ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಅಪಘಾತ; ಬಸ್​ಗಳು ಡಿಕ್ಕಿ ಹೊಡೆದು 8 ಜನ ಸಾವು

Uttar Pradesh News: ಡಬಲ್ ಡೆಕ್ಕರ್ ಬಸ್​​ಗಳೆರಡೂ ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು. ಈ ವೇಳೆ ಮುಂಜಾನೆ ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ್ ಪುರ್ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.

ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಅಪಘಾತ; ಬಸ್​ಗಳು ಡಿಕ್ಕಿ ಹೊಡೆದು 8 ಜನ ಸಾವು
ಉತ್ತರ ಪ್ರದೇಶದಲ್ಲಿ ಬಸ್ ಅಪಘಾತ
TV9kannada Web Team

| Edited By: Sushma Chakre

Jul 25, 2022 | 8:51 AM

ಲಕ್ನೋ: ಉತ್ತರ ಪ್ರದೇಶದ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇನಲ್ಲಿ ( Purvanchal expressway) ಇಂದು ಮುಂಜಾನೆ ಡಬಲ್ ಡೆಕ್ಕರ್ ಬಸ್‌ಗಳು ಡಿಕ್ಕಿ ಹೊಡೆದು, ಭೀಕರ ಅಪಘಾತ (Bus Accident) ಸಂಭವಿಸಿದೆ. ಈ ದುರಂತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಬಲ್ ಡೆಕ್ಕರ್ ಬಸ್​​ಗಳೆರಡೂ ಬಿಹಾರದಿಂದ ದೆಹಲಿಗೆ ತೆರಳುತ್ತಿದ್ದವು. ಈ ವೇಳೆ ಮುಂಜಾನೆ ಅಪಘಾತ ಸಂಭವಿಸಿದೆ. ಉತ್ತರ ಪ್ರದೇಶದ ಲೋನಿ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣ್ ಪುರ್ ಗ್ರಾಮದ ಬಳಿ ಈ ಭೀಕರ ಅಪಘಾತದ ಘಟನೆ ನಡೆದಿದೆ.

ಇದನ್ನೂ ಓದಿ: Accident: ಆಂಧ್ರ ಪ್ರದೇಶದಲ್ಲಿ ಅಪಘಾತ; ಬೆಂಗಳೂರಿನ ಇಬ್ಬರು ಪೊಲೀಸ್ ಸಿಬ್ಬಂದಿ, ಚಾಲಕ ಸಾವು

‘ಲೋನಿ ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಎರಡೂ ಬಸ್‌ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್‌ನಿಂದ ದೆಹಲಿಗೆ ಹೋಗುತ್ತಿದ್ದವು. ಪೊಲೀಸರು ಮತ್ತು ರಕ್ಷಣಾ ತಂಡವು ಸ್ಥಳದಲ್ಲಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಾಳುಗಳನ್ನು ಸಿಎಚ್‌ಸಿ ಹೈದರ್‌ಗಢ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಲಕ್ನೋದ ಟ್ರಾಮಾ ಸೆಂಟರ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada