: ಕಂಚಿನ ಬಾಗಿಲು ಬಳಿ ಅಗ್ನಿ ದುರಂತ: ನೋಡನೋಡುತ್ತಿದ್ದಂತೆ ಬೀಡಿ ಎಲೆ ತುಂಬಿದ್ದ ಲಾರಿ ಬೆಂಕಿಗಾಹುತಿ
Published On - 7:13 am, Tue, 9 March 21