75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ

ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

75th Indian Independence Day: ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ, ಗಗನದಲ್ಲಿ ಹಾರಿದ ತ್ರಿವರ್ಣ ಧ್ವಜ
Follow us
TV9 Web
| Updated By: ಆಯೇಷಾ ಬಾನು

Updated on:Aug 15, 2021 | 7:53 AM

ದೆಹಲಿ: ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ(75th Indian Independence Day) ಸಂಭ್ರಮಾಚರಣೆ ಮನೆ ಮಾಡಿದೆ. ದೇಶದಲ್ಲಿ ‘ಆಜಾದಿ ಕಾ ಅಮೃತ್ ಮಹೋತ್ಸವ್’(Azadi Ka Amrit Mahotsav) ಆಚರಿಸುತ್ತ ಈ ದಿನಕ್ಕೆ ಕಾರಣರಾದವರನ್ನು ನೆನೆದು ಭಕ್ತಿ, ದೇಶ ಪ್ರೇಮವನ್ನು ಮನ-ಮೈ ತುಂಬಿಕೊಳ್ಳುತ್ತಿದ್ದಾರೆ. ಸದ್ಯ ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿಯವರಿಂದ(Narendra Modi) ಧ್ವಜಾರೋಹಣ ಕಾರ್ಯ ನೆರವೇರಿದೆ. ಹಾಗೂ ಧ್ವಜಾರೋಹಣ ವೇಳೆ ಸೇನಾ ವಿಮಾನಗಳಿಂದ ಹೂಮಳೆ ಸುರಿಸುವ ಮೂಲಕ ವಾಯುಸೇನೆ ಗೌರವ ಸಲ್ಲಿಸಿದೆ.

ಈ ಬಾರಿ ಮುಖ್ಯ ಅತಿಥಿಯಾಗಿ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾಗೆ ಆಹ್ವಾನಿಸಲಾಗಿದೆ. ಒಲಿಂಪಿಕ್ಸ್‌ನಲ್ಲಿ ಭಾಗಿಯಾಗಿದ್ದ ಎಲ್ಲಾ ಕ್ರೀಡಾಪಟುಗಳು, ತರಬೇತಿದಾರರು, ಸಿಬ್ಬಂದಿಗೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಜೊತೆಗೆ ಕೊರೊನಾ ವಾರಿಯರ್ಸ್‌ಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಮೋದಿ ದೇಶದ ಜನತೆಗೆ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಈ ವರ್ಷದ ‘ಆಜಾದಿ ಕಾ ಅಮೃತ್ ಮಹೋತ್ಸವ’ ದೇಶದ ಜನರಲ್ಲಿ ಹೊಸ ಶಕ್ತಿ, ನವಚೈತನ್ಯ ತುಂಬಲಿ ಎಂದು ಹಾರೈಸಿದ್ದಾರೆ.

ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ದೆಹಲಿಯ ಕೆಂಪುಕೋಟೆಯಲ್ಲಿಂದು ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಕಾರ್ಯಕ್ರಮ ಇರುವುದರಿಂದ ದೆಹಲಿ ಕೆಂಪುಕೋಟೆ ಸುತ್ತ ಮುತ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಸುಮಾರು 5,000 ಸಿಬ್ಬಂದಿ ನಿಯೋಜನೆ, NSG ಸ್ನೈಪರ್‌ಗಳು, ಕಮಾಂಡೋಗಳು, ಎತ್ತರದ ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರಮುಖ ಸ್ಥಳಗಳಲ್ಲಿ ಭದ್ರತಾ ತುಕಡಿ ನಿಯೋಜಿಸಲಾಗಿದೆ. ದೆಹಲಿ ಕೆಂಪುಕೋಟೆಯ ಸುತ್ತ ಖಾಕಿ ಸರ್ಪಗಾವಲು ಹಾಕಲಾಗಿದೆ. 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಡಿಟೆಕ್ಟರ್ ರಾಡಾರ್, ಕೆಂಪುಕೋಟೆ ಸುತ್ತ 350ಕ್ಕೂ ಹೆಚ್ಚು ಸಿಸಿ ಕ್ಯಾಮರಾ, ಹಾಗೂ ಸಿಸಿ ಕ್ಯಾಮರಾ ದೃಶ್ಯ ನಿಗಾವಹಿಸಲು ಕೆಂಪುಕೋಟೆ ಬಳಿಯೇ 2 ಕಂಟ್ರೋಲ್ ರೂಂ ಓಪನ್, ಕೆಂಪುಕೋಟೆಯ ಮುಖ್ಯದ್ವಾರದಲ್ಲಿ ಕೆಂಪುಕೋಟೆ ಆವರಣ ಕಾಣದಂತೆ ಬೃಹತ್ ಕಂಟೇನರ್ ಗೋಡೆ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ರಚಿತಾ ರಾಮ್​ ಬಗ್ಗೆ ಕೆಟ್ಟ ಕಮೆಂಟ್​: ಫೈಟರ್​ ವಿವೇಕ್​ ಸಾವಿನ ಕುರಿತು ಮೌನ ಮುರಿದ ‘ಡಿಂಪಲ್​ ಕ್ವೀನ್​’

Published On - 7:44 am, Sun, 15 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ