ಆಂಧ್ರಪ್ರದೇಶದಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ; 7 ಜನ ಸಾವು

|

Updated on: Sep 13, 2024 | 7:50 PM

ಆಂಧ್ರಪ್ರದೇಶದಲ್ಲಿ ಬಸ್ ಹಾಗೂ 2 ಲಾರಿಗಳ ನಡುವೆ ಡಿಕ್ಕಿಯಾಗಿ 7 ಜನ ಸಾವನ್ನಪ್ಪಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ಬಂಗಾರು ಪಾಳ್ಯಂ ಬಳಿ ಅಪಘಾತ ಸಂಭವಿಸಿದೆ. 30ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಆಂಧ್ರಪ್ರದೇಶದಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ; 7 ಜನ ಸಾವು
ಆಂಧ್ರಪ್ರದೇಶದಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ
Follow us on

ಚಿತ್ತೂರು: ಬೆಂಗಳೂರಿಗೆ ತೆರಳುತ್ತಿದ್ದ ಎಪಿಎಸ್‌ಆರ್‌ಟಿಸಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಇಂದು ಸಂಜೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲದ ಮೊಗಿಲಿ ಘಾಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ (ಮಂಡಲ) ಮೊಗಿಲಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.


ಇದನ್ನೂ ಓದಿ: Viral: ಕಾರು-ಬಸ್‌ ನಡುವೆ ಭೀಕರ ಅಪಘಾತ; ಕ್ಯಾಮೆರಾದಲ್ಲಿ ಸೆರೆಯಾಯ್ತು ರಣ ಭೀಕರ ದೃಶ್ಯ

ಈ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದು, ಪಲಮನೇರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರ ಪ್ರಕಾರ, ಟ್ರಕ್ ಡಿವೈಡರ್ ಅನ್ನು ದಾಟಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಹೆದ್ದಾರಿಯಲ್ಲಿ ಕಬ್ಬಿಣದ ಕಂಬಿಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದ ಲಾರಿಯಿಂದ ಈ ಅಪಘಾತ ಸಂಭವಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ