AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು

ಅಲಿಘರ್ ರೈಲ್ವೆ ನಿಲ್ದಾಣದಲ್ಲಿ 7 ವರ್ಷದ ಪುಟ್ಟ ಬಾಲಕಿ ತನ್ನ ತಾಯಿಯ ಪಾಲಿಗೆ ಜೀವದಾತೆಯಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿದ್ದ ತನ್ನ ತಾಯಿಯ ಜೀವವನ್ನು ಆಕೆ ಉಳಿಸಿದ್ದಾಳೆ. ಇಡೀ ಪ್ಲಾಟ್‌ಫಾರ್ಮ್ ಪ್ರಯಾಣಿಕರಿಂದ ತುಂಬಿತ್ತು, ರೈಲು ನಿಲ್ದಾಣಕ್ಕೆ ಬರುತ್ತಿತ್ತು. ಆಗ ಇದ್ದಕ್ಕಿದ್ದಂತೆ ಒಬ್ಬಳು ಮಹಿಳೆ ರೈಲು ಹಳಿಗಳ ಮೇಲೆ ಓಡಿಹೋದಳು. ಏನಾಯಿತೆಂದು ಎಲ್ಲರಿಗೂ ಅರ್ಥವಾಗುವಷ್ಟರಲ್ಲಿ ಆಕೆ ಕೆಳಗೆ ಹಾರಿ ಆಗಿತ್ತು. ಆದರೆ, ಕೂಡಲೆ ಆ ಮಹಿಳೆಯ 7 ವರ್ಷದ ಮಗಳು ಜೋರಾಗಿ ಕಿರುಚಿ ತನ್ನ ತಾಯಿಯ ಜೀವ ಉಳಿಸಿದ್ದಾಳೆ.

ಪ್ಲೀಸ್ ಸಾಯಬೇಡಮ್ಮ; ರೈಲು ಹಳಿ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಕಾಪಾಡಿದ 7 ವರ್ಷದ ಮಗಳು
Aligarh Mother And Daughter With Police
ಸುಷ್ಮಾ ಚಕ್ರೆ
|

Updated on:Mar 17, 2026 | 9:18 PM

Share

ನವದೆಹಲಿ, ಮಾರ್ಚ್ 17: ಅಲಿಘರ್ ರೈಲು ನಿಲ್ದಾಣದಲ್ಲಿ (Railway Station) ಯಾರೂ ಊಹಿಸದ ಘಟನೆಯೊಂದು ನಡೆದಿದೆ. ರೈಲು ಇನ್ನೇನು ಸ್ಟೇಷನ್​ಗೆ ತಲುಪಬೇಕು ಎನ್ನುವಷ್ಟರಲ್ಲಿ ತನ್ನ ಮಗಳ ಜೊತೆ ರೈಲಿಗಾಗಿ ಕಾಯುತ್ತಿದ್ದ ಮಹಿಳೆ ರೈಲು ಹಳಿ ಮೇಲೆ ಹಾರಿದ್ದಳು. ಆತ್ಮಹತ್ಯೆಗೆ ಯತ್ನಿಸಿದ ಆಕೆಯ ಹಿಂದೆಯೇ ಓಡಿದ 7 ವರ್ಷದ ಮಗಳು ‘ಅಮ್ಮಾ ಬೇಡಮ್ಮಾ’ ಎನ್ನುತ್ತಾ ಕೂಗತೊಡಗಿದ್ದಾಳೆ. ಆಕೆಯ ಕಿರುಚಾಟ ಕೇಳಿದ ನಂತರ ಇತರ ಪ್ರಯಾಣಿಕರು ಮತ್ತು ಜಿಆರ್‌ಪಿ ಸಿಬ್ಬಂದಿ ಓಡಿ ಬಂದು ಆ ಮಹಿಳೆಯನ್ನು ಕಾಪಾಡಿದ್ದಾರೆ.

ಮನೆಯಲ್ಲಿನ ಕೌಟುಂಬಿಕ ಹಿಂಸಾಚಾರದಿಂದ ನೊಂದಿದ್ದ ಮಹಿಳೆ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಳು. ರೈಲು ಸಮೀಪಿಸುತ್ತಿರುವುದನ್ನು ನೋಡಿದ ಆಕೆ ಹಳಿಗಳ ಕಡೆಗೆ ಹೋದಳು. ಅಷ್ಟರಲ್ಲೇ ಅವರ 7 ವರ್ಷದ ಮಗಳು ಟ್ವಿಂಕಲ್ ಓಡಿ ಬಂದು ಆಕೆಯನ್ನು ಹಿಡಿದುಕೊಂಡಳು. ಆ ಬಾಲಕಿ ಜೋರಾಗಿ ಕೂಗುತ್ತಿದ್ದಳು “ಅಮ್ಮ, ಬೇಡಮ್ಮಾ, ಸಾಯೋದು ಬೇಡಮ್ಮ” ಎಂದು ಅಳುತ್ತಿದ್ದಳು. ಅಮ್ಮನನ್ನು ಹಳಿಯಿಂದ ಹಿಂದಕ್ಕೆ ಎಳೆಯಲು ಪ್ರಯತ್ನಿಸುತ್ತಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆಕೆಯ ಕೂಗು ಕೇಳಿ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ಸ್ಥಳಕ್ಕೆ ಧಾವಿಸಿದರು. ಆ ಮಹಿಳೆಯನ್ನು ರಕ್ಷಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:10 pm, Tue, 17 March 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ