ಛತ್ತೀಸ್‌ಗಢದ ಬಿಜಾಪುರದಲ್ಲಿ 8 ನಕ್ಸಲರ ಎನ್‌ಕೌಂಟರ್
ಛತ್ತೀಸ್‌ಗಢದ ಬಿಜಾಪುರದಲ್ಲಿ ನಕ್ಸಲರು ಐಇಡಿ ಬಳಸಿ ತಮ್ಮ ವಾಹನವನ್ನು ಸ್ಫೋಟಿಸಿದ್ದರಿಂದ 8 ಜಿಲ್ಲಾ ಮೀಸಲು ಪಡೆ (DRG) ಯೋಧರು ಮತ್ತು ಒಬ್ಬ ಚಾಲಕ ಪ್ರಾಣ ಕಳೆದುಕೊಂಡಿದ್ದರು. ಇದಾದ ನಂತರ ಜನವರಿ 6ರಂದು ಗೃಹ ಸಚಿವ ಅಮಿತ್ ಶಾ 2026ರ ವೇಳೆಗೆ ನಕ್ಸಲಿಸಂ ಅನ್ನು ಕೊನೆಗೊಳಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಅದಕ್ಕೆ ಅನುಗುಣವಾಗಿ ಈ ಬೆಳವಣಿಗೆ ನಡೆದಿದೆ. ಇಂದು ಛತ್ತೀಸ್ಗಢದಲ್ಲಿ 8 ನಕ್ಸಲರನ್ನು ಎನ್‌ಕೌಂಟರ್ ಮಾಡಲಾಗಿದೆ.

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಶನಿವಾರ) ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ 8 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ಚಕಮಕಿ ಮುಂದುವರೆದಿದೆ. 10 ನಕ್ಸಲರು ಪೊಲೀಸರ ಮುಂದೆ ಶರಣಾದ ಒಂದು ದಿನದ ಬಳಿಕ ಬಿಜಾಪುರದಲ್ಲಿ ಈ ಎನ್‌ಕೌಂಟರ್ ನಡೆದಿದೆ.
ಗಂಗಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಇಂದು ಬೆಳಿಗ್ಗೆ 8.30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ಅಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ ವಿರೋಧಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜಿಲ್ಲಾ ಮೀಸಲು ಪಡೆ (DRG), ವಿಶೇಷ ಕಾರ್ಯಪಡೆ (STF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಅದರ ಗಣ್ಯ ಘಟಕವಾದ CoBRA (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಪಶ್ಚಿಮ ಬಸ್ತಾರ್ ವಿಭಾಗದ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ವರದಿಗಳ ನಂತರ ಶುಕ್ರವಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.
Chhattisgarh: Eight Naxalites killed in encounter with security forces in Bijapur district
Read @ANI Story | https://t.co/nW25kXQKmt#Naxals #SecurityForces #Bijapur #Chhattisgarh pic.twitter.com/f8bsSwLih5
— ANI Digital (@ani_digital) February 1, 2025
ಇದನ್ನೂ ಓದಿ: ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರ ಪೊಲೀಸ್ ಕಸ್ಟಡಿ ನಾಳೆ ಅಂತ್ಯ; ಮುಂದೇನು?
ಈ ಜಿಲ್ಲೆಯಲ್ಲಿ ಒಟ್ಟು 6 ಲಕ್ಷ ರೂ. ಬಹುಮಾನ ಹೊಂದಿದ್ದ 10 ನಕ್ಸಲರು ಶರಣಾದ ಒಂದು ದಿನದ ನಂತರ ಈ ಎನ್‌ಕೌಂಟರ್ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ