ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ, ವಾರಾಂತ್ಯ ಲಾಕ್ಡೌನ್ ಘೋಷಣೆ
Maharashtra Night Curfew and Weekend Lockdown: ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಸಚಿವ ನವಾಬ್ ಮಲ್ಲಿಕ್ ತಿಳಿಸಿದ್ದಾರೆ.
ಮುಂಬೈ: ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿಗೆ ತಡೆಯೊಡ್ಡಲು ಸಂಪೂರ್ಣ ಮಹಾರಾಷ್ಟ್ರ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್ಡೌನ್ ವಿಧಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕಿನ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.
ಕೇವಲ ಅನಿವಾರ್ಯ ಸೇವೆಗಳು ಮಾತ್ರ ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸಬಹುದು. ಚಿತ್ರಮಂದಿರಗಳು, ಗಾರ್ಡನ್, ಮತ್ತು ಆಟದ ಅಂಗಣಗಳನ್ನು ತೆರೆಯುವಂತಿಲ್ಲ. ಸರ್ಕಾರಿ ಕಚೇರಿಗಳನ್ನು ಅರ್ಧದಷ್ಟು ಸಿಬ್ಬಂದಿಗಳ ಮೂಲಕ ತೆರೆಯಬಹುದು. ಕಟ್ಟಡ ನಿರ್ಮಾಣ, ಮಾರುಕಟ್ಟೆ ಮತ್ತು ಕಾರ್ಖಾನೆಗಳ ಚಟುವಟಿಕೆಗಳು ಕೊರೊನಾ ತಡೆ ಮಾರ್ಗಸೂಚಿಯ ಪ್ರಕಾರ ಕಾರ್ಯನಿರ್ವಹಿಸಬಹುದು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ.
Night curfew will be put in place from 8 pm to 7 am. Only essential services will be permitted. Restaurants are permitted only for take away & parcel services. For offices, employees will have to work from home. Detailed SOP will be released soon:Maharashtra Minister Aslam Shaikh pic.twitter.com/FRcUsZZ89S
— ANI (@ANI) April 4, 2021
ಪುಣೆಯಲ್ಲಿ ಈಗಾಗಲೇ ಜಾರಿಯಾಗಿದೆ ನೈಟ್ ಕರ್ಫ್ಯೂ ಪುಣೆ ಜಿಲ್ಲೆಯಲ್ಲಿ ಏಪ್ರಿಲ್ 3ರಿಂದಲೇ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿತ್ತು. ಪುಣೆ (ಮಹಾರಾಷ್ಟ್ರ) ಡಿವಿಷನಲ್ ಕಮಿಷನರ್ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ, ಬಾರ್, ಹೊಟೇಲ್, ರೆಸ್ಟೋರೆಂಟ್ಗಳು ಏಳು ದಿನಗಳ ಕಾಲ ಕಾರ್ಯನಿರ್ವಹಿಸುವಂತಿಲ್ಲ. ಹೊಟೆಲ್ ಹಾಗೂ ರೆಸ್ಟೋರೆಂಟ್ಗಳಿಂದ ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿದೆ. ಜೊತೆಗೆ, ಧಾರ್ಮಿಕ ಕ್ಷೇತ್ರಗಳು ಕೂಡ 7 ದಿನಗಳ ಕಾಲ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು.
ಮದುವೆ ಹಾಗೂ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸರ್ಕಾರ ತಡೆಯೊಡ್ಡಿದೆ. ಸಾವು ಸಂಭವಿಸಿದಲ್ಲಿ ಕೇವಲ 20 ಮತ್ತು ವಿವಾಹ ಸಮಾರಂಭದಲ್ಲಿ ಕೇವಲ 50 ಜನರು ಸೇರಬಹುದು ಎಂದು ಪುಣೆಯಲಲ್ಲಿ ಏಪ್ರಿಲ್ 3ಕ್ಕೆ ಸೂಚನೆ ನೀಡಲಾಗಿತ್ತು.
ಇದನ್ನೂ ಓದಿ: India Coronavirus Update: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 93,249 ಜನರಿಗೆ ಕೊರೊನಾ ಸೋಂಕು, 513 ಬಲಿ
IPL 2021: ಮುಂಬೈನಲ್ಲಿ ಕೊರೊನಾ ಅಟ್ಟಹಾಸ! ಐಪಿಎಲ್ ಸುಗಮವಾಗಿ ನಡೆಯಲು BCCI ಮುಂದಿವೆ ಈ ನಾಲ್ಕು ಆಯ್ಕೆಗಳು
(8PM to 7AM Night Curfew and Weekend Lockdown announced in Maharashtra amid Covid 19 rise)
Published On - 6:11 pm, Sun, 4 April 21