AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನವ್ರತ ಅಂತ್ಯಗೊಳಿಸಿ ‘ರಾಮ’ ಎನ್ನಲಿದ್ದಾರೆ ಮೌನ ಮಾತಾ

85 ವರ್ಷದ ಮಹಿಳೆ ರಾಮನಿಗಾಗಿ ಕಾದ ಶಬರಿಯಂತೆ ರಾಮ ಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನ ವ್ರತವನ್ನು ಅಂತ್ಯಗೊಳಿಸಿ ‘ರಾಮ’ನ ಹೆಸರು ಉಚ್ಛರಿಸಲಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಕನಸು ಜನವರಿ 22 ರಂದು ನನಸಾದ ಬಳಿಕ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ಮೂರು ದಶಕಗಳಿಂದ ನಡೆಯುತ್ತಿರುವ ತಮ್ಮ ಮೌನವ್ರತವನ್ನು ಮುರಿಯಲಿದ್ದಾರೆ.

ರಾಮಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನವ್ರತ ಅಂತ್ಯಗೊಳಿಸಿ ‘ರಾಮ’ ಎನ್ನಲಿದ್ದಾರೆ ಮೌನ ಮಾತಾ
ಸರಸ್ವತಿ ದೇವಿImage Credit source: Aaj Tak
ನಯನಾ ರಾಜೀವ್
|

Updated on: Jan 10, 2024 | 9:20 AM

Share

85 ವರ್ಷದ ಮಹಿಳೆ ರಾಮನಿಗಾಗಿ ಕಾದ ಶಬರಿಯಂತೆ ರಾಮ ಮಂದಿರ ಉದ್ಘಾಟನೆಯಂದು 30 ವರ್ಷಗಳ ಮೌನ ವ್ರತವನ್ನು ಅಂತ್ಯಗೊಳಿಸಿ ‘ರಾಮ’ನ ಹೆಸರು ಉಚ್ಛರಿಸಲಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡುವ ಕನಸು ಜನವರಿ 22 ರಂದು ನನಸಾದ ಬಳಿಕ ಜಾರ್ಖಂಡ್‌ನ 85 ವರ್ಷದ ಮಹಿಳೆಯೊಬ್ಬರು ಮೂರು ದಶಕಗಳಿಂದ ನಡೆಯುತ್ತಿರುವ ತಮ್ಮ ಮೌನವ್ರತವನ್ನು ಮುರಿಯಲಿದ್ದಾರೆ.

1992ರಲ್ಲಿ ಬಾಬರಿ ಮಸೀದಿ ಧ್ವಂಸವಾದ ದಿನ ಸರಸ್ವತಿ ದೇವಿ ರಾಮ ಮಂದಿರ ಉದ್ಘಾಟನೆ ವೇಳೆ ಮಾತ್ರ ಮಾತನಾಡುವುದಾಗಿ ಪ್ರತಿಜ್ಞೆ ಮಾಡಿದ್ದರು. ಧನಬಾದ್ ನಿವಾಸಿ ಸರಸ್ವತಿ ದೇವಿ ಸೋಮವಾರ ರಾತ್ರಿ ರೈಲಿನಲ್ಲಿ ಉತ್ತರ ಪ್ರದೇಶದ ಅಯೋಧ್ಯೆಗೆ ಮೌನಿ ಮಾತಾ ಮಂದಿರದ ಉದ್ಘಾಟನೆ ನೋಡಲು ತೆರಳಲಿದ್ದಾರೆ.

ಅವರು ಸಂಕೇತ ಭಾಷೆ ಅಥವಾ ಬರವಣಿಗೆ ಮೂಲಕವೇ ಮಾತನಾಡುತ್ತಾರೆ. 2020 ರವರೆಗೆ, ಅವರು ಪ್ರತಿದಿನ ಮಧ್ಯಾಹ್ನ ಒಂದು ಗಂಟೆ ಮಾತನಾಡುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರದ ಶಂಕುಸ್ಥಾಪನೆ ಮಾಡಿದ ದಿನದಿಂದ ಇಡೀ ದಿನ ಮೌನ ಆಚರಿಸಿದರು.

ಮತ್ತಷ್ಟು ಓದಿ: Ram Mandir Event Invitees:ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ; ಸಮಾರಂಭಕ್ಕೆ ಯಾರಿಗೆಲ್ಲ ಆಹ್ವಾನವಿದೆ?

ದೇವಿಯ ಕಿರಿಯ ಪುತ್ರ 55 ವರ್ಷದ ಹರೇರಾಮ್ ಅಗರ್ವಾಲ್ ಮಾತನಾಡಿ, 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿ ಧ್ವಂಸವಾದಾಗ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವವರೆಗೆ ಮಾತನಾಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು.

ದೇವಸ್ಥಾನದಲ್ಲಿ ಪ್ರತಿಷ್ಠಾಪನೆಯ ದಿನಾಂಕವನ್ನು ಘೋಷಿಸಿದಾಗಿನಿಂದ ಅವರು ತುಂಬಾ ಸಂತೋಷವಾಗಿದ್ದಾರೆ. ತನ್ನ ಜೀವನವನ್ನು ಭಗವಾನ್ ರಾಮನಿಗೆ ಅರ್ಪಿಸಿದರು ಮತ್ತು ಹೆಚ್ಚಿನ ಸಮಯವನ್ನು ತೀರ್ಥಯಾತ್ರೆಗಳಲ್ಲಿ ಕಳೆದರು ಎಂದು ಕುಟುಂಬ ಸದಸ್ಯರು ಹೇಳುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ