ದೇಶದಲ್ಲಿ ಶೇ.75ಕ್ಕೂ ಹೆಚ್ಚು ವಯಸ್ಕರು ಕೊವಿಡ್​ 19 ಲಸಿಕೆ ಸಂಪೂರ್ಣ ಡೋಸ್​ ಪಡೆದವರು; ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಭಾರತದಲ್ಲಿ ಶೇ.75ರಷ್ಟು ವಯಸ್ಕರಿಗೆ ಎರಡೂ ಡೋಸ್​ ಲಸಿಕೆ ನೀಡಿಕೆಯಾಗಿದೆ.  ಸಬ್​ ಕಾ ಸಾಥ್, ಸಬ್​ ಕಾ ಪ್ರಯಾಸ್​ ಮಂತ್ರದಡಿ ಈ ಸಾಧನೆ ಸಾಧ್ಯವಾಗಿದೆ. ಕೊರೊನಾ ವೈರಸ್​ ವಿರುದ್ಧ ಹೋರಾಟದಲ್ಲಿ ನಾವು ಇನ್ನಷ್ಟು ಪ್ರಬಲರಾಗಿದ್ದೇವೆ ಎಂದು ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಶೇ.75ಕ್ಕೂ ಹೆಚ್ಚು ವಯಸ್ಕರು ಕೊವಿಡ್​ 19 ಲಸಿಕೆ ಸಂಪೂರ್ಣ ಡೋಸ್​ ಪಡೆದವರು; ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
| Updated By: Lakshmi Hegde

Updated on:Jan 30, 2022 | 12:03 PM

ಭಾರತದಲ್ಲಿ ಶೇ.75ರಷ್ಟು ವಯಸ್ಕರು ಪೂರ್ಣಪ್ರಮಾಣದ ಲಸಿಕೆ ಪಡೆದಿದ್ದಾರೆ (ಎರಡೂ ಡೋಸ್​) ಎಂದು ಇಂದು ಕೇಂದ್ರ ಆರೋಗ್ಯ ಇಲಾಖೆ ಸಚಿವ ಮನ್​ಸುಖ್​ ಮಾಂಡವಿಯಾ ತಿಳಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಟ್ವೀಟ್ ಮಾಡಿ ದೇಶದ ಜನರಿಗೆ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ ಶೇ.75ರಷ್ಟು ವಯಸ್ಕರು ಕೊರೊನಾ ವೈರಸ್​ ಲಸಿಕೆ(Corona Vaccination)ಯನ್ನು ಸಂಪೂರ್ಣವಾಗಿ ಪಡೆದಿದ್ದಾರೆ. ಇಂಥ ಒಂದು ಮಹತ್ವದ ಮೈಲಿಗಲ್ಲು ಸಾಧಿಸಲು ಸಹಾಯ ಮಾಡಿದ ಎಲ್ಲ ನಾಗರಿಕರಿಗೂ ಧನ್ಯವಾದಗಳು. ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಲು ಪ್ರಯತ್ನಿಸಿದ ಎಲ್ಲರಿಗೂ ಇದು ಹೆಮ್ಮೆಯ ವಿಚಾರ ಎಂದು ಪ್ರಧಾನಿ ಮೋದಿ ಟ್ವೀಟ್​ (PM Modi Tweet) ಮಾಡಿದ್ದಾರೆ. 

ಭಾರತದಲ್ಲಿ ಶೇ.75ರಷ್ಟು ವಯಸ್ಕರಿಗೆ ಎರಡೂ ಡೋಸ್​ ಲಸಿಕೆ ನೀಡಿಕೆಯಾಗಿದೆ.  ಸಬ್​ ಕಾ ಸಾಥ್, ಸಬ್​ ಕಾ ಪ್ರಯಾಸ್​ ಮಂತ್ರದಡಿ ಈ ಸಾಧನೆ ಸಾಧ್ಯವಾಗಿದೆ. ಕೊರೊನಾ ವೈರಸ್​ ವಿರುದ್ಧ ಹೋರಾಟದಲ್ಲಿ ನಾವು ಇನ್ನಷ್ಟು ಪ್ರಬಲರಾಗಿದ್ದೇವೆ. ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸುವ ಜತೆ, ಕೊರೊನಾ ಲಸಿಕೆ ಅಭಿಯಾನವನ್ನು ಇನ್ನಷ್ಟು ವೇಗಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಇಂದು ಹಿಂದಿಯಲ್ಲಿ ಟ್ವೀಟ್​ ಮಾಡಿದ್ದರು. ಅದನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ, ದೇಶದ ಜನತೆಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ,  ಕಳೆದ 24ಗಂಟೆಯಲ್ಲಿ 62 ಸಾವಿರಕ್ಕೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಒಟ್ಟಾರೆಯಾಗಿ 165.70 ಕೋಟಿ ಡೋಸ್​​​ ಲಸಿಕೆಯನ್ನು ಇದುವರೆಗೆ ನೀಡಲಾಗಿದೆ ಎಂದು ಹೇಳಿದೆ. ಕೊರೊನಾ ವಿರುದ್ಧ ಲಸಿಕೆ ನೀಡಿಕೆ 2021ರ ಜನವರಿ 16ರಂದು ಪ್ರಾರಂಭವಾಗಿದೆ. ಹಾಗೇ, ಈ ಬಾರಿ ಜನವರಿ 3ರಿಂದ 15-18ವರ್ಷದವರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇನ್ನೊಂದೆಡೆ ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರಿಗೆ ಮತ್ತು 60ವರ್ಷ ಮೇಲ್ಪಟ್ಟು ಇತರ ರೋಗಗಳಿಂದ ಬಳಲುತ್ತಿರುವವರಿಗೆ ಕೊರೊನಾ ಲಸಿಕೆ ಬೂಸ್ಟರ್​ ಡೋಸ್​ ನೀಡಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ; ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ಮಾಡಿದ ಸಿಎಂ ಬೊಮ್ಮಾಯಿ

Published On - 11:56 am, Sun, 30 January 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ