AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ ಓದಿದ್ದು 8ನೇ ಕ್ಲಾಸ್ ಆದ್ರೂ, ಐಪಿಎಸ್ ಅಧಿಕಾರಿ ಎಂದು ಪೋಸ್ ಕೊಟ್ಟು 12ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ

ಓದಿದ್ದು 8ನೇ ತರಗತಿಯಾಗಿದ್ದರೂ ಐಪಿಎಸ್ ಅಧಿಕಾರಿ ಎಂದು ಸುಳ್ಳು ಹೇಳಿ ಮಹಿಳೆಯರಿಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 8ಕ್ಕೂ ಹೆಚ್ಚು ಮಹಿಳೆಯರ ಬಳಿ ಲಕ್ಷ ಲಕ್ಷ ರೂಪಾಯಿ ವಸೂಲಿ ಮಾಡಿ ವಂಚಿಸಿದ್ದಾನೆ ಎಂದು ದೆಹಲಿ ಪೊಲೀಸರು  ತಿಳಿಸಿದ್ದಾರೆ.

ಆತ ಓದಿದ್ದು 8ನೇ ಕ್ಲಾಸ್ ಆದ್ರೂ, ಐಪಿಎಸ್ ಅಧಿಕಾರಿ ಎಂದು ಪೋಸ್ ಕೊಟ್ಟು 12ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ
Vikas
TV9 Web
| Edited By: |

Updated on: Dec 20, 2022 | 8:13 AM

Share

ಓದಿದ್ದು 8ನೇ ತರಗತಿಯಾಗಿದ್ದರೂ ಐಪಿಎಸ್ ಅಧಿಕಾರಿ ಎಂದು ಸುಳ್ಳು ಹೇಳಿ ಮಹಿಳೆಯರಿಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 8ಕ್ಕೂ ಹೆಚ್ಚು ಮಹಿಳೆಯರ ಬಳಿ ಲಕ್ಷ ಲಕ್ಷ ರೂಪಾಯಿ ವಸೂಲಿ ಮಾಡಿ ವಂಚಿಸಿದ್ದಾನೆ ಎಂದು ದೆಹಲಿ ಪೊಲೀಸರು  ತಿಳಿಸಿದ್ದಾರೆ.  ವಿಕಾಸ್ ಗೌತಮ್ ಎಂಬಾತ ವಿಕಾಸ್ ಯಾದವ್ ಹೆಸರಿನಲ್ಲಿ ಟ್ವಿಟ್ಟರ್‌ (Twitter), ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ನಲ್ಲಿ ನಕಲಿ ಪ್ರೊಫೈಲ್‌ಗಳನ್ನು ಸೃಷ್ಟಿಸಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆತ ತನ್ನ ಪ್ರೊಫೈಲ್ ಅನ್ನು ಅಧಿಕೃತವಾಗಿ ಕಾಣುವಂತೆ ಮಾಡಲು, ಆತ ಕೆಂಪು ದೀಪ ಹೊಂದಿರುವ ಸರ್ಕಾರಿ ಕಾರಿನೊಂದಿಗೆ ಪೋಸ್ ನೀಡಿದ್ದ. ದೆಹಲಿಯ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯೆಯೊಬ್ಬರಿಗೆ ಮೋಸ ಮಾಡಿದಾಗ ವಂಚನೆ ಬೆಳಕಿಗೆ ಬಂದಿದೆ. ಮೊದಲು ಪರಿಚಯ ಮಾಡಿಕೊಂಡ ಈತ ಆನ್​ಲೈನ್​ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದಾನೆ, ನಂತರ ವೈದ್ಯೆ ಬಳಿಯಿಂದ 25 ಸಾವಿರ ರೂ. ಲಪಟಾಯಿಸಿದ್ದಾನೆ.

ನಂತರ ವೈದ್ಯೆಗೆ ತಾವು ಮೋಸ ಹೋಗಿರುವುದು ತಿಳಿದುಬಂದಿದೆ. ಆತ ಬೆದರಿಕೆ ಹಾಕಿದ ಹೊರತಾಗಿಯೂ ವೈದ್ಯೆ ಪೊಲೀಸರಲ್ಲಿ ದೂರು ದಾಖಲು ಮಾಡಿದಾಗ ಆತ ಸಿಕ್ಕಿಬಿದ್ದಿದ್ದು, 12ಕ್ಕೂ ಅಧಿಕ ಮಹಿಳೆಯರಿಗೆ ಮೋದ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ಮತ್ತಷ್ಟು ಓದಿ: Matrimonial App fraud: ಮ್ಯಾಟ್ರಿಮೋನಿ ಆ್ಯಪ್ ವಂಚನೆ: ಕೇರಳ ಕುಟ್ಟಿಗಳ ಮಾತಿಗೆ ಮರುಳಾದ ಶಿಕ್ಷಕ, ಹಣದ ಜೊತೆಗೆ ಕೆಲಸವೂ ಕಳೆದುಕೊಂಡ

ಅಂತಿಮವಾಗಿ, ಅವನು ವಂಚಕನೆಂದು ವೈದ್ಯರ ದೂರಿನ ಆಧಾರದ ಮೇಲೆ, ಪೊಲೀಸರು ತಾಂತ್ರಿಕ ಕಣ್ಗಾವಲು ಆರಂಭಿಸಿ, ಅಂತಿಮವಾಗಿ ಆತನನ್ನು ಬಂಧಿಸಿದರು. ಈ ವೇಳೆ, ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ಹತ್ತಾರು ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಕಾಸ್ ಗೌತಮ್ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ ಎಂದು ದೆಹಲಿ ಪೊಲೀಸ್ ಅಧಿಕಾರಿ ಹರಿಂದರ್ ಸಿಂಗ್ ಹೇಳಿದ್ದು, ಆರೋಪಿ 8 ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೆಲ್ಡಿಂಗ್ ಕೋರ್ಸ್ ಮಾಡಿದ್ದಾರೆ. ವಿಕಾಸ್, ಉತ್ತರ ದೆಹಲಿಯ ಮುಖರ್ಜಿ ನಗರದ ರೆಸ್ಟೋರೆಂಟ್​ನಲ್ಲಿಯೂ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ತಾನು ಕೆಲಸ ಮಾಡುತ್ತಿದ್ದ ಪ್ರದೇಶದಲ್ಲಿ ನಾಗರಿಕ ಸೇವೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು, ಅವರನ್ನು ನೋಡಿ ಪ್ರಭಾವಗೊಂಡು ಐಪಿಎಸ್ ಅಧಿಕಾರಿಯಂತೆ ನಟಿಸುವಂತೆ ಆಲೋಚನೆ ಮಾಡಿದನು ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು