Bus Accident: ಜಾರ್ಖಂಡ್ನಲ್ಲಿ ಸೇತುವೆಯಿಂದ ಬಸ್ ಉರುಳಿ 7 ಜನ ಸಾವು; ಪ್ರಧಾನಿ ಮೋದಿ ಸಂತಾಪ
ಗಿರಿದಿಹ್ ಜಿಲ್ಲೆಯಿಂದ ರಾಂಚಿಗೆ ತೆರಳುತ್ತಿದ್ದ ಬಸ್ ಸೇತುವೆಯ ಬಳಿ ಬ್ಯಾಲೆನ್ಸ್ ತಪ್ಪಿ ಸಿವಾನ್ ನದಿಯ ಪಕ್ಕದಲ್ಲಿ ಬಿದ್ದಿದೆ. ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹಜಾರಿಬಾಗ್‌ನ ಸದರ್ ಆಸ್ಪತ್ರೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಹಜಾರಿಬಾಗ್: ಜಾರ್ಖಂಡ್‌ನ (Jharkhand) ಹಜಾರಿಬಾಗ್ ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ ಬಸ್ ಸಿವಾನ್ ನದಿಯ ಸೇತುವೆಯಿಂದ ಜಾರಿಬಿದ್ದು, 7 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ಗಿರಿದಿಹ್‌ನಿಂದ ರಾಂಚಿಗೆ ಹೋಗುತ್ತಿತ್ತು.
ಗಿರಿದಿಹ್ ಜಿಲ್ಲೆಯಿಂದ ರಾಂಚಿಗೆ ತೆರಳುತ್ತಿದ್ದ ಬಸ್ ಸೇತುವೆಯ ಬಳಿ ಬ್ಯಾಲೆನ್ಸ್ ತಪ್ಪಿ ಸಿವಾನ್ ನದಿಯ ಪಕ್ಕದಲ್ಲಿ ಬಿದ್ದಿದೆ. ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಹಜಾರಿಬಾಗ್‌ನ ಸದರ್ ಆಸ್ಪತ್ರೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೋಥೆ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಡಿಎಸ್ಪಿ ಮತ್ತು 3 ಪೊಲೀಸ್ ಠಾಣೆಯ ಉಸ್ತುವಾರಿಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ. ಈ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡ ಟ್ವೀಟ್ ಮಾಡಿದ್ದು, “ತತಿಜಾರಿಯಾದಲ್ಲಿ ಸೇತುವೆಯಿಂದ ಬಸ್ ಬಿದ್ದು ಪ್ರಯಾಣಿಕರು ಸಾವನ್ನಪ್ಪಿರುವುದಕ್ಕೆ ನಾನು ದುಃಖಿತನಾಗಿದ್ದೇನೆ. ದೇವರು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಮತ್ತು ದುಃಖಿತ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಜಿಲ್ಲಾಡಳಿತದಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.