ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿ, 9 ಜನರ ದುರ್ಮರಣ

|

Updated on: Jun 05, 2020 | 3:15 PM

ಲಕ್ನೋ: ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ 9 ಜನ ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಪ್ರತಾಪ್‌ಗಢ ಬಳಿ ಇಂದು ಬೆಳಿಗ್ಗೆ ನಡೆದಿದೆ. ಜಿಲ್ಲೆಯ ವಾಜಿದ್ಪುರದಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಕಂಟೇನರ್ ಮತ್ತು ಸ್ಕಾರ್ಪಿಯೋ ಕಾರು ಬಲವಾಗಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು, ಒಬ್ಬ ಹುಡುಗ ಕೂಡ ಇದ್ದಾನೆ. ಅಪಘಾತದಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಕ್ನೋಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಇವರೆಲ್ಲರೂ ಹರಿಯಾಣದಿಂದ ಬಿಹಾರಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ. […]

ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿ, 9 ಜನರ ದುರ್ಮರಣ
Follow us on

ಲಕ್ನೋ: ಕಂಟೇನರ್ ಮತ್ತು ಕಾರಿನ ಮಧ್ಯೆ ಡಿಕ್ಕಿಯಾಗಿ 9 ಜನ ಮೃತಪಟ್ಟಿರುವ ಭೀಕರ ಅಪಘಾತ ಉತ್ತರ ಪ್ರದೇಶದ ಪ್ರತಾಪ್‌ಗಢ ಬಳಿ ಇಂದು ಬೆಳಿಗ್ಗೆ ನಡೆದಿದೆ. ಜಿಲ್ಲೆಯ ವಾಜಿದ್ಪುರದಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಕಂಟೇನರ್ ಮತ್ತು ಸ್ಕಾರ್ಪಿಯೋ ಕಾರು ಬಲವಾಗಿ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಮೃತಪಟ್ಟವರಲ್ಲಿ ಮೂವರು ಮಹಿಳೆಯರು, ಒಬ್ಬ ಹುಡುಗ ಕೂಡ ಇದ್ದಾನೆ. ಅಪಘಾತದಲ್ಲಿ ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಲಕ್ನೋಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಇವರೆಲ್ಲರೂ ಹರಿಯಾಣದಿಂದ ಬಿಹಾರಕ್ಕೆ ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ.

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಗ್ರಾಮಸ್ಥರ ಸಹಾಯದಿಂದ ಅಪಘಾತವಾದ ಕಾರಿನಿಂದ ಮೃತ ದೇಹವನ್ನು ಹೊರತೆಗೆಯುತ್ತಿದ್ದಾರೆ. ಅಪಘಾತ ಭೀಕರವಾಗಿದ್ದು, ಸತ್ತವರ ದೇಹಗಳನ್ನು ಕಾರಿನಿಂದ ತೆಗೆಯಲು ಸಾಕಷ್ಟು ತೊಂದರೆಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 10:21 am, Fri, 5 June 20