ಮಧ್ಯಪ್ರದೇಶ: ಕತ್ತು ಸೀಳಿದ ಗಾಳಿಪಟ ದಾರ, 7 ವರ್ಷದ ಬಾಲಕ ಸಾವು

ಬೈಕ್​ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕತ್ತು ಸೀಳಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ನಗರದಲ್ಲಿ ನಡೆದಿದೆ. ಬಾಲಕ ತಂದೆಯೊಂದಿಗೆ ಮೋಟಾರ್​ಸೈಕಲ್​ನಲ್ಲಿ ಹೋಗುತ್ತಿದ್ದಾಗ ಗಾಳಿಪಟದ ಹರಿತವಾದ ದಾರ ಬಾಲಕನ ಗಂಟಲು ಸೀಳಿದೆ.

ಮಧ್ಯಪ್ರದೇಶ: ಕತ್ತು ಸೀಳಿದ ಗಾಳಿಪಟ ದಾರ, 7 ವರ್ಷದ ಬಾಲಕ ಸಾವು
ಗಾಳಿಪಟ ದಾರ
Follow us
ನಯನಾ ರಾಜೀವ್
|

Updated on: Jan 15, 2024 | 11:28 AM

ಬೈಕ್​ನಲ್ಲಿ ತೆರಳುತ್ತಿದ್ದಾಗ ಗಾಳಿಪಟ(Kite)ದ ದಾರ ಕತ್ತು ಸೀಳಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್ ನಗರದಲ್ಲಿ ನಡೆದಿದೆ. ಬಾಲಕ ತಂದೆಯೊಂದಿಗೆ ಮೋಟಾರ್​ಸೈಕಲ್​ನಲ್ಲಿ ಹೋಗುತ್ತಿದ್ದಾಗ ಗಾಳಿಪಟದ ಹರಿತವಾದ ದಾರ ಬಾಲಕನ ಗಂಟಲು ಸೀಳಿದೆ.

ತನಿಖೆ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನಗರದ ಹತ್ವಾರಾ ಚೌಕ್‌ನಲ್ಲಿ ವಿನೋದ್ ಚೌಹಾಣ್ ಎಂಬಾತ ತನ್ನ ಏಳು ವರ್ಷದ ಮಗನೊಂದಿಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಚೌಹಾಣ್ ತಮ್ಮ ಗಾಯಗೊಂಡ ಮಗನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಂದ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಲಾಯಿತು, ಅಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ. ಹರಿತವಾದ ಗಾಳಿಪಟದ ದಾರದಿಂದ ಗಂಟಲು ಸೀಳಿದ ಏಳು ವರ್ಷದ ಬಾಲಕನನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು ಎಂದು ಡಾ ಅಮಿತ್ ಸಿಸೋಡಿಯಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: Gadag News: ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ

ಮಕರ ಸಂಕ್ರಾಂತಿಯ ಸಂದರ್ಭದಲ್ಲಿ ಗಾಳಿಪಟಗಳನ್ನು ಹಾರಿಸಲು ಮಾಂಜಾ ದಾರವನ್ನು ಬಳಸಲಾಗುತ್ತದೆ. ಚೈನೀಸ್ ದಾರ ಅಥವಾ ಚೂಪಾದ ದಾರ ಬಳಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ವರಿಷ್ಠಾಧಿಕಾರಿ (ಸಿಎಸ್‌ಪಿ) ರವೀಂದ್ರ ವಾಸ್ಕೆಲ್ ಹೇಳಿದ್ದಾರೆ.

ಧಾರ್‌ನ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ರೋಶನಿ ಪಾಟಿದಾರ್ ಮಾತನಾಡಿ, ಆಡಳಿತವು ಕಳೆದ ಹತ್ತು ದಿನಗಳಲ್ಲಿ ಚೀನಾದ ಮಾಂಜಾ (ಸ್ಟ್ರಿಂಗ್) ವಿರುದ್ಧ ಅಭಿಯಾನವನ್ನು ನಡೆಸಿದೆ ಎಂದು ಹೇಳಿದರು. ಇದೊಂದು ದುಃಖಕರ ಘಟನೆ. ನಾವು ತಂಡಗಳನ್ನು ರಚಿಸಿದ್ದೇವೆ ಮತ್ತು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ