ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಮಂದಿಗೆ ಗಾಯ
ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್‌ನ ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಭಾನುವಾರ ಐದು ಕಾರುಗಳು ಡಿಕ್ಕಿ ಹೊಡೆದು ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ.
ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್‌ನ ಬಟಿಂಡಾ-ಚಂಡೀಗಢ ಹೆದ್ದಾರಿಯಲ್ಲಿ ಭಾನುವಾರ ಐದು ಕಾರುಗಳು ಡಿಕ್ಕಿ ಹೊಡೆದು ಕನಿಷ್ಠ ಏಳು ಜನರು ಗಾಯಗೊಂಡಿದ್ದಾರೆ. ಚಂಡೀಗಢದ ಕಡೆಗೆ ಹೋಗುತ್ತಿದ್ದ ಒಂದು ಕಾರು ಬಟಿಂಡಾ ಕಡೆಗೆ ಹೋಗುತ್ತಿದ್ದ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಟಿಂಡಾ ಕಡೆಯಿಂದ ಕಾರೊಂದು ಬರುತ್ತಿತ್ತು ಮತ್ತು ಬಟಿಂಡಾ ಕಡೆಗೆ ಹೋಗುತ್ತಿದ್ದ ಇತರ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಎಚ್‌ಒ ರವೀಂದ್ರ ಸಿಂಗ್ ಹೇಳಿದ್ದಾರೆ.
ಇನ್ನೊಂದು ಘಟನೆ
ಮಾದಿಪುರ ಮೆಟ್ರೋ ನಿಲ್ದಾಣದ ಬಳಿ ರೋಹ್ಟಕ್ ರಸ್ತೆಯಲ್ಲಿರುವ ಪಂಜಾಬಿ ಬಾಗ್ ಪ್ರದೇಶದಲ್ಲಿ ಅವರ ಕಾರಿಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದು ದೆಹಲಿ ಪೊಲೀಸ್ ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ . ಮೃತರು ಹೊರಗೆ ನಿಂತಿದ್ದಾಗ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:44 am, Mon, 31 July 23