ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ 7 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ
ಶನಿವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರು ಅತಿವೇಗದಲ್ಲಿ ಚಲಿಸುತ್ತಿದ್ದರಿಂದ ಏಳು ಮಂದಿ ತಕ್ಷಣವೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಥುರಾ: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ (Yamuna Expressway) ಇಂದು ಬೆಳಗ್ಗೆ ಸಂಭವಿಸಿದ ಕಾರು ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದ ಸದಸ್ಯರಾಗಿದ್ದು, ಮದುವೆಯಲ್ಲಿ ಪಾಲ್ಗೊಂಡು ಹರ್ದೋಯಿಯಿಂದ ನೋಯ್ಡಾಗೆ (Noida) ಹಿಂತಿರುಗುತ್ತಿದ್ದರು. ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅವರ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ (Accident) ಸಂಭವಿಸಿದೆ.
ಇಂದು ನಡೆದ ಅಪಘಾತದಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನ ಪ್ರಯಾಣಿಕರು ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯವರಾಗಿದ್ದು, ಅವರು ಈಗ ವಾಸವಾಗಿರುವ ನೋಯ್ಡಾಕ್ಕೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧೀಕ್ಷಕ (ಗ್ರಾಮೀಣ) ಶ್ರೀಶ ಚಂದ್ರ ಮಾಹಿತಿ ನೀಡಿದ್ದಾರೆ. “ಶನಿವಾರ ಮುಂಜಾನೆ 5 ಗಂಟೆ ಸುಮಾರಿಗೆ ಕಾರು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಕಾರು ಅತಿವೇಗದಲ್ಲಿ ಚಲಿಸುತ್ತಿದ್ದರಿಂದ ಏಳು ಮಂದಿ ತಕ್ಷಣವೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ” ಎಂದು ಅವರು ಹೇಳಿದ್ದಾರೆ.
“ಕಾರಿನಲ್ಲಿದ್ದ ಮೂವರು ಮಹಿಳೆಯರು, ಮೂವರು ಪುರುಷರು ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಂದು ಮಗು ಮತ್ತು ಒಬ್ಬ ಪುರುಷನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮಥುರಾದ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
उत्तर प्रदेश के मथुरा में हुई सड़क दुर्घटना हृदयविदारक है। इस हादसे में जिन्होंने अपने प्रियजनों को खो दिया है, उनके प्रति मेरी गहरी संवेदनाएं। इसके साथ ही घायलों के शीघ्र स्वस्थ होने की कामना करता हूं: PM @narendramodi
— PMO India (@PMOIndia) May 7, 2022
ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಉತ್ತರ ಪ್ರದೇಶದ ಮಥುರಾದಲ್ಲಿ ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಇದರೊಂದಿಗೆ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ” ಎಂದು ಪ್ರಧಾನಿ ಕಚೇರಿ ಹಿಂದಿಯಲ್ಲಿ ಟ್ವೀಟ್ ಮಾಡಿದೆ.
मथुरा में यमुना एक्सप्रेस-वे पर सड़क दुर्घटना में हुई लोगों की मृत्यु अत्यंत दुःखद है।
अधिकारियों को राहत व बचाव कार्य तेजी से संचालित करने तथा घायलों के उपचार हेतु निर्देश दिए गए हैं।
प्रभु श्री राम दिवंगत आत्माओं को शांति तथा घायलों को शीघ्र स्वास्थ्य लाभ प्रदान करें।
— Yogi Adityanath (@myogiadityanath) May 7, 2022
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಆಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಮೃತದೇಹಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.