ಭಾರತದಲ್ಲಿ ಶೇ.75ರಷ್ಟು ವಯಸ್ಕರು ಪೂರ್ಣಪ್ರಮಾಣದ ಲಸಿಕೆ ಪಡೆದಿದ್ದಾರೆ (ಎರಡೂ ಡೋಸ್) ಎಂದು ಇಂದು ಕೇಂದ್ರ ಆರೋಗ್ಯ ಇಲಾಖೆ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಟ್ವೀಟ್ ಮಾಡಿ ದೇಶದ ಜನರಿಗೆ ಕೃತಜ್ಞತೆ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ ಶೇ.75ರಷ್ಟು ವಯಸ್ಕರು ಕೊರೊನಾ ವೈರಸ್ ಲಸಿಕೆ(Corona Vaccination)ಯನ್ನು ಸಂಪೂರ್ಣವಾಗಿ ಪಡೆದಿದ್ದಾರೆ. ಇಂಥ ಒಂದು ಮಹತ್ವದ ಮೈಲಿಗಲ್ಲು ಸಾಧಿಸಲು ಸಹಾಯ ಮಾಡಿದ ಎಲ್ಲ ನಾಗರಿಕರಿಗೂ ಧನ್ಯವಾದಗಳು. ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಲು ಪ್ರಯತ್ನಿಸಿದ ಎಲ್ಲರಿಗೂ ಇದು ಹೆಮ್ಮೆಯ ವಿಚಾರ ಎಂದು ಪ್ರಧಾನಿ ಮೋದಿ ಟ್ವೀಟ್ (PM Modi Tweet) ಮಾಡಿದ್ದಾರೆ.
75% of all adults are fully vaccinated.
Congratulations to our fellow citizens for this momentous feat.
Proud of all those who are making our vaccination drive a success. https://t.co/OeCJddtAL8
— Narendra Modi (@narendramodi) January 30, 2022
ಭಾರತದಲ್ಲಿ ಶೇ.75ರಷ್ಟು ವಯಸ್ಕರಿಗೆ ಎರಡೂ ಡೋಸ್ ಲಸಿಕೆ ನೀಡಿಕೆಯಾಗಿದೆ. ಸಬ್ ಕಾ ಸಾಥ್, ಸಬ್ ಕಾ ಪ್ರಯಾಸ್ ಮಂತ್ರದಡಿ ಈ ಸಾಧನೆ ಸಾಧ್ಯವಾಗಿದೆ. ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ನಾವು ಇನ್ನಷ್ಟು ಪ್ರಬಲರಾಗಿದ್ದೇವೆ. ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸುವ ಜತೆ, ಕೊರೊನಾ ಲಸಿಕೆ ಅಭಿಯಾನವನ್ನು ಇನ್ನಷ್ಟು ವೇಗಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಇಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು. ಅದನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ, ದೇಶದ ಜನತೆಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಕಳೆದ 24ಗಂಟೆಯಲ್ಲಿ 62 ಸಾವಿರಕ್ಕೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಒಟ್ಟಾರೆಯಾಗಿ 165.70 ಕೋಟಿ ಡೋಸ್ ಲಸಿಕೆಯನ್ನು ಇದುವರೆಗೆ ನೀಡಲಾಗಿದೆ ಎಂದು ಹೇಳಿದೆ. ಕೊರೊನಾ ವಿರುದ್ಧ ಲಸಿಕೆ ನೀಡಿಕೆ 2021ರ ಜನವರಿ 16ರಂದು ಪ್ರಾರಂಭವಾಗಿದೆ. ಹಾಗೇ, ಈ ಬಾರಿ ಜನವರಿ 3ರಿಂದ 15-18ವರ್ಷದವರಿಗೂ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಇನ್ನೊಂದೆಡೆ ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರಿಗೆ ಮತ್ತು 60ವರ್ಷ ಮೇಲ್ಪಟ್ಟು ಇತರ ರೋಗಗಳಿಂದ ಬಳಲುತ್ತಿರುವವರಿಗೆ ಕೊರೊನಾ ಲಸಿಕೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ.
ಇದನ್ನೂ ಓದಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ; ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ಮಾಡಿದ ಸಿಎಂ ಬೊಮ್ಮಾಯಿ
Published On - 11:56 am, Sun, 30 January 22