AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ವರ್ಷ ಹಿಂದಿನ ಕೊಲೆ ಪ್ರಕರಣದಲ್ಲಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಒಡಿಶಾದ ಸಂಬಲ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಆರೋಪದಲ್ಲಿ 7 ಅಪರಾಧಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸಿರುವ ಅಪರೂಪದ ಘಟನೆ ನಡೆದಿದೆ. 2021ರ ಸಂಬಲ್ಪುರ ಕೊಲೆ ಪ್ರಕರಣ ಭಾರೀ ಸದ್ದು ಮಾಡಿತ್ತು. ಎಲ್ಲಾ ಅಪರಾಧಿಗಳಿಗೆ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ತಲಾ 10,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಹೆಚ್ಚುವರಿಯಾಗಿ 2 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯವು ಸೂಚಿಸಿದೆ.

5 ವರ್ಷ ಹಿಂದಿನ ಕೊಲೆ ಪ್ರಕರಣದಲ್ಲಿ 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
JailImage Credit source: iStock
ಸುಷ್ಮಾ ಚಕ್ರೆ
|

Updated on: Mar 27, 2026 | 3:29 PM

Share

ಸಂಬಲ್ಪುರ, ಮಾರ್ಚ್ 27: ಒಡಿಶಾದ ಕತರ್ಬಗಾ ಪೊಲೀಸ್ ವ್ಯಾಪ್ತಿಯ ಪದನ್ಪಲಿಯಲ್ಲಿ 2021 ರಲ್ಲಿ ನಡೆದ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಲ್ಪುರದ ಸೆಷನ್ಸ್ ನ್ಯಾಯಾಲಯವು ಗುರುವಾರ 7 ಜನರಿಗೆ ಜೀವಾವಧಿ ಶಿಕ್ಷೆ (life imprisonment) ವಿಧಿಸಿದೆ ಮತ್ತು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಿದೆ. ನ್ಯಾಯಾಲಯದ ಆದೇಶಗಳ ಪ್ರಕಾರ ಶಿಕ್ಷೆಗಳನ್ನು ಏಕಕಾಲದಲ್ಲಿ ಜಾರಿಗೊಳಿಸಲು ನಿರ್ದೇಶಿಸಲಾಗಿದೆ.

ಕತರ್ಬಗಾ ಪೊಲೀಸ್ ವ್ಯಾಪ್ತಿಯ ಗುಲಾಮಾಲ್ ಗ್ರಾಮದಲ್ಲಿ 2021ರಲ್ಲಿ ನಡೆದ ಪ್ರಕಾಶ್ ಪ್ರಧಾನ್ ಅವರ ಸಂಚಲನ ಮೂಡಿಸಿದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಲ್ಪುರದ ಜಿಲ್ಲಾ ನ್ಯಾಯಾಲಯವು 7 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪ್ರಗ್ಯಾನ್ ಪಾಣಿಗ್ರಾಹಿ 23 ಸಾಕ್ಷಿಗಳ ಸಾಕ್ಷ್ಯಗಳನ್ನು ಪರಿಶೀಲಿಸಿದ ನಂತರ ತೀರ್ಪು ನೀಡಿದ್ದಾರೆ. ನ್ಯಾಯಾಲಯವು 7 ಆರೋಪಿಗಳಾದ ರುಕ್ಮಾನ್ ಪ್ರಧಾನ್ (52), ಭೋಜರಾಜ್ ಪ್ರಧಾನ್ (55), ಗಜರಾಜ್ ಪ್ರಧಾನ್ (50), ಅಶೋಕ್ ಪ್ರಧಾನ್ (52), ದುಷ್ಮಂತ ಭೋಯಿ (50), ಭೀಷ್ಮಜಿತ್ ಭೋಯಿ (50), ಮತ್ತು ಭೀಷ್ಮದೇವ್ ಪ್ರಧಾನ್ (41) ಅವರನ್ನು ಅಪರಾಧಿಗಳೆಂದು ಘೋಷಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಕೊಲೆಗೆ ಯತ್ನ: ತನಿಖೆ ಚುರುಕು, ನಾಲ್ವರ ಬಂಧನ

ಆದರೆ, ಮತ್ತೊಬ್ಬ ಆರೋಪಿ ಬಿರಾಂಚಿ ಬಿಸ್ವಾಲ್ ಅವರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಯಿತು.

ಈ ಘಟನೆ ಸೆಪ್ಟೆಂಬರ್ 16, 2021ರ ರಾತ್ರಿ 8 ಗಂಟೆ ಸುಮಾರಿಗೆ ಪ್ರಧಾನ್‌ಪಾಲಿ-ಗುಲಾಮಲ್ ಪ್ರದೇಶದಲ್ಲಿ ಸಂಭವಿಸಿದೆ. ಮೃತ ಪ್ರಕಾಶ್ ಪ್ರಧಾನ್ ಮತ್ತು ಅವರ ಸ್ನೇಹಿತ ಅಜಯ್ ಬಾರಿಕ್ ವಿಶ್ವಕರ್ಮ ಪೂಜೆಗೆ ವಸ್ತುಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋಗಿದ್ದರು. ಅವರು ಹಿಂತಿರುಗುತ್ತಿದ್ದಾಗ ಕಬ್ಬಿಣದ ರಾಡ್, ಹರಿತವಾದ ಆಯುಧಗಳು ಮತ್ತು ಕೊಡಲಿಗಳನ್ನು ಬಳಸಿ ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ: ಗೂಗಲ್ ಮ್ಯಾಪ್ ತಂದ ಆಪತ್ತು! ಕಬ್ಬಿಣದ ಸರಳುಗಳಿಂದ ತುಂಬಿದ್ದ ಲಾರಿ ಅಪಘಾತ, ಕ್ಯಾಬ್ ಚಾಲಕ ಸಾವು

ಈ ದಾಳಿಯಲ್ಲಿ ಪ್ರಕಾಶ್ ಪ್ರಧಾನ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಧನಂಜಯ ಬೆಹೆರಾ ಮತ್ತು ಅಜಯ್ ಬಾರಿಕ್ ಗಂಭೀರವಾಗಿ ಗಾಯಗೊಂಡಿದ್ದರು. ಈ ಘಟನೆಯ ನಂತರ ಮೃತರ ಕುಟುಂಬವು ಕತರ್ಬಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ನಂತರ ಆರೋಪಿಗಳನ್ನು ಬಂಧಿಸಿ ಆರೋಪಪಟ್ಟಿ ಸಲ್ಲಿಸಿದರು. ದೀರ್ಘ ವಿಚಾರಣೆಯ ನಂತರ ನ್ಯಾಯಾಲಯ ಗುರುವಾರ ತೀರ್ಪು ಪ್ರಕಟಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ