ತಮಿಳುನಾಡಿನ ಶಿವಕಾಶಿಯ ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು

|

Updated on: May 09, 2024 | 5:36 PM

ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 10 ಮಂದಿಗೆ ಗಂಭೀರ ಗಾಯಗಳಾಗಿವೆ. ಇದೀಗ ಎಲ್ಲರೂ ಶಿವಕಾಶಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ತಮಿಳುನಾಡಿನ ಶಿವಕಾಶಿಯ ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು
Follow us on

ಶಿವಕಾಶಿ, ಮೇ.9: ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 10 ಮಂದಿಗೆ ಗಂಭೀರ ಗಾಯಗಳಾಗಿವೆ. ಇದೀಗ ಎಲ್ಲರೂ ಶಿವಕಾಶಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಇದೀಗ ಪಟಾಕಿ ಕಾರ್ಖಾನೆಯಲ್ಲಿನ ಬೆಂಕಿಯನ್ನು ನಂದಿಸಲಾಗುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿರುದುನಗರ ಜಿಲ್ಲೆಯ ಶಿವಕಾಶಿಯಲ್ಲಿ ನಿರ್ಜನ ಸ್ಥಳದಲ್ಲಿ ಈ ಪಟಾಕಿ ಕಾರ್ಖಾನೆ ಇದೆ. ಪ್ರತಿನಿತ್ಯದಂತೆ ಗುರುವಾರವೂ ಕಾರ್ಖಾನೆಯಲ್ಲಿ ಪಟಾಕಿ ತಯಾರಿಸುವ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದರು. ಅಷ್ಟರಲ್ಲಿ ಇದ್ದಕ್ಕಿದ್ದಂತೆ ಕಾರ್ಖಾನೆಯಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡಿದೆ.

ಸ್ಫೋಟ ಸಂಭವಿಸಿದ ತಕ್ಷಣ ಕಾರ್ಖಾನೆಯೊಳಗೆ ಕಿರುಚಾಟ ಕೇಳಿಬಂದಿದೆ. ಅಕ್ಕಪಕ್ಕದಲ್ಲಿದ್ದ ಜನರು ಇವರ ಕಿರುಚಾಟ ನೋಡಿ ತಕ್ಷಣ ಪೊಲೀಸರಿಗೆ ಫೋನ್​​​ ಮಾಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕುಲ್ಗಾಮ್​ನಲ್ಲಿ ಮತ್ತೋರ್ವ ಉಗ್ರನ ಎನ್​ಕೌಂಟರ್; ಮುಂದುವರಿದ ಕಾರ್ಯಾಚರಣೆ

ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಕಾರ್ಖಾನೆಯೊಳಗೆ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಇಲ್ಲಿಯವರೆಗೆ ಅಗ್ನಿಶಾಮಕ ದಳದ ತಂಡವು ಒಟ್ಟು ಎಂಟು ಮೃತದೇಹಗಳನ್ನು ಪತ್ತೆ ಮಾಡಿದ್ದು, ಅದರಲ್ಲಿ ಐದು ಮಹಿಳೆಯರು ಮತ್ತು ಮೂವರು ಪುರುಷರ ಮೃತದೇಹಗಳು ಎಂದು ಗುರುತಿಸಲಾಗಿದೆ. ಇನ್ನು ಕೆಲವರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:22 pm, Thu, 9 May 24