
ವಲ್ಸಾದ್, ಏಪ್ರಿಲ್ 22: ಇಂದು ಸಂಜೆ ಗುಜರಾತ್‌ನ (Gujarat) ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಿರ್ನಾರಾ ಗ್ರಾಮದ ಸುಮಾರು 30 ಜನರನ್ನು ಪಿಕಪ್ನಲ್ಲಿ ಮದುವೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ.
ಮೂವರು ಮಕ್ಕಳು ಸೇರಿದಂತೆ 7 ಜನ ಮೃತಪಟ್ಟಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಯ ಸಮಯದಲ್ಲಿ ವಾಹನದಲ್ಲಿ 34 ಜನರು ಪ್ರಯಾಣಿಸುತ್ತಿದ್ದರು.
Deeply saddened by the tragic road accident in Valsad district, Gujarat. I extend my heartfelt condolences to the bereaved families and pray for the speedy recovery of those injured.
— Vice-President of India (@VPIndia) April 22, 2026
ಇದನ್ನೂ ಓದಿ: ಆದಾಯ ತೆರಿಗೆ ಅಧಿಕಾರಿ ಜಿಮ್ನಲ್ಲಿದ್ದಾಗ ಮನೆಯಲ್ಲಿ ಮಗಳ ಬರ್ಬರ ಹತ್ಯೆ
The loss of lives due to a mishap in Valsad, Gujarat, is saddening. My thoughts are with the bereaved families in this hour of grief. Praying for the swift recovery of the injured: PM @narendramodi
— PMO India (@PMOIndia) April 22, 2026
ಪಿಕಪ್ ವ್ಯಾನ್ ಒಂದು ಕುಟುಂಬದ ಸದಸ್ಯರನ್ನು ಕರೆದೊಯ್ಯುತ್ತಿತ್ತು. ವರದಿಗಳ ಪ್ರಕಾರ, ಮದುವೆಗೆ ಸಂಬಂಧಿಸಿದ ಸಮಾರಂಭಕ್ಕಾಗಿ ಪ್ರಯಾಣಿಸುತ್ತಿದ್ದ ಕುಟುಂಬದ ಸದಸ್ಯರನ್ನು ಕರೆದೊಯ್ಯುತ್ತಿದ್ದ ವಾಹನವು ಇಳಿಜಾರಿನಲ್ಲಿ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದೆ. ಪೊಲೀಸ್ ಮತ್ತು 108 ಆಂಬ್ಯುಲೆನ್ಸ್ ಸೇವೆಯ ತಂಡಗಳು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಿವೆ.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಈ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಗುಜರಾತ್‌ನ ವಲ್ಸಾದ್‌ನಲ್ಲಿ ಸಂಭವಿಸಿದ ಅಪಘಾತದಿಂದ ಸಂಭವಿಸಿದ ಜೀವಹಾನಿ ದುಃಖಕರವಾಗಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್ನ ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:21 pm, Wed, 22 April 26