AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕಪ್ರಡಾ ಪ್ರದೇಶದ ವೀರಕ್ಷೇತ್ರ ಬಳಿ ಪಿಕಪ್ ವ್ಯಾನ್ ಪಲ್ಟಿಯಾಗಿ ಕನಿಷ್ಠ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.ಈ ಅಪಘಾತಕ್ಕೆ ಉಪರಾಷ್ಟ್ರಪತಿ ರಾಧಾಕೃಷ್ಣನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮದುವೆಗೆ ಹೊರಟಿದ್ದ ಪಿಕಪ್ ವ್ಯಾನ್ ಅಪಘಾತಕ್ಕೀಡಾಗಿದೆ. 28ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಕಪ್ರಡಾದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಗುಜರಾತ್​​ನ ವಲ್ಸಾದ್​​ನಲ್ಲಿ ಭೀಕರ ಅಪಘಾತ; ಪಿಕಪ್ ವ್ಯಾನ್ ಪಲ್ಟಿಯಾಗಿ 7 ಜನ ಸಾವು, ಪ್ರಧಾನಿ ಮೋದಿ ಸಂತಾಪ
Accident
ಸುಷ್ಮಾ ಚಕ್ರೆ
|

Updated on:Apr 22, 2026 | 9:22 PM

Share

ವಲ್ಸಾದ್, ಏಪ್ರಿಲ್ 22: ಇಂದು ಸಂಜೆ ಗುಜರಾತ್‌ನ (Gujarat) ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಿರ್ನಾರಾ ಗ್ರಾಮದ ಸುಮಾರು 30 ಜನರನ್ನು ಪಿಕಪ್​ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ.

ಮೂವರು ಮಕ್ಕಳು ಸೇರಿದಂತೆ 7 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಯ ಸಮಯದಲ್ಲಿ ವಾಹನದಲ್ಲಿ 34 ಜನರು ಪ್ರಯಾಣಿಸುತ್ತಿದ್ದರು.

ಇದನ್ನೂ ಓದಿ: ಆದಾಯ ತೆರಿಗೆ​ ಅಧಿಕಾರಿ ಜಿಮ್​ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ

ಪಿಕಪ್ ವ್ಯಾನ್ ಒಂದು ಕುಟುಂಬದ ಸದಸ್ಯರನ್ನು ಕರೆದೊಯ್ಯುತ್ತಿತ್ತು. ವರದಿಗಳ ಪ್ರಕಾರ, ಮದುವೆಗೆ ಸಂಬಂಧಿಸಿದ ಸಮಾರಂಭಕ್ಕಾಗಿ ಪ್ರಯಾಣಿಸುತ್ತಿದ್ದ ಕುಟುಂಬದ ಸದಸ್ಯರನ್ನು ಕರೆದೊಯ್ಯುತ್ತಿದ್ದ ವಾಹನವು ಇಳಿಜಾರಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದೆ. ಪೊಲೀಸ್ ಮತ್ತು 108 ಆಂಬ್ಯುಲೆನ್ಸ್ ಸೇವೆಯ ತಂಡಗಳು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಿವೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಈ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಗುಜರಾತ್‌ನ ವಲ್ಸಾದ್‌ನಲ್ಲಿ ಸಂಭವಿಸಿದ ಅಪಘಾತದಿಂದ ಸಂಭವಿಸಿದ ಜೀವಹಾನಿ ದುಃಖಕರವಾಗಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್​ನ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:21 pm, Wed, 22 April 26

Follow Us